ಒಟ್ಟು 4 ಕಡೆಗಳಲ್ಲಿ , 3 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಷ್ಟಾದರು ದಯಮಾಡು ಪಂಡರಿನಾಥ ಪಾದ ಮುಟ್ಟಿ ಪ್ರಾರ್ಥಿಪೆನು ಪ ದಾನಧರ್ಮವು ಮಾಡಬೇಕೆಂದು ಮನವಿರೆ ದಾನವಾಂತಕ ಕೃಷ್ಣ ಧನವಿಲ್ಲವಯ್ಯ ಗಾನಲೋಲನೆ ಭಕ್ತಪಾಲ ನಿನ್ನಯ ಪಾದ ಧ್ಯಾನವ ಮಾಳ್ಪರ ಪಾದಧ್ಯಾನ ಕೊಡಿಸುದೇವ 1 ತೀರ್ಥಯಾತ್ರೆಗಳಿಂದ ಪಾರ್ಥಸಾರಥಿ ಕೃಷ್ಣ- ಮೂರ್ತಿ ಸೇವಿಸಲಸಮರ್ಥನಾಗಿರುವೆ ಮಾತು ಮಾತಿಗೆ ಕೃಷ್ಣಗೋವಿಂದ ಮಾಧವ ಶ್ರೀಪತಿ ಶ್ರೀಧರ ಸಲಹೆಂಬ ಸ್ಮರಣೆ 2 ಜ್ಞಾನಿಗಳೊಡನಾಡಿ ಶ್ರೀನಿವಾಸನೆ ನಿನ್ನ ನಾನಾಲೀಲೆಗಳ ಧ್ಯಾನಿಸಲಿಲ್ಲ ಹರಿಯೆ ಜ್ಞಾನಿಗಳರಸ ಭಕ್ತರ ಸುರಧೇನು ಅಜ್ಞಾನಿಗಳಳಿದು ಸುಜ್ಞಾನಜನರ ಸಂಘ 3 ಅಗಣಿತ ಮಹಿಮನೆ ನಿಗಮಗೋಚರ ಕೃಷ್ಣ ಖಗವಾಹನ ಕಂಸಾರಿಯೆ ದೇವ ಹಗಲು ಇರುಳು ನಿನ್ನ ಬಗೆಬಗೆ ಸ್ತುತಿಪರ ಪಾದಗಳು ಸೇವಿಪ ಪರಮಲಾಭವನು 4 ಕರೆ ಕರೆಗೊಳಿಸದೆ ಕಡಲಶಯನನೆ ಎನ್ನ ತೊಡರುಗಳನೆ ಬಿಡಿಸೆಂದು ಮೊರೆ ಇಡುವೆ ಮಡುವಿನೊಳ್ ಗಜವನುದ್ಧರಿಸಿ ರಕ್ಷಿಸಿದಂಥ ಕಮಲನಾಭ ವಿಠ್ಠಲನೆ ನಿನ್ನ ಸ್ಮರಣೆ 5
--------------
ನಿಡಗುರುಕಿ ಜೀವೂಬಾಯಿ
ಏನಿದ್ದರೇನಯ್ಯ ಜ್ಞಾನವಿಲ್ಲದಿರೆ ಶ್ರೀನಾಥನಂ ನೆನೆಯದಿಹ ಹೀನಮಾನವಗೇ ಪ. ಗುರುವ ಸೇವಿಸಲಿಲ್ಲ ಹರಿಯ ಧ್ಯಾನಿಸಲಿಲ್ಲ ಅರಿತವರ ಸಂಗತಿಯೊಳ್ವೆರಯಲಿಲ್ಲವಲ್ಲಾ 1 ಹರಿಕತೆಯ ಭಕ್ತಿಯೊಳು ಪ್ರಕಟಮಾಡಿಸಲಿಲ್ಲ ಪರಿಪರಿಯ ಭೋಗದಿಂ ಮರುಳಾದೆನಲ್ಲ 2 ಬಂದೇ ದಾನವಿರದ ಧನವೇಕೆ ಪೇಳು ತಿಂದುಂಡು ಮಲಗುವಾನರಜನ್ಮ ಹಾಳು3 ಕರ ಚರಣ ಮೊದಲಾದ ಕರಣಂಗಳಂ ಪಡೆದು ಹರಿಪದವ ಪೊಂದುವಾ ಪರಿಯುಂಟೆ ಪೇಳು 4 ಆನಂದ ಸಾಮ್ರಾಜ್ಯ ನಿನಗಹುದು ಕೇಳು 5
--------------
ನಂಜನಗೂಡು ತಿರುಮಲಾಂಬಾ
ಕನಿಕರವಿಲ್ಲವೆ | ವನರುಹಲೋಚನಾ ಪ ಘನಕೃಪಾಪೂರ್ಣ ನೀನೆನುವುದು ಜಗವೆಲ್ಲಾ ಎನಗದು ನಿಜವೆಂದು ಅರಿವಾಗಲಿಲ್ಲ ಅ.ಪ ವೇದ ಪುರಾಣವ ಓದಿ ತಿಳಿಯಲಿಲ್ಲ ಸಾಧುಸಂತರ ಸೇವೆ ಸಾಧಿಸಲಿಲ್ಲ ಭಾರ ನಾನಾದೆನಲ್ಲ ಆದಿಮೂರುತಿ ನಿನ್ನಾರಾಧನೆ ಮಾಡಲಿಲ್ಲ 1 ಜ್ಞಾನ ಸುಧಾರಸ ಪಾನವ ಮಾಡಲಿಲ್ಲ ದೀನತೆಯೊಳು ನಿನ್ನ ಧ್ಯಾನಿಸಲಿಲ್ಲ ದೀನರ ಸಂಗದಿ ಶ್ವಾನನಂತಾದೆನಲ್ಲ ನಾನು ನನ್ನದು ನಿನ್ನಾಧೀನವಾಗಲು ಇಲ್ಲ 2 ನಿನ್ನ ಬಿಟ್ಟನ್ಯರ ಇನ್ನು ಸೇವಿಪುದಿಲ್ಲ ಅನ್ನ ಪಾನಂಗಳೊಳಿನ್ನಾಸೆಯಿಲ್ಲ ನಿನ್ನ ನಾಮಾಮೃತವನು ಬಿಡುವವನಲ್ಲ ನಿನ್ನವನೆಂದೆನ್ನ ಮನ್ನಿಸೊ ಮಾಂಗಿರೀಶ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬರಿದೆ ಕಾಲವ ಕಳೆದೆ ನರಹರಿಯ ಧ್ಯಾನಿಸದೆ ಪ. ಪರಿಪರಿಯ ಮೋದದಲಿ ಮರುಳನಂದದಿ ಮೆರೆದೇ ಅ.ಪ. ಗುರುವ ಸೇವಿಸಲಿಲ್ಲ ಹರಿಯ ಧ್ಯಾನಿಸಲಿಲ್ಲ ಹಿರಿಯರೊಲಿವಂತುಪಚರಿಸಲಿಲ್ಲ | ಪರಮ ಭಾಗವತರ ಚರಣಕ್ಕೆ ನಾನೊಮ್ಮೆ | ಶಿರಬಾಗಿ ನಮಿಸಿ ಪರಿಚರಿಸಲಿಲ್ಲವಲ್ಲಾ 1 ಇನ್ನೆನಗೆ ಗತಿಯಾರು - ಮನ್ನಿಸುವರದಾರು ಇನ್ನದಾರಲ್ಲಿ ಪೇಳುವೆನೆನ್ನ ದೂರು ನಿನ್ನನೇ ಮೊರೆಹೊಕ್ಕು ನೀನೆ ಗತಿಯೆಂದಿರುವ ಎನ್ನ ಮನ್ನಿಸಲುಬೇಕು ಪನ್ನಶೇಷಗಿರೀಶ 2
--------------
ನಂಜನಗೂಡು ತಿರುಮಲಾಂಬಾ