ಎಲ್ಲಿಗೆ ಪೋದಪೆ ಮಲ್ಲಿಮರ್ಧನ ಕೃಷ್ಣ
ಗೊಲ್ಲಗೋಪಾಲನೀ ಬಲ್ಲೆನಾನಿದನು ಪ.
ದೇವಕಿಯುದರದಿ ಜನಿಸಿ ಯಶೋದೆಯ
ಕುವರನೆಂದೆನಿಸಿ ಮೆರೆದಂಥ ಸಾಹಸಿ 1
ಮಧುರೆಯೊಳುದಿಸಿ ನಂದವ್ರಜದಿ ಗೋವ್ಗಳ ಕಾಯ್ದು
ಮದಿಸಿದಸುರರ ಸದೆವಡೆದ ಧೀರ 2
ಮಾತೆಯ ಮನಕಂದು ಪ್ರೀತಿಪಡಿಸಲೆಂದು
ಮಾತುಲನನೆ ಕೊಂದು ತಾತಗೆ ನೆಲವಿತ್ತ 3
ರುಕ್ಮನ ಭಂಗಿಸಿ ರುಕ್ಮಿಣಿಯನುವರಿಸಿ
ಚಕ್ರಧರ ಕೃಷ್ಣ 4
ತರುಣಿಯ ಮಾನಕಾಯ್ದು ನರಗೆ ಸಾರಥಿಯಾಗಿ
ಧರೆಯಭಾರವೆಲ್ಲ ಪರಿದುಬಂದ ಮಲ್ಲ 5
ವರಶೇಷಗಿರಿದೊರೆ ನಿನಗೆ ನಾ ಹೊರೆಯೆ
ಕರಿ ಧ್ರುವರನೆ ಪೊರೆದ ವರದನೆಂಬುದ ಮರೆಯೆ 6