ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನ ಮಾತಿಗೆ ಮೆಚ್ಚುವನಾವಾವಾ ಪರಾಕು ಎಲೊ ಎಚ್ಚರಿಕೆ ಪ ಎಂತಾಗುವದೆಂದು ನುಡಿಯದಿರಿ ಕಂತುವಿನ ಪಿತ ನಿನಗೆ ನಮೊ ನಮೊ ಬಿನ್ನೈಪೆ ಸಂತು ಧ್ರುವರಾಯನು ಸಂತತ ಇದಕೆ ಸಾಕ್ಷಿ 1 ಒಂದೆ ರೂಪದಲಿ ಪೂಜೆಯಗೊಂಬೆ ಎನಗೆ ಮ ತ್ತೊಂದು ರೂಪಕೆ ಶಕ್ತಿ ಇಲ್ಲೆನ್ನದಿರು ಸಂದೇಹ ಎನಗಿಲ್ಲ ಎಲ್ಲಿದ್ದರು ದೇವ ನಂದನಂದನ ಇದಕೆ ರಾಯ ಬ್ರಾಹ್ಮಣ ಸಾಕ್ಷಿ 2 ಬದಿಯಲಿದ್ದರೆ ಇಷ್ಟೆ ಮುಂದೆ ಬರುವ ಆಪತ್ತು ಒದಗಿ ಕಳೆವೋಪಾಯ ಕಡಿಮೆನ್ನದಿರೊ ಮುದದಿಂದ ನಿನ್ನಂಘ್ರಿಗೆರಗುವೆನು ಗತಿಪ್ರದಾ ಕದನದೊಳು ಬದುಕಿ ನರಧ್ವಜನೆ ಸಾಕ್ಷಿ3 ಆಪತ್ತು ಕಳೆವೆ ಬೇಡಿದ ಭೋಜನ ಕೊಡುವೆ ಈ ಪರಾಕ್ರಮ ನಿನಗಲ್ಲೆನ್ನದಿರು ಶ್ರೀಪತಿ ನಿನ್ನ ಲೀಲೆಗೆ ಬೆರಗಾಗುವೆನೊ ತಾಪಸರ ಮಧ್ಯದಲಿ ದುರ್ವಾಸಮುನಿ ಸಾಕ್ಷಿ 4 ನಾನಾ ಭಕ್ತರು ಇನಿತು ಸಾಕ್ಷಿಯಾಗಿರಲಿಕ್ಕೆ ಏನು ಸೋಜಿಗವೆಂಬೊ ಸೋಗು ಯಾಕೆ ಸಿರಿ ವಿಜಯವಿಠ್ಠಲರೇಯಾ ನಾನು ಬೇಡುವದೇನು ಸರ್ವಪ್ರೇರಕೆ ಪ್ರೀಯಾ5
--------------
ವಿಜಯದಾಸ
ನೀನೇಕೊ ನಿನ್ನ ಹಂಗೇಕೊ - ನಿನ್ನ -ನಾಮದ ಬಲವೆನಗಿದ್ದರೆ ಸಾಕೊ ಪ.ಆ ಮರ ಈ ಮರವೆಂದೆನ್ನುತಿರೆ ರಾಮ - |ನಾಮವೆ ವ್ಯಾಧನ ಮುನಿಪನ ಮಾಡಿತು 1ನಾರಾಯಣೆನ್ನದೆ ನಾರಗನೆನ್ನಲು |ಘೋರಪಾತಕಿಯನು ನಾಮವೆ ಕಾಯ್ದಿತೊ2ತಂದೆ ಪ್ರಹ್ಲಾದನ ಬಾಧೆಯ ಪಡಿಸೆ - ಗೋ |ವಿಂದನೆಂಬ ಸಿರಿನಾಮವೆ ಕಾಯ್ದಿತೊ 3ಉತ್ತರೆಯು ಗರ್ಭದಿ ಸುತ್ತಲಸ್ತ್ರವಿರೆ |ಚಿತ್ತಜಪಿತ ನಿನ್ನ ನಾಮವೆ ಕಾಯ್ದಿತೊ 4ಕರಿಮಕರಿಗೆ ಸಿಲ್ಕಿ ಮೊರೆ ಇಡುತಿರುವಾಗ |ಪರಮಪುರುಷ ಹರಿನಾಮವೆ ಕಾಯ್ದಿತೊ 5ನಾರಿಯನೆಳತಂದು ಸೀರೆ ಸೆಳೆಯುತಿರೆ |ದ್ವಾರಕಾಪತಿ ನಿನ್ನ ನಾಮವೆ ಕಾಯ್ದಿತೊ 6ಹಸುಳೆ ಧ್ರುವರಾಯನು ಅಡವಿಗೆ ಪೋಪಾಗ |ವಸುದೇವಸುತ ನಿನ್ನ ನಾಮವೆ ಕಾಯ್ದಿತೊ 7ನಿನ್ನ ನಾಮಕೆ ಸರಿಯಾವುದ ಕಾಣೆನೊಪನ್ನಗಶಯನ ಶ್ರೀ ಪುರಂದರವಿಠಲ 8
--------------
ಪುರಂದರದಾಸರು
ವರುಷ ಕಾರಣವಿಲ್ಲ ಹರಿಭಜನೆಗೆ |ಅರಿತ ಸಜ್ಜನರೆಲ್ಲಕೇಳಿಸಮ್ಮುದದಿಪ.ತರಳತನದಲಿ ಕಂಡ ಹರಿಯ ಧ್ರುವರಾಯನು |ಹಿರಿಯ ತಾನವನಯ್ಯ ಕಂಡನೇನೂ ? ||ತರಳ ಪ್ರಹ್ಲಾದ ನರಹರಿಯನು ತಾ ಕಂಡ |ಹಿರಿಯನವನಪ್ಪ ತಾ ಮರೆಯಲಿಲ್ಲವೇನೊ ? 1ಹಿರಿದಾಗಿ ಬಹುಕಾಲ ಮರದ ಮೇಲ್ಬಾಳುವ |ಇರುಳು ಗಣ್ಣಿನ ಗೂಗೆ ತಾ ದೊಡ್ಡದೆ ? ||ಮರೆಯಾದ ಅರಗಿಣಿ ಹರಿಕೃಷ್ಣ ಎಂದೊದರೆ |ಮರಿ ದೊಡ್ಡದೆಂತೆಂದು ಪೇಳುವರು ಬುಧರು 2ಸುರುವದಾ ಒದರುವರು ಅರಣ್ಯವಾಸಿಗಳು |ಮರದಡಿಗೆ ಬಿದ್ದ ಎಲೆಗಳ ತಿನ್ನುತ ||ಪರಮಪಾತಕಿ ಅಜಾಮಿಳನು ನಾರಗ ಎನಲು |ಭರದಿಂದ ಸಲುಹಿದನು ಪುರಂದರವಿಠಲ 3
--------------
ಪುರಂದರದಾಸರು