ಎನ್ನ ಮಾತನು ಕೇಳೋ ತಂದೆ ಎರವಾಗದಿರು ನೀನೆಂದೆನಿನ್ನ ಕುಲವನುದ್ಧರಿಸೆಂದೆ ನೀನು ಸುಪುತ್ರನಾಗೆಂದೆ ಪ
ಸುಳ್ಳನು ಬಿಡುಎಂದೆ ಶರಗೊಡ್ಡಿ ಕೊಂಬೆನು ಎಂದೆಕಳ್ಳತನವು ಬೇಡವೆಂದು ಕಾಲಿಗೆ ಬೀಳುವೆ ತಂದೆ 1
ನಾಲಿಗೆ ಸಂಬಾಳಿಸೆಂದೆ ನಾರಿಯ ನೆಚ್ಚದಿರೆಂದೆಜಾಲವನೆ ತಳೆ ಎಂದೆ ಜೋಕೆಯ ಸಾಧಿಸು ಎಂದೆ 2
ವಂಚನೆ ಬೇಡವು ಎಂದೆ ಭಾಷೆಯ ತಪ್ಪದಿರೆಂದೆಕಿಂಚನು ಆಗದಿರೆಂದೆ ಕುಮಂತ್ರ ನೆನಿಸದಿರೆಂದೆ3
ಸಂಸಾರ ನಂಬದಿರೆಂದೆ ಸ್ವಪ್ನದ ತೋರಿಕೆ ಎಂದೆಧ್ವಂಸವು ಎಲ್ಲವು ಎಂದೆ ಯಾವುದು ಸತ್ಯವಲ್ಲೆಂದೆ 4
ಕನಕದ ಮಾತಲ್ಲವೆಂದೆ ಕಾಲಗೆ ತುತ್ತಾಗದಿರೆಂದೆಚಿದಾನಂದನ ಹೊಂದು ಎಂದೆ ಚಿತ್ತಾರ ಮಶಿನುಂಗಿತೆಂದೆ5