ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡೆನು ಕೌತುಕ ಮಂಡಲದೊಳಗೊಂದು ಹೊಯ್ಯಂದ ಡಂಗುರವ ಮಂಡಿಯ ಮಸಿಯಲಖಂಡಿತವಾಗ್ಯದೆ ಧ್ರುವ ಖೋಯೆಂದು ಕೂಗುತ ಕಾಯದೊಳಗದೆ ಮಾಯದ ಮರೆಯಲುಪಾಯ ಮುಚ್ಚಿದ ನೋಡಿ 1 ಝೇಂ ಝೇಂ ಝೇಂ ಝೇಂ ಝೇಂಕರಿಸುತದೆ ಕಂಜನಾಭನ ಕರುಣಾನಂದನೋಡಿರ್ಯೊ 2 ಘೇಳೆನಿಸುತದÀ ತಾಳಮೃದಂಗವು ಒಳಹೊರಗಿದು ಧಿಮಿಗುಡುತದ 3 ಅನುಹಾತ ಧ್ವನಿಅನುಭವ ನೋಡಿರೋ ಅನುದಿನ ಸಾಧಿಸಿ ಘನ ಬೆರದಾಡಿರೊ 4 ಆನಂದೊಬ್ರಹ್ಮದ ಆಟವಿದುನೋಡಿ ಏನೆಂದ್ಹೇಳಲಿ ಸ್ವಾನುಭವದ ಸುಖ 5 ತುಂಬಿತುಳುಕುತದೆ ಅಂಬುಜಾಕ್ಷನ ಮಹಿಮೆ ಕುಂಭಿನಿಯೊಳು ನಿಜ ಗಂಭಗುರುತ ನೋಡಿ 6 ಸಾಧಿಸಿ ನೋಡಿರೊ ಶ್ರೀ ಸದ್ಗುರು ಶ್ರೀಪಾದ ಗಾದಿಯ ಮಾತಲ್ಲ ಭೇದಿಸಿ ನೋಡದು 7 ಶುಕಾದಿ ಮುನಿಗಳ ಸುಖಾಶ್ರಯವಿದು ಏಕಾಕ್ಷರ ಬ್ರಹ್ಮ ಏಕೋಚಿತ್ತದಿ 8 ಮೊತ್ತರಾಗಿ ತನ್ನ ನೆತ್ತಿಯೊಳಗಿದೆ ಉತ್ತಮರ ಸುತ್ತ ಮುತ್ತ ಸೂಸುತದ9 ಗುರು ಕೃಪೆಯಿಲ್ಲದೆ ಗುರುತವಾಗದಿದು ಬರೆ ಮಾತಿನ ಮಾಲೆಗೆ ಸೆರಗ ಸಿಲುಕದಿದು 10 ಗುರುತವಿಟ್ಟು ಗುರುವಿನ ಮಹಿಮೆಯ ತರಳ ಮಹಿಪತಿ ನಿನ್ನೊಳು ನೋಡೆಂದು 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು