ಒಟ್ಟು 4 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಗುವು ಬರುತಿದೆ ಎನಗೆ ನಗುವು ಬರುತಿದೆಬಿಗಿದು ಶ್ವಾಸ ಮೂಗ ಹಿಡಿದು ನಿಟಿಲ ನೋಡುವವರ ಕಂಡು ಪ ಹಡೆದ ದೈವ ಹತ್ತಿರಿರಲು ನೋಡಿದರು ನೋಡದಂತೆಮೃಡನು ತಾನೆ ಇರಲು ಮೂಗ ಕೊನೆಯ ನೋಡುವವರ ಕಂಡು 1 ಹೊಳೆಯುತಿಹುದು ಪರಬ್ರಹ್ಮ ನಾನಾ ರೂಪಗಳನು ತಾಳಿತಿಳಿಯದಲೆ ತನ್ನನೀಗ ಕಣ್ಣು ಮುಚ್ಚುವವರ ಕಂಡು2 ಮನಕೆ ನಿಲುಕದವನು ತಾನೆ ಮಂಗಳವಾಗಿ ಬೆಳಗುತಿರಲುಮನದಿ ಪೂಜೆಯನ್ನು ಮಾಡ್ವ ಮಂದಮತಿಗಳನ್ನು ಕಂಡು3 ತಾನು ದೇವ ನಿಜವಿದಿರಲು ತಂದು ಪ್ರತಿಮೆ ಇಟ್ಟುಕೊಂಡುಏನೋ ಮಂತ್ರ ಒದರುತಿರುವ ಮನುಜರನ್ನು ಕಂಡು ನನಗೆ4 ಯೋಗ ಮಾಡಿಕೊಂಬುದೇನು ಯೋಗಮಾಡುವವನೆ ಇರಲುಯೋಗಿಯಾದ ಚಿದಾನಂದ ತಾನೆ ಸಾಕ್ಷಿಯಾಗಿ ಇರಲು5
--------------
ಚಿದಾನಂದ ಅವಧೂತರು
ಯಾರು ಬಂದರೊನಮ್ಮ ದ್ವಾರಕೆಯೊಳಗಿಂದುಭೋರೆಂಬೊ ಕಾಳಿ ಹಿಡಿಸುತ ರಮಣಿ ಪ. ಮುತ್ತಿನ ತುರಾಯಿಯವರು ಹತ್ತಿವಾಜಿಮ್ಯಾಲೆ ಚಿತ್ತ ಚಲಿಸದಲೆ ಬರತಾರೆಚಿತ್ತ ಚಲಿಸದಲೆ ಬರತಾರೆರುಕ್ಮಿಣಿ ಅಚ್ಯುತನ ನೋಡೊ ಭರದಿಂದ ರಮಣಿ1 ರಥಿಕಾ ರಥಿಕರು ತಮ್ಮ ರಥವ ಮುಂದಕ್ಕೆ ಹಾಕಿ ಅತಿ ವೇಗದಿಂದ ಬರುತಾರೆ ರಮಣಿಅತಿ ವೇಗದಿಂದ ಬರುತಾರೆ ದೇವಕಿಯಸುತ ನಂಘ್ರ್ರಿನೋಡೊ ಭರದಿಂದ ರಮಣಿ2 ನಲ್ಲೆಯರು ಮುತ್ತಿನ ಪಲ್ಲಕ್ಕಿ ಮಂದಕೆ ಹಾಕಿನಿಲ್ಲದಲೆ ಬೇಗ ಬರತಾರೆನಿಲ್ಲದಲೆ ಬೇಗ ಬರತಾರೆ ಲಕ್ಷ್ಮ್ಮಿವಲ್ಲಭನ ನೋಡೊ ಭರದಿಂದ 3 ತೇರಿನ ಬೀದಿಲೆ ಭೋರೆಂಬೊ ರಭಸಿಗೆಊರಜನವೆಲ್ಲ ಬೆರಗಾಗಿಊರಜನವೆಲ್ಲ ಬೆರಗಾಗಿಉಪ್ಪರಗಿ ಏರಿ ನೋಡುವವರು ಕಡೆಯಿಲ್ಲ4 ಬೀಡುಬಿಟ್ಟಿದ್ದ ಬೈಲು ಗಾಡಿ ಏರಿದವರು ಓಡಿಸಿ ಬೇಗ ಬರತಾರೆಓಡಿಸಿ ಬೇಗ ಬರತಾರೆಹರಿಪಾದ ನೋಡಬೇಕೆಂಬ ಭರದಿಂದ5 ಮದ್ದು ಬಾಣಬಿರಸು ರಥಿಣಿರಭಸಿಗೆ ಎದ್ದು ಜನೆರೆಲ್ಲ ಬೆರಗಾಗಿಎದ್ದು ಜನೆರೆಲ್ಲ ಬೆರಗಾಗಿ ಮುಯ್ಯದ ಸುದ್ದಿ ಕೇಳುವರು ಹರುಷದಿ 6 ಮಿತ್ರಿ ತಿಲೋತ್ತಮಾ ಮತ್ತೆಮೇನಕೆಯರುಥೈ ಥೈ ಎಂದು ಕುಣಿಯುತಥೈ ಥೈ ಎಂದು ಕುಣಿಯುತ ಬರುವಾಗಹತ್ತು ದಿಕ್ಕುಗಳು ಬೆಳಗೋವೆ7 ರಂಭೆ ಊರ್ವಸಿಯರು ಸಂಭ್ರಮದಿ ಕುಣಿಯಲುತುಂಬಿತು ನಾದ ಧರೆಯೊಳುತುಂಬಿತು ನಾದ ಧರೆಯೊಳುರುಕ್ಮಿಣಿ ಬಂದವರಾರೆಂದು ಬೆರಗಾಗಿ ರಮಣಿ8 ವಜ್ರ ಹಚ್ಚಿದ ಮನೆಗಳುಜತ್ತು ದೀವಿಗೆಯ ಸೊಬಗಿನ ಜತ್ತು ದೀವಿಗೆಯ ಸೊಬಗಿನ ಮನೆಯೊಳುಮಿತ್ರೆಯರು ನೋಡಿ ಬೆರಗಾಗಿ 9 ಕುಂದಣ ರಚಿಸಿದ ಅಂದಣವನೇರಿಕೊಂಡುಸಂದಣಿಸಿ ಬೇಗ ಬರುತಾರೆಸಂದಣಿಸಿ ಬೇಗ ಬರುತಾರೆ ನಮ್ಮ ಮುಕುಂದನ ಮನೆ ಎದುರಿಗೆ 10 ಧೀರ ಧೀರರು ತಮ್ಮ ತೇರು ವಾಜಿಯ ಇಳಿದುವೀರ ರಾಮೇಶನ ಮನೆ ಮುಂದೆವೀರ ರಾಮೇಶನ ಮನೆ ಮುಂದೆ ಹೇಳಲಿನಾರಿ ಒಬ್ಬಳನ ಕಳುಹೆಂದ ರಮಣಿ 11
--------------
ಗಲಗಲಿಅವ್ವನವರು
ಹಣವನರಸುವರೆಲ್ಲ ಗುಣವನರಸುವರೆ ಮಣಿಯನರಸುವ ಕೆಲರು ಹಣಕೆ ಬಾಯ್ ಬಿಡರೆ ಪ ನೀಡುವವನೊಬ್ಬನಿರೆ ಬೇಡವೆಂಬುವರಿಹರೆ ನೀಡಲೊಲ್ಲದ ನರನ ನೋಡುವವರಿಹರೆ ಬೀಡು ಹೆಚ್ಚಳಸಿರಿಯ ನೀಡೆನಗೆ ತನಗೆಂಬ ನಾಡಿಗರ ಗಡಣವನು ಎಣಿಸಲಳವೇ 1 ಕಲಿಯುಗದ ನೀತಿಯೋ ಬಲುದುರಾಸೆಯ ಬಲೆಯೋ ಸಲೆ ಬೆಳೆದಸೂಯೆಯೋ ಕಲಿತ ದುರ್ನೀತಿಯೋ ಜಲಜಾಕ್ಷನನೀ ದುಶ್ಶೀಲ ಪ್ರವಾಹದಲಿ ಅಲೆಯಬಿಡಬೇಡಯ್ಯ ಮಾಂಗಿರಿಯ ರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್