ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾವಿನಕೆರೆ ಎಲ್ಲಿರುವೆ ಬಾರಂಗ ಬಾ ಮೋಹನಾಂಗ ಎಲ್ಲಿರುವೆ ನೀಲಾಂಗ ಮಾಂಗಿರಿರಂಗ ಪ ಇಲ್ಲಿರುವೆಯಾರಂಗ ಸಲ್ಲಲಿತ ರಂಗ ಮೆಲ್ಲನೇ ರಂಗ ಓ ಮುದ್ದುರಂಗಾ ಅ.ಪ ಅಲ್ಲಿ ನೋಡಿದರಿಲ್ಲ ಇಲ್ಲಿ ಕಾಣಿಸಲಿಲ್ಲ ಬಲ್ಲೆ ನಾನೀ ಚೆಲ್ಲ ವರದಾತನಲ್ಲ ಇಲ್ಲಿ ತಿಳಿಗೊಳವಿಲ್ಲ ಮಲ್ಲಿಗೆಯ ಹೂವಿಲ್ಲ ಇಲ್ಲಿರುವ ಧೃಢವಿಲ್ಲ ನೀ ಬರುವೆ ಅರಿವಿಲ್ಲ 1 ಗಜರಾಜ ಕರೆದನೆ ಅಜಾಮಿಳನು ಕೂಗಿದನೆ ಅಜನು ಬಾರೆಂದನೆ ಲೋಕವಂದಿತನೆ ರಜತಾದ್ರಿ ವಾಸನೆ ಪೂಜಿಸಲು ಕರೆದನೊ ಸುಜನ ವರದಾಯಕನೆ ವಿಜಯ ಪೂರಿತನೇ 2 ವನವನದಿ ಸಂಚರಿಸಿ ದನಿದನಿಯನನುಸರಿಸಿ ಮನದಿ ನೋವನನುಭವಿಸಿ ಕನಸೆಂದು ಭಾವಿಸಿ ಕನವರಿಪ ಯೆನ್ನೊಳಗೆ ಕನಿಕರವ ಸೂಸಿ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್