ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯ ಜಯ ಭೀಮಶ್ಯಾಮಾ ಜಯ ಸತ್ಯಾವರ ಪ್ರೇಮಾ ಜಯ ಕೃಷ್ಣಾಗತ ಕಾಮಾ ಜಯ ಪುಣ್ಯನಾಮಾ ಪ. ಪಂಚಬಾಣನ ಜನಕ ಪಾಂಚಾಲೆಯನು ಕರೆದು ಪಂಚ ಮೂರುತಿಗರಿಸಿನವ ಹಚ್ಚೆನಲೂ ಪಂಚರತ್ನಗಳಿಂದ ಮಿಂಚುತ ಭಾವಿ ವಿ- ರಿಂಚಿಯ ಕಡೆಗಾಗಿ ನಡೆತಂದಳಾಗ 1 ಅಣಿಮಾದಿ ಗುಣ ಚಿಂತಾಮಣಿಯ ಹತ್ತಿರೆ ಬಂದು ಮಣಿದು ಪಾದಕೆ ನಾರಿಮಣಿ ನಸುನಗುತಾ ಝಣಝಣವೆನಿಪ ಕಂಕಣ ಶೋಭಿತದಿಂದ ಪುನುಗಿನೆಣ್ಣೆಯ ಕೂಡಿದರಿಶಿಣ ಹಚ್ಚಿದಳು 2 ಕ್ಷತ್ರಿಯ ಗಣ ಶಿರೋರತ್ನನಾಗಿರುವಿ ಸ- ರ್ವತ್ರ ವ್ಯಾಪಕ ಫಾಲನೇತ್ರ ವಂದಿತನೆ ಕೃತ್ರಿಮ ದ್ವಿಜ ಭಿಕ್ಷಾ ಪಾತ್ರ ಸಲ್ಲದು ಕಂಜ ಪತ್ರ ತೋರಿದರೆ ನಾನರಿಶಿಣ ಹಚ್ಚುವೆನು 3 ಖುಲ್ಲ ಬಕಗೆ ಭಂಡಿಯಲ್ಲಿ ತುಂಬಿದ ನಾನಾ ಪಲ್ಯ ಭಕ್ಷಗಳ ಮೇಲೆ ಚೆಲ್ಲಿದನ್ನವನು ಎಲ್ಲ ಉಂಡಸುರನ ನಿಲ್ಲದಂತೊರಸಿದ ಮಲ್ಲ ನಿನ್ನಯ ದಿವ್ಯ ಗಲ್ಲವ ತೋರೊ 4 ಅಂಗಸಂಗದಿ ಶತಶೃಂಗಗಿರಿಯನೊಡದ ಮಂಗಳಮೂರ್ತಿ ಮಾತಂಗ ವೈರಿಗಳ ಭಂಗಿಸಿ ಬಲುಹಿಂದ ರಂಗನರ್ತನ ಗೈವ ಶೃಂಗಾರ ಕರಗಳಿಗರಸಿನ ಹಚ್ಚುವೆನು 5 ಮುಂದೆ ಕೀಚಕಬಾಧೆಯಿಂದ ರಕ್ಷಿಸುವಿ ಸೌ ಗಂಧಿ ಕುಸುಮವನ್ನು ತಂದು ಮುಡಿಸುವಿ ಮಂದಮತಿಯ ಕುರುನಂದ ನರನು ಬೇಗ ಕೊಂದು ಮನ್ಮನಸಿಗಾನಂದ ಪಾಲಿಸುವಿ 6 ಕುಂಡಲೀ ಗಿರೀಶ ಬ್ರಹ್ಮಾಂಡ ನಾಯಕ ಹೃ- ನ್ಮಂಡಲದೊಳಗಿಟ್ಟುಕೊಂಡು ಸಂತಸದಿ ಚಂಡ ವೈರಿಗಳನ್ನು ಖಂಡಿಸಿ ಸುಖದಿಂದ ಶುಂಡಾಲ ಪುರವಾಳಿಕೊಂಡು ನೀನಿರುವಿ7
--------------
ತುಪಾಕಿ ವೆಂಕಟರಮಣಾಚಾರ್ಯ