ಹೇಳಬಾರದೆ ಬುದ್ಧಿಯ - ಮಗನ ಊರ-|ಗೂಳಿಯ ಮಾಡಿದೆನೆ ? ಪಮೇಳದಿ ಓರಗೆಯವರ ಕೂಡಿಕೊಂಡು |ಹಾಳು ಮಾಡುತಾನೆ ಗೋವಳಗೇರಿಯ ಅ.ಪಅಟ್ಟದ ಮೇಲಿಟ್ಟಹ - ಚೆಟ್ಟಿಗೆ ಹಾಲು |ಬಟ್ಟನಿಕ್ಕಿ ಚೀಪುವ ||ದುಷ್ಟತನವ ಮಾಡಬೇಡ ಅಯ್ಯಾ ಎನೆ |ಕಷ್ಟವೇನೆಂಬೆ ಮುದ್ದಿಟ್ಟು ಓಡಿ ಪೋದ 1ಮೊಸರ ಮಥಿಸುತಿರಲು - ಬಂದು ಕುಳಿತ |ಹಸುಗೂಸು ಎನುತಿದ್ದೆನೆ ||ಕುಸುಮನಾಭನು ತನ್ನ ವಶವಾಗು ಎನುತಲಿ |ವಸನೆತೆಗೆದು ಮೊಲೆ ಪಿಡಿದು ಹೋದ ಮೇಲೆ 2ಬೆಣ್ಣೆಯ ಕಂಡರಂತೂ - ಅದರರೂಪ |ಕಣ್ಣಿಗೆ ತೋರನಲೆ ||ಸಣ್ಣವನೆಂದು ಬಗೆದು ನಾ ಕರೆದರೆ |ಬಣ್ಣದ ಮಾತಾಡಿ ಬಾ ಎಂದು ಕರೆವನು 3ಉಡುವ ಸೀರೆಯ ಕಳೆದು - ತಡಿಯಲಿಟ್ಟು |ಮಡುವಿನೊಳ್ ಮೈದೊಳೆಯೆ ||ದಡದಡ ಬಂದೊಯ್ದು ಕಡಹದ ಮರವೇರಿ |ಕೊಡು ಕೃಷ್ಣ ಎನುತಿರೆ ಪಿಡಿ ಜೋಡು ಕೈಯೆಂಬ 4ಎಷ್ಟು ಹೇಳಲಿ ನಿನಗೆ - ಯಶೋದೆ ಒಂ-|ದಿಷ್ಟು ಕರುಣವಿಲ್ಲವೆ |ಸೃಷ್ಟಿಗೊಡೆಯ ನಮ್ಮಪುರಂದರವಿಠಲ-------------------------- 5