ಎಂದಪ್ಪಿಕೊಂಬೆ - ರಂಗಯ್ಯ ನಿನ್ನ |ಎಂದಪ್ಪಿಕೊಂಬೆ........................... ಪಎಂದಪ್ಪಿಕೊಂಬೆ ನಾನೆಂದು ಮುದ್ದಾಡುವೆ |ಎಂದಿಗೆ ಸವಿಮಾತನಾಡಿ ನಾ ದಣಿವೆನೊ ಅ.ಪಅರಳೆಲೆಮಾಗಾಯಿ ಕೊರಳ ಪದಕ ಸರ |ತರಳರನೊಡಗೂಡಿ ಬೆಣ್ಣೆಯ ಮೆಲುವನ............... 1ಅಂದುಗೆಪಾಯ್ವಟ್ಟು ಗೆಜ್ಜೆ ಘಿಲುಘಿಲು ಕೆನೆ |ಚೆಂದದಿ ಕುಣಿವ ಮುಕುಂದನ ಚರಣವ................ 2ಹೊನ್ನಿನ ಉಡುದಾರ ರನ್ನದ ಚೌಕುಳಿ |ಚಿನ್ನದುಂಗುರವಿಟ್ಟಜಾಹ್ನವಿಜನಕನ.......................3ಅಪ್ಪಣ್ಣ ಭಾಗವತನ ರೂಪವು ತಾನಾಗಿ |ತುಪ್ಪದ ಬಿಂದಿಗೆ ತಂದ ವಿಠಲನ...................... 4ಪರಿಪರಿ ಭಕುತರ ಮರೆಯದೆ ಸಲಹುವ |ಪುರಂದರವಿಠಲನ ಸಿರಿಪಾದ ಪದುಮನ 5