ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೊಡು ಕಂಡೆಯಾ ಹರಿಯೆ-ನಿನ್ನ ನಾಮ-|ಕೊಡು ಕಂಡೆಯಾ ಹರಿಯೆ ಪಬಡವ ನಾನೆಂದು ಕಾಡಲಿಲ್ಲ ಹರಿಯೆ ಅ.ಪಒಡಲುತುಂಬದು ಎಂದು ಬಳಲಿಸೆ ಬರಲಿಲ್ಲ |ಸಡಗರದಿಂ ಭಾಗ್ಯ ಬೇಡಲಿಲ್ಲ ||ಮಡದಿ-ಮಕ್ಕಳಿಗಾಗಿ ಕಡು ಮೋಹವೆನಗಿಲ್ಲ |ಬಿಡದೆ ನಾಮಸ್ಮರಣೆ ಕೊಡು ಒಂದೇ ಸಾಕೊ 1ಸ್ನಾನ-ಮೌನ ಜಪ-ತಪಗಳು ಎನಗಿಲ್ಲ |ನಾನಾಯೋನಿಗಳಲ್ಲಿ ಬಳಲಿ ಬಂದೆ ||ದೀನರಕ್ಷಕ ನೀನೆ ದಯದಿಂದಲೆನಗಿನ್ನು |ಧ್ಯಾನಸುಧೆಯನಿತ್ತು ಸಲಹಯ್ಯ ಹರಿಯೆ 2ಬಲೆಗೆ ಸಿಲುಕಿದ ಮೃಗದಂತೆ ಬಾಯ್ಬಿಡುತಲಿ |ಅಲಸಿ ಕೋಟಲೆಯ ಸಂಸಾರದಿಂದ |ತಲೆಹುಳಿತ ನಾಯಂತೆ ಬಯಲಾಸೆಗೆ ಸಿಲುಕಿದೆ |ಸಲಹೊ ದೇವರ ದೇವಪುರಂದರವಿಠಲ3
--------------
ಪುರಂದರದಾಸರು