ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಾಗೀರಥೀದೇವಿ ಭಯನಿವಾರಣೆ ಗಂಗೆ |ಸಾಗರನ ನಿಜರಾಣಿ ಸಕಲಕಲ್ಯಾಣಿ ಪಒಮ್ಮೆ ಶ್ರೀಹರಿ ಪಾದಕಮಲದಿಂದುದುಭವಿಸಿ |ಬ್ರಹ್ಮಕರ ಪಾತ್ರೆಯಲಿನಿಂದುಬಂದೆ ||ಶ್ರೀ ಮನ್ನಾರಾಯಣನ ಪಾದತೀರ್ಥವಾಗಿ |ಬೊಮ್ಮಾಂಡವನು ಪಾವನಮಾಡ ಬಂದೆ 1ದೇವಿ ನೀ ವಿಷ್ಣುಪಾದೋದಕವೆಂದೆನಿಸಿ |ದೇವತೆಗಳಿಗೆಲ್ಲ ಅಧಿಕವಾದೆ ||ದೇವರೆಲ್ಲರು ನೆರೆದು ತಲೆಬಾಗಿದರು ಮಹಾ-|ದೇವನ ಶಿರದಿಂದ ಧರೆಗಿಳಿದು ಬಂದೆ 2ಜಹ್ನವಿನುದರದಿ ಪೂಕ್ಕ ಕಾರಣದಿಂದ |ಜಾಹ್ನವಿಯೆಂದು ನೀನೆನಿನೆಕೊಂಡೆ ||ಮುನ್ನ ನರಕಕ್ಕಿಳಿದ ಸಗರರಾಯನ ವಂಶ- |ವನ್ನು ಪಾವನಮಾಡಿ ಪೊರೆಯಲು ಬಂದೆ 3ನಿಟ್ಟಿಸಲು ಮುನ್ನಾರು ಜನ್ನಪಾತಕಹರಣ |ದಿಟ್ಟಿಸಲು ಮೂರುಜನ್ಮದಿ ಮುಕುತಿಯು ||ಮುಟ್ಟಿ ಮಾಡಿದರೊಂದು ಸ್ನಾನಮಾತ್ರದಲಿ |ಸುಟ್ಟು ಹೋಹುದು ಸಾಸಿರಜನ್ಮ ಪಾಪ 4ಹಲವು ಪರಿಯಲಿ ಹರಿಯ ಸ್ಮರಣೆಯಿಲ್ಲದೆ ಭವ-|ದೊಳಗೆ ಸಿಲುಕಿ ಕಡುನೊಂದೆ ನಾನು ||ಹಲವು ಮಾತೇಕೆ ಶ್ರೀ ಪುರಂದರವಿಠಲನ |ಚೆಲುವಪದದಿಂದಿಳಿದು ಒಲಿದು ದಯೆ ಮಾಡೆ 5
--------------
ಪುರಂದರದಾಸರು