ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೇಡಲೇತಕೆ ಪರರ ದೇಹಿಯೆಂದು ಪ ನೀಡುವಾ ಧೊರೆ ಎನಗೆ ನೀನಿರಲು ಸರ್ವದಾ ಅ.ಪ. ಗ್ರಾಸವನು ಬೇಡೆ ದೂರ್ವಾಸ ಮುನಿಗಂದನ್ನ ಅನಾ ಯಾಸದಿಂ ತತ್ಕಾಲದಲಿ ಕಲ್ಪಿಸಿ ಆ ಸಂಯಮಿಗೆ ಉಣಿಸಿ ದಣಿಸಿದ ಮಹಾ ದಾತಾ ದಾಶರಥೆ ನಿನ್ನ ಬಿಟ್ಟನ್ಯ ದೇವತೆಗಳನು 1 ಖಳ ದುಶ್ಯಾಸನನು ದ್ರೌಪದಿಯ ಸಭೆಯೊಳು ದು ಕೂಲವನು ಸೆಳೆಯೆ ದ್ವಾರಕ ಮಂದಿರಾ ಶ್ರೀ ಲೋಲ ಶ್ರೀ ಕೃಷ್ಣ ಕರುಣಿಸು ಕರುಣಿಸೆನೆ ಪಾಂ ಚಾಲಿ ಮೊರೆ ಕೇಳಿ ದಿವ್ಯಾಂಬರ ನಿಚಯವಿತ್ತೆ 2 ಮಡದಿ ಕಳುಹಲು ಬಂದ ಬ್ರಾಹ್ಮಣನ ಪೀಡಿಸುವ ಬಡತನವ ಕಳೆದೆ ಒಪ್ಪಿಡಿಯವಲಿಗೆ ಪೊಡವಿಯನ್ನಾಳಿಸಿದೆ ಕ್ರಿಮಿಗೊಲಿದು ಕಾರುಣ್ಯದಲ್ಲಿ ಮೃಡ ಬಿಡೌಜರೀಪ್ಸಿತ ಕೊಡುವೆ 3 ತಾಪಸೋತ್ತಮ ಮೃಕಂಡಾತೃಜಗೆ ಕಲ್ಪಾಯು ನೀ ಪೂರ್ತಿ ಮಾಡಿ ಅಲ್ಪಾಯು ಕಳೆದು ಆ ಪರ್ವತೇಶ್ವರನ ಪಟ್ಟಣವ ಸಾರ್ದು ಸಾಂ ದೀಪ ತನಯನ ತಂದ ಸರ್ವಾಂತರ್ಯಾಮಿ 4 ವಿಶ್ವ ಜೀವರಿಗನ್ನ ಕಲ್ಪಕನೆ ನೀನಿರಲು ಜ್ಞಾನ ದ್ರವ್ಯ ಅಲ್ಪ ಮಾನವರಿಗಾಲ್ಪರಿರೇನಹುದು ಅಹಿ ತಲ್ಪ ಜಗನ್ನಾಥ ವಿಠ್ಠಲ ಕಲ್ಪತರುವಿರಲು 5
--------------
ಜಗನ್ನಾಥದಾಸರು
ಮಂದರೋದ್ಧರಾ-ಬಂದು ಕಣ್ಣಮುಂದೆ ನಿಲ್ಲೋ ಪ ಬಡವರೊಡೆಯನೆಂದು ನಿನ್ನ ಅಡಿಯ ಬಿಡದೆ ನಂಬಿದೆನೋ ಕಡುದಯಾನಿಧೆ ಬಡಕುಚೇಲನ ಪಿಡಿಯವಲಿಗೆ ಒಲಿದು ಪೊರೆದೆ1 ಸರ್ವಸಾರಭೋಕ್ತ ನೀನೆ ತೋರ್ವುದಿಲ್ಲ ಕೊಡಲು ನಿನಗೆ ಸರ್ವದೇವಸಾರ್ವಭೌಮನೀ ನೋರ್ವ ವ್ಯಾಪ್ತನಿರ್ಲಿಪ್ತ 2 ಪ್ರಣತಕಾಮದನೆಂದು ಅಂದು ಅಣುಗಧೃವನಾಕ್ಷಣದಿ ದಣಿಸಲಾಗದೋ ದೀನರಕ್ಷಕ 3 ಮುಕುತರೊಡೆಯ ಭಕುತವತ್ಸಲ ಯುಕುತಿತೋರದೊ ನಿನ್ನ ಧ್ಯಾನಕೇ ಶಕುತಿಯಿತ್ತು ಸಲಹೊ ಎನ್ನನು ಸಕಲಲೋಕೋದ್ಧ್ದಾರ ಧೀರ 4 ಎಲ್ಲಜನರ ಪೊರೆಯಲು ಶ್ರೀನಲ್ಲ ನಿಂತೆಯೊ ಶೇಷಶೈಲದಿ ವಲ್ಲಭಾ ಶ್ರೀ ವೆಂಕಟೇಶ ನೀ- ನೆಲ್ಲಬಲ್ಲೆನ್ನ ಸೊಲ್ಲ ಲಾಲಿಸೊ 5
--------------
ಉರಗಾದ್ರಿವಾಸವಿಠಲದಾಸರು
ವಾಸುದೇವ ನಿನ್ನ ಮರ್ಮಕರ್ಮಂಗಳದೇಶದೇಶದಲ್ಲಿ ಪ್ರಕಟಿಸಲೊ ಪ ಬೇಸರದೆ ಎನ್ನ ಹೃದಯಕಮಲದಲ್ಲಿ ವಾಸವಾಗಿ ಸುಮ್ಮನಿದ್ದೀಯೊ ಅ.ಪ. ತರಳತನದಲಿದ್ದು ದುರುಳನಾಗಿ ಬಂದುಒರಳಿಗೆ ಕಟ್ಟಿಸಿಕೊಂಡುದನುತುರುವ ಕಾಯಲಿ ಹೋಗಿ ಕಲ್ಲಿಯೋಗರವನುಗೊಲ್ಲರ ಕೂಡೆ ನೀ ಉಂಡುದನುನೆರೆಮನೆ ಹೊರಮನೆಗಳ ಪೊಕ್ಕು ಬೆಣ್ಣೆಯಅರಿಯದಂತೆ ಕದ್ದು ಮೆದ್ದುದನುಕೇಳಿಸಿದೆಯಾದರೆ ಒದರುವೆ ಎಲೊ ನರ -ಹರಿ ಎನ್ನ ಬಾಯಿಗೆ ಬಂದುದನು 1 ಕಟ್ಟಿ ಕರೆವ ಏಳುದಿನದ ಮಳೆಗೆ ಪೋಗಿಬೆಟ್ಟವ ಪೊತ್ತದ್ದು ಹೇಳಲೊಅಟ್ಟಿಸಿಕೊಳ್ಳುತ ಯಾಗಶಾಲೆಗೆ ಪೋಗಿಹೊಟ್ಟೆಯ ಹೊರೆದದ್ದು ಹೇಳಲೊದುಷ್ಟ ಹಾವಿನ ಹೆಡೆಯನು ತುಳಿದಾಡಿದದುಷ್ಟತನವನು ಹೇಳಲೊನೆಟ್ಟುನೆ ಅಂಬರಕೆತ್ತಿದನ ಹೊಯ್ದುಹಿಟ್ಟುಕಟ್ಟಿಟ್ಟುದ ಹೇಳಲೊ 2 ಪಿಡಿಯವಲಿಗೆ ಮೆಚ್ಚಿ ಸಂಪದವನು ಕೊಟ್ಟಬೆಡಗತನವನಿಲ್ಲಿ ಹೇಳಲೊಹಿಡಿಯ ಬಂದ ಕಾಲಯವನಿಗಂಜಿ ಕಲ್ಲಪಡೆಯ ಹೊದ್ದುದ ಹೇಳಲೊಮಡಿದ ಮಗನ ಗುರುವಿಗೆ ಕೊಡಬೇಕೆಂಬಸಡಗರತನವಿಲ್ಲಿ ಹೇಳೆಲೊಮಡದಿ ಮಾತಿಗೆ ಪೋಗಿ ನೀ ಪಾರಿಜಾತವತಡೆಯದೆ ತಂದದ್ದು ಹೇಳಲೊ 3 ಮೌನಗೌರಿಯ ನೋಡ ಬಂದ ಹೆಂಗಳನ್ನೆಲ್ಲಮಾನವ ಕೊಂಡದ್ದು ಹೇಳಲೊತಾನಾಗಿ ಮೊಲೆಯನೂಡಿಸ ಬಂದವಳನ್ನುಪ್ರಾಣವ ಕೊಂಡದ್ದು ಹೇಳಲೊಕಾನನದೊಳು ತುರುವಿಂಡುಗಳನು ಕಾಯ್ದಹೀನತನವನಿಲ್ಲಿ ಹೇಳಲೊಮಾನಿನಿಯರ ಮನೆಗಳ ಪೊಕ್ಕು ಬೆಣ್ಣೆಯಹಾನಿಯ ಮಾಡಿದ್ದು ಹೇಳಲೊ 4 ಧರಣಿಮಗನ ಕೊಂದು ತರುಣಿಯರನುದುರುಳತನವನಿಲ್ಲಿ ಹೇಳಲೊಜರೆಯ ಮಗನಿಗಂಜಿ ಪುರವ ಬಿಟ್ಟು ಹೋಗಿಶರಧಿಯ ಪೊಕ್ಕದ್ದು ಹೇಳಲೊಧರೆಯೊಳಧಿಕ ಶ್ರೀರಂಗಪಟ್ಟಣದಲ್ಲಿಸ್ಥಿರವಾಗಿ ನಿಂತದ್ದು ಹೇಳಲೊಶರಣಾಗತರ ಕಾವ ರಂಗವಿಠಲನ್ನಪರಮ ದಯಾಳೆಂದು ಹೇಳಲೊ 5
--------------
ಶ್ರೀಪಾದರಾಜರು