ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಈ) ಯತಿವರ್ಯರು ಶ್ರೀ ವ್ಯಾಸರಾಯರ ಸ್ತುತಿ ಇದಿರ್ಯಾರೊ ಗುರುವೆ ಸರಿಯಾರೊ ಯತಿಗೆ ಸಮರ್ಯಾರೊ ಪ ದುರುಳ ವಾದಿಗಳನ್ನು ಮರುಳು ಮಾಡೋರನ್ನ ತರಿದಟ್ಟಿ ಚಂದ್ರಿಕೆ ಗ್ರಂಥವ ರಚಿಸಿ ಧರಣಿ ಸುರರ ಪರಿವೃಢರ ಸುನಿಕರಕೆ ಪರಿಪರಿಯಲಿ ಉಪದೇಶಿಸುತಿಪ್ಪಗೆ 1 ಕನಕ ಕಶಿಪುತನಯನ ಘನ ಅಂಶದಿ ಫಣಿಗಣ ರಮಣನಾವೇಶದಿ ಪೊಳೆಯುತ ದಿನದಿನದಲಿ ಹರಿಮನ ತಣಿಸುತಲಿಹ ಘನ ಮಹಿಮನೆ ಶ್ರೀ ಯತಿಕುಲತಿಲಕಾ 2 ಉದ್ದಂಡ ವಿತಂಡಕೆ ಗಂಡುಸಿಂಹ ತರ್ಕದೆ ತಾಂಡವ ಯುಕ್ತಿಯ ದಂಡುಗಳನೆ ಕಟ್ಟಿಕೊಂಡು ತಾರ್ಕಿಕರ ಷಂಡಗಳನೆ ಖಂಡಿಸುತಿಹ ಯತಿಯೆ 3 ಬ್ರಹ್ಮಣ್ಯತೀರ್ಥರ ಕರಕಮಲದಿ ಪುಟ್ಟಿ ಬ್ರಹ್ಮಜನಕ ನರಸಿಂಹ ಮೂರುತಿಯ ಹೃ- ದ್ಗಂಹ್ವರದಲಿ ಧ್ಯಾನಿಸುತಿಹ ವ್ಯಾಸರಾ ಹೃದಯಾಂಬುಧಿಯೊಳು ಮೆರೆವಗೆ 4 ದಶದಿಶೆಯಲಿ ದಶರಥಸುತ ಮಹಿಮೆಯ ಕುಶಲದಿಂದಲಿ ಸಭೆಯೊಳಗೆ ಸ್ಥಾಪಿಸುತ ಹೊಸ ಹೊಸ ಬಿರುದು ಸಂದ್ಹೆಸರುವೆತ್ತಿರುವಂಥ ವಸುಧಿಯೊಳಗೆ ಸುಕರ ಸುಚರಿತೆಗೆ 5 ಹೊಳೆಯುತಲಿರುವ ರುಕ್ಮಿಣಿಪತಿ ಕೃಷ್ಣನು ನಲಿಯುತ ಕುಣಿಕುಣಿದಾಡುತಲಿಪ್ಪನು ಥಳಥಳಿಸುವ ರಾಮ ವೇದವ್ಯಾಸರು ನಿಮ- ಗಿಳೆಯೊಳಮೂಲ್ಯ ಪ್ರಸಾದವನೀವರು 6 ಅಡಿಗಡಿಗತಿ ದೃಢತರ ಯುಕ್ತಿಗಳಿಂದ ಸಡಗರದಿಂದಲಿ ಬಿಡದೆ ನುಡಿಯುತ ನಡದದ್ವೈತದಡವಿಯೊಳಗೆ ಪೊಕ್ಕು ಕೆಡಗುತಿಹ ನ್ಯಾಯಾಮೃತಾಚಾರ್ಯರಿಗೆ 7 ಶ್ರೀದವಿಠಲಗತಿ ಪ್ರೀಯರಾದ ಶ್ರೀ- ಪಾದರಾಯರಲಿ ಓದಿ ಗ್ರಂಥಗಳ ವಾದಿರಾಜ ವಿಜಯೀಂದ್ರ ಪ್ರಮುಖರಿಗೆ ಆದರದಲಿ ಪಾಠ ಹೇಳುತಲಿಪ್ಪಗೆ 8
--------------
ಶ್ರೀದವಿಠಲರು
ದ್ರೌಪದೀ ವಸ್ತ್ರಾಪಹಾರ ಸಭೆಯನ್ನುದ್ದೇಶಿಸಿ ಹೇಳುವ ಮಾತು) ನೀತಿಯೋ ಪುನೀತಮಾನಸರೇ ಸುಗುಣಾತಿಶಯರೇ ನೀತಿಯೋ ಪುನೀತಮಾನಸರೇ ಪ. ದ್ಯೂತ ಕ್ಷತ್ರಿಯ ಜಾತಿಗನುಚಿತ ಕೈತವದ ವಿಪರೀತ ಮತಿಯಿದು ಖ್ಯಾತರಿಂಗೀ ರೀತಿ ನ್ಯಾಯವೆ ಪಾತಕಿ ಘಾತಕಿ ನೀತಿಯೆನಿಸುವುದು1 ಲೋಕನಿಂದಕನೀ ಕುಠಾರನು ಭೀಕರನು ಮನವ್ಯಾಕುಲಿಸುವನು ಶ್ರೀಕರಾತ್ಮರನೇಕರಿರುವಿರಿ ಯಾಕಿಂತ ಮೌನ ವಿವೇಕಿಗಳಿಗೆ ಹೀಗೆ2 ನ್ಯಾಯ ಧರ್ಮ ಸಹಾಯಗೈಯ್ಯುವ ರಾಯರೆಲ್ಲ ಮಹಾಯಶಸ್ವಿಗಳ್ ಈಯವಸ್ಥೆಗೆ ಪ್ರೀಯರಾದಿರೆ ಕಾಯೋ ಶ್ರೀಲಕ್ಷ್ಮೀನಾರಾಯಣ ನೀಯೆನ್ನ3
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀ ಪ್ರಾಣೇಶದಾಸಾರ್ಯರ ಸ್ತುತಿ ತೆರಳಿದರು ಪರಮ ತೋಷದಲಿ ಹರಿಪರಕೆ |ಹರಿಪ್ರೀಯರಾದ ಪ್ರಾಣೇಶದಾಸರು ತ್ವರದಿ ಪ ನಿರುತದಲಿ ಹರಿಪೂಜೆ |ಮರಿಯದಲಿ ಮಾಡಿ ಬಲು |ಸ್ಥಿರ ಬುದ್ಧಿ ಪೂರ್ವಕದಲಿ |ಗುರುಗಳಲಿ ಸರ್ವಜ್ಞರಾಯರಿಂದಧಿಕ ಮ ||ತ್ತಿರಲುಂಟೆ ಎಂದು ತಿಳುಹಿ |ದುರುಳ ಜನರನುಸರಿಸದಲೆ ಕವಿಗಳೊಡನಾಡಿ |ಚರಿಸಿ ದೇಶಗಳಲ್ಲಿ ಮೆರೆದು ಖ್ಯಾತಿಯ ಪಡದು 1 ಭಾಗವತ ಶ್ರೇಷ್ಟ ಜಗನ್ನಾಥ ದಾಸಾಖ್ಯರಡಿ |ಜಾಗುಮಾಡದಲರ್ಚಿಸಿ |ಭೋಗಿವರ ಶಯನ ಪ್ರಾಣೇಶವಿಠಲಾಂಕಿತವ ||ಆ ಗುರುಗಳಿಂದ ಕೊಂಡು |ರಾಗದ್ವೇಷಗಳೆಂಬ ಅರಿಗಳನು ಸಂಹರಿಸಿ |ರಾಗದಲಿ ಹರಿಕಥನ ಕವನ ರೂಪದಿ ಪೇಳಿ2 ಪ್ರಾಣಮತವನನುಸರಿಸಿ ಆಚರಣಿಯನು ಮಾಡಿ |ಪ್ರಾಣಿಗಳಿಗೆ ತಿಳಿಸದೆ |ಕ್ಷೋಣಿಯೊಳಗಿನ್ನು ಇರಸಾಕೆಂದು ಆ |ಚಿತ್ರಭಾನು ಆಶ್ವಯುಜ ಶುದ್ಧ ಸಪ್ತಮಿಯಲಿ ||ಜ್ಞಾನಪೂರ್ವಕ ಲಯ ಚಿಂತನೆಯ ಮಾಡಿ ಗುರು |ಪ್ರಾಣೇಶ ವಿಠಲನಿದ್ದಾ ಪುರಕೆ ಜವದಿಂದ3
--------------
ಗುರುಪ್ರಾಣೇಶವಿಠಲರು