ದಯವ ತೋರೆ ತುಳಸಿ ಹರುಷವೆರಸಿ
ಪರಾಂಬರಿಸಿ ಹರಿಯ ಸ್ಮರಿಸಿ ಪ.
ಭವ ದಯಾವೆರೆದು ಪ್ರೇಮಗರೆದು ತಾಯೆ ನೀ 1
ಮಲ್ಲೆ ಮಲ್ಲಿಗೆ ಜಾಜಿ ಮರುಗ ಸೇವಂತಿಕೆ
ಎಲ್ಲ ಪೂಜೆ ಮಾಡೆ ಸಲ್ಲಲಿತದಲಿ
ನೀನಿಲ್ಲದ ಪೂಜೆಯ ವಲ್ಲನು ಶ್ರೀ ಹರಿಯು
ಎಲ್ಲರಿಗಧಿಕಳೆಂದು ಪೂಜೆಗೊಂಡು ದಯಾಸಿಂಧು ತಾಯೆ ನೀ 2
ಶ್ರೀ ಶ್ರೀನಿವಾಸನೊಳು ವಾಸಿಪೆ ಸರ್ವದಾ ಪೋಷಿಪೆ ಭಕ್ತರನು
ವಾಸುದೇವನ ತೋರಿ ಪೋಷಿಸೆ ಬಾರಮ್ಮ
ವಾಸವಾಗಲು ಮನೆಗೆ ಸೂಸಿ ಭಕುತಿಯಿಂದ
ಪೂಜಿಪೆ ನಿಮ್ಮ ಚರಣವಮ್ಮಾ ತಾಯೆ ನೀ 3