ರತ್ನದೊಳಗಿದು ರತ್ನ ನವರತ್ನಗಳೊಳಗಿದು ರತ್ನ ಪ
ಚಿತ್ತಜಪಿತನೆಂಬ ರತ್ನ ನಮ್ಮ ನಿತ್ಯಮುಕ್ತರಂಗರತ್ನ ಅ.ಪ
ಭಕ್ತಪಾಲಕನೆಂಬ ರತ್ನ ಸತ್ಯಾಸಕ್ತ ವರದನೆಂಬ ರತ್ನ
ಮುಕ್ತಿದಾಯಕ ರಾಮರತ್ನ ನಮ್ಮ ಯುಕ್ತಿಭರಿತ ಕೃಷ್ಣರತ್ನ1
ಗೋಪಾಲಕೃಷ್ಣನೆಂಬ ರತ್ನ ವರತಾಪಸವಿನುತ ಮಾರತ್ನ
ಶ್ರೀಪತಿಯೆಂಬ ಜೀವರತ್ನ ನಮ್ಮ ಪಾಪವಿನಾಶಕರತ್ನ 2
ಚಾರು ವೇದದೊಳಿಹ ರತ್ನ ನಮ್ಮಶ್ರೀರಮಣ ಎಂಬರತ್ನ 3
ಕರಿರಾಜವರದ ಸುರತ್ನ ನಮ್ಮ ಕರುಣಾಕರಯೆಂಬ ರತ್ನ
ಶರಣ ಜನರ ಹಸ್ತರತ್ನ ನಮ್ಮ ತರಳಧ್ರುವನ ಕಾಯ್ದ ರತ್ನ 4
ಪ್ರೇಮರಸಾನ್ವಿತ ರತ್ನ ಇದು ಶ್ರೀಮಾಂಗಿರಿರಂಗರತ್ನ
ನಮ್ಮ ರಾಮದಾಸಾರ್ಚಿತ ರತ್ನ5