ಪರಾಕು ಮಹಾಸ್ವಾಮಿ ಸಜ್ಜನಪ್ರೇಮಿಪ.
ಕ್ಷೀರಸಾಗರಶಯನ ನಿವಾಸಾಪಾರಗುಣಗಣಾಶ್ರಯ
ಚಾರು ಪದಾಬ್ಜದ್ವಯ ದನು-
ಜಾರಿ ಧನಂಜಯಪ್ರಿಯ ಮದವಾರಣಕೃತನಿರ್ಭಯ ನಮ್ಮ
ದೂರನು ಲಾಲಿಸು ಚಿನ್ಮಯ ಜಯ1
ದುಷ್ಟ ನಿಶಾಚರರಟ್ಟುಳಿ ಘನ ಕಂಗೆಟ್ಟುದು ಸುರಮುನಿಗಣ ಆ
ಭ್ರಷ್ಟರು ಮಾಡುವ ನಿಷ್ಠುರಕೆ ಮೈಗೊಟ್ಟೆವು ಸಂಕರ್ಷಣ ನಾವಿ-
ನ್ನೆಷ್ಟೆಂಬುದು ದುರ್ಗುಣವಶ ಬಿಟ್ಟೆವು ಸುರಪಟ್ಟಣ ನಮ್ಮ
ಕಷ್ಟವು ಪದಕರ್ಪಣ ಪರಾಯಣ 2
ಅಂತರಂಗ ಬಹಿರಂಗ ಭ್ರಷ್ಟದನುಸಂತತಿ ಸಂತತಿ ಭಾರಿ ಬಲು
ಧುರೀಣರ್ಸಂತಾಪಿಪರು ಮುರಾರಿ ನಮ್ಮ
ಶೌರಿ ಜಗ-
ದಂತ ವಿಹಾರಿ ನಿರಂತ ಪರಂತಪ3
ಚೆನ್ನಕೇಶವ ಚರಾಚರಾತ್ಮ ಚೈತನ್ಯರೂಪ ಶ್ರೀರಂಗ ನಮ್ಮ
ಸನ್ನುತ ಶುಭಾಂಗ ಸ-
ತಿಮಿರ ಪತಂಗ ಸುಪ್ರ
ವಿಹಂಗ ತುರಂಗ4
ಕಾಲನಿಯಾಮಕ ಪ್ರಾಣ ನಿ
ನ್ನೋಲಗ ಸೇವಕರಾಳಿಯೂಳಿಗವ ಕೇಳು ತ್ರಿಲೋಕತ್ರಾಣ ನತ
ಪಾಲ ಪರೇಶ ಪುರಾಣ ಶ್ರೀಲೋಲ ವಿಗತ ಪರಿಮಾಣ ಹೃದ-
ಯಾಲಯಮಣಿ ಲಕ್ಷ್ಮೀನಾರಾಯಣ 5