ಪಾದತೋರೋ ಪದ್ಮಾಕ್ಷ ಬಾರೋ ಪ.
ಪಾದಪದ್ಮವ ತೋರೋ ಪದ್ಮಾಕ್ಷ ಬಾರೋ
ಆದಿಮಧ್ಯಾಂತ ಸ್ವರೂಪ ಮೈದೋರೋ ಅ.ಪ.
ಬಲಿಯನ್ನು ತುಳಿದಂಥ, ಭೂಮಿಯನಳೆದಂಥ
ಶಿಲೆಯಾಗಿದ್ದವಳ ಕಲುಷವ ಕಳೆದಂಥ 1
ಶಿಶುರೂಪದಿಂದಲೆ ಶಕಟನ ಒದ್ದಂಥ
ಶಶಿಮುಖಿಯಶೋದೆಗೆ ಶಿಶುವೆನಿಸಿ ಮೆರೆದಂಥ 2
ಗೊಲ್ಲರ ಮನೆಮನೆಗೆ ಕಳ್ಳನಂದದಿಪೊಕ್ಕು
ನಲ್ಲೆಯರ ಕೈಪಿಡಿಗೆ ನಿಲ್ಲದೋಡುವ ಮುದ್ದು 3
ಕಾಳಿಂಗನ ಫಣೆಯೊಳ್ ಕೋಲಾಹಲದಿ ಕುಣಿದ
ಕಾಳಿಂಗನರಸಿಯರಿಗೆ ತಾಲೀ ಭಾಗ್ಯವನಿತ್ತ4
ಕರುತುರುಗಳ ಮರೆಸಿ ದೊರೆ ನಿನ್ನರಸಿದ
ಪರಮೇಷ್ಠಿಯೆ ತನ್ನ ಕರದಿಂ ಪೂಜಿಸಿದಂಥ 5
ಮಾವ ಕಂಸನ ಕೊಂದು ತಾಯಿ ದೇವಕಿ
ವಸುದೇವಸುತ ವಾಸುದೇವನೆಂದೆನಿಸಿದ 6
ಸಿರಿದೇವಿಯೇ ನಿಜಕರಗಳಿಂದೊತ್ತುವ
ಪರಮಪಾವನ ಪದಸರಸೀರುಹ 7
ವರಶೇಷಗಿರಿದೊರೆ ಶರಣರ ಮರೆವರೆ
ಶಿರಬಾಗಿ ಬೇಡುವೆ ಭರಿಸೆನ್ನನೆನುವೆ 8