ಬಂದೆ ಬಂದೆ ಸ್ವಾಮಿಯೆ ಬಂದೆ ಬಂದೆ ಪ.
ಬಂದೆ ಬಂದೆ ಗೋವಿಂದ ಗೋವಳ ಬಾಂಧವ ಭಕ್ತವತ್ಸಲಇಂದಿರೇಶ ಶ್ರೀ ವೆಂಕಟ ನಿನ್ನ ಸಂದರುಶದಕೆ ಸಾಗಿ ನಾನಿಲ್ಲಿ ಅ.ಪ.
ನಡೆದು ನಡೆಸುತ ನುಡಿದು ನುಡಿಸುತಅಡಿಗಡಿಗೆ ಕಾಪಾಡುತಒಡನೆ ಆಡುತ ಬಿಡದೆ ಕ್ಷಣವನುಸಡಗರದಿ ಕರೆತರಲು ನಾನಿಲ್ಲಿ 1
ಆಪ್ತ ಅನಿಮಿತ್ತ ವ್ಯಾಪ್ತ ಸರ್ವತ್ರಗುಪ್ತ ಗುಣಗಣಪೂರ್ಣನೆಪ್ರಾಪ್ತ ನೀನೆನಗಾಗಬೇಕೆಂದುವ್ಯಾಪ್ತಿ ನಿನ್ನದು ಹುಡುಕುತಲಿ ನಾ2
ಒಂದು ರೂಪದಿ ನಿಂದು ಎನ್ನಲ್ಲಿಚೆಂದದಿಂ ಕರೆತಂದೆ ಇಲ್ಲಿಒಂದರಿಯೆ ನಿನ್ನ ವಂದಿಸುವ ಬಗೆಬಂದೊದಗೊ ನೀನೆನ್ನ ವದನಕೆ 3
ಬಂದೆ ಬಂದೆ ನೀ ಬಂದಂತೆ ಕರ-ತಂದುದಕೆ ಫಲ ನೀನೆ ಬಲ್ಲೆಸಂದರುಶನ ನಿನಗೆ ನೀ ಮಾಳ್ಪಂದವನು ನೋಳ್ಪಾತುರದಿ ನಾ 4
ಏನು ಕೊಡಲಿಲ್ಲ ಏನು ಬೇಡಲಿಲ್ಲಏನು ಪಡೆಯಲೊ ಕರುಣಿಯೆನೀನು ಕೊಟ್ಟ ಸ್ವಾತಂತ್ರ್ಯದ ಫಲನಿನಗೆ ಅರ್ಪಿಸಬೇಕೆನುತ ಇಲ್ಲಿ 5
ರಕ್ಷಶಿಕ್ಷಕ ಮೋಕ್ಷದಾಯಕಸೂಕ್ಷ್ಮ ಘನ ಮಹಾವ್ಯಾಪಕಕುಕ್ಷಿಯೊಳು ಜಗದ್ಭರಿತ ಪೂರಿತಅಕ್ಷಯಫಲದಾಯಕ 6
ನಮೋ ನಮೋ ನಾಗಾರಿವಾಹನನಮೋ ನಮೋ ಸುರಸುಪ್ರಸನ್ನನೆನಮೋ ನಮೋ ಗೋಪಾಲವಿಠಲನಮಿಪ ಭಕ್ತರ ಸಲಹುವನೆಂದು 7