ಮುಖ್ಯಕಾರಣ ವಿಷ್ಣು ಸ್ವತಂತ್ರನೆಸಖ್ಯ ಸತ್ವರ ಪೋಷ್ಯ ಸರಸಿಜಾದ್ಯಮರೇಶ ಪ.
ತಿಳಿವೆಂಬುವ ನೀನೆ ತಿಳಿದು ತಿಳಿಸುವ ನೀನೆತಿಳಿವ ವಸ್ತುವು ನೀನೆ ತೀರ್ಥಪದನೆ ತಿಳಿದುದಕೆ ಫಲನೀನೆ ತಿಳಿಯಗೊಡದವ ನೀನೆತಿಳಿವ ಸ್ವತಂತ್ರ ನಿನ್ನದು ತಿಳಿಸೊ ಸರ್ವೇಶ 1
ಧ್ವನಿ ವರ್ಣಉಭಯ ಶಬ್ದದ ವಾಚ್ಯನು ನೀನೆಗುಣದೇಶಕಾಲ ಕರ್ಮದನು ನೀನೆತನು ಕರಣ ವಿಷಯ ಮನ ಜೀವಸ್ವಾಮಿಯು ನೀನೆಅಣುಮಹಜ್ಜಗದಿ ಬಹಿರಂತರದಿ ವ್ಯಾಪ್ತ 2
ಹಯಾಸ್ಯ ಧನ್ವಂತ್ರಿ ವೃಷಭ ಮಹಿ-ದಾಸ ದತ್ತಾತ್ರಯಾದ್ಯಮಿತ ರೂಪಈಸು ರೂಪದಿ ಜ್ಞಾನವಧಿಕಾರಿಗಳಿಗೊರೆದುಪೋಷಕನು ಆದೆ ಕೃಪಾಳುವೆ ಶ್ರೀಶ 3
ಚೇತನನು ನಾನು ನೀ ಚೇಷ್ಟೆ ಮಾಡಿಸಲಾಗ-ಚೇತನನು ಸರಿ ನೀನು ಸುಮ್ಮನಿರಲುಯಾತರವ ನಾನಯ್ಯ ನಿನ್ನಧೀನವು ಎಲ್ಲಚೇತನನಹುದೊ ನೀ ಚಲಿಸೆ ಚಲಿಸುವೆನು 4
ತಿಳಿ ಎನ್ನುವುದಕಾಗಿ ತಿಳಿಯತಕ್ಕದ್ದು ನೀನೆತಿಳಿಸೊ ಸೋತ್ತುಮರೆಲ್ಲ ತಿಳಿದ ಶೇಷತಿಳಿವಲ್ಲಿ ತಿಳಿಪಲ್ಲಿ ತಿಳುವಳಿಕೆ ನೀನಾಗಿಚಲಿಸದಲೆ ಮನ ನಿಲಿಸೊ ಗೋಪಾಲವಿಠಲ 5