ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಧ್ವಮತ ಪೊಂದದೆ ಬದುಕಿದವನೂ ಹದ್ದು ಕಾಗಿ ಬದುಕಿ ಕಾಲವನು ಕಳೆದಂತೆ ಪ ಸಕಲೇಂದ್ರಿಯಗಳು ಇದ್ದು ನಯನೇಂದ್ರಿಯ ಇಲ್ಲದಂಅ.ಪ. ಫಲಪುಷ್ಪಯಿಲ್ಲದಾ ಗಿಡಬಳ್ಳಿ ಇದ್ದಂತೆ ಮಳೆಯಿಲ್ಲದಾ ಬೆಳಸು ನೋಡಿದಂತೆ ಚಲುವನಾದಡೆ ಏನು ಗುಣಹೀನನಾದಂತೆ ಖಳರು ನಿತ್ಯಾಕರ್ಮ ಚರಿಸಿದಂತೆ 1 ಉತ್ತಮರ ಕೂಡದಾ ಯಾತ್ರೆ ಮಾಡಿದಂತೆ ಕತ್ತೆ ಪರಿಮಳ ಪೊತ್ತು ತಿರುಗಿದಂತೆ ಮೃತ್ತಿಕೆ ಶೌಚ ಇಲ್ಲದೆ ಆಚಾರ ಮಾಡಿದಂತೆ ಸತ್ತ ಹೆಣಕ್ಕೆ ವಸ್ತ್ರ ಶೃಂಗರಿಸಿದಂತೆ2 ನಿಶಿಕರ ಇಲ್ಲದಾ ತಾರೆಗಳು ಇದ್ದಂತೆ ವಸುಧಿಪತಿಯಿಲ್ಲದಾ ರಾಜ್ಯದಂತೆ ಹಸಿವೆ ಇಲ್ಲದವನು ಮಧುರನ್ನ ಉಂಡಂತೆ ಹಸುಗಳಿಲ್ಲದ ಮನೆ ವೊಪ್ಪಿದಂತೆ 3 ತಾರತಮ್ಯಗಳಿಲ್ಲದ ವೇದ ಓದಿದಂತೆ ಪುರಂದರದಾಸರು ಪೇಳಿದಂತೆ ಸಿರಿ ವಿಜಯವಿಠ್ಠಲನ ಕಾರುಣ್ಯ ಪಡಿಯದವ ಅಧಮನಂತೆ 4
--------------
ವಿಜಯದಾಸ