ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಂಡನಾದೆನು ನಾನು ಸಂಸಾರದಿ |ಕಂಡು ಕಾಣದ ಹಾಗೆ ಇರಬಹುದೆ ನರಹರಿಯೆ ಪಕಂಡ ಕಲ್ಲುಗಳಿಂಗೆ ಕೈಮುಗಿದು ಸಾಕಾದೆ |ದಿಂಢೆಗಾರರ ಮನೆಗೆ ಬಲು ತಿರುಗಿದೆ ||ಶುಂಡಾಲನಂತೆನ್ನ ಮತಿ ಮಂದವಾಯಿತೈ |ಪುಂಡರೀಕಾಕ್ಷನೀ ಕರುಣಿಸೈ ಬೇಗ1ನಾನಾವ್ರತಂಗಳನು ನಾ ಮಾಡಿ ಬಳಲಿದೆನು |ಏನಾದರೂ ಎನಗೆ ಫಲವಿಲ್ಲವು ||ಆ ನಾಡು ಈ ನಾಡು ಸುತ್ತಿ ನಾ ಮರುಳಾದೆ |ನೀನಾದರೂ ಕೃಪೆಯನಿಡು ಬೇಗ ಹರಿಯೇ 2ಬುದ್ಧಿಹೀನರ ಮಾತಕೇಳಿನಾ ಮರುಳಾದೆ |ಶುದ್ಧಿ ಇಲ್ಲದೆ ಮನವು ಕೆಟ್ಟು ಹೋಯ್ತು ||ಮಧ್ವನುತಸಿರಿಪುರಂದರವಿಠಲ ತತ್ವದ |ಸಿದ್ಧಿಯನು ದಯೆಗೆಯ್ದು ಉಳುಹು ನೀ ಎನ್ನ 3
--------------
ಪುರಂದರದಾಸರು