ಕಂಗಳಿಗೆ ಹಬ್ಬವಾಯಿತಯ್ಯಮಂಗಳಾತ್ಮಕ ಪುರಂದರದಾಸರನು ಕಂಡು ಪ
ಸಕಲ ತೀರ್ಥಕ್ಷೇತ್ರ ಯಾತ್ರೆ ಮಾಡಿದ ಫಲವುಸಕಲ ಸತ್ಕರ್ಮ ಸಾಧಿಸಿದ ಫಲವುಭಕುತಿಯಿಂ ಭಾಗೀರಥೀ ಮಜ್ಜನದ ಫಲವುರುಕುಮಿಣಿ ಪತಿಯ ಪದ ಭಕುತರನು ಕಂಡು 1
ಇವರ ನರರೆಂದವರು ನರಕದಲಿ ಬೀಳುವರುಕವಿಜನರು ಒಪ್ಪಿ ಕೈಹೊಡೆದು ಹೇಳಿರಲುಅವನಿಯೊಳಗತಿ ದುರ್ಲಭವು ನಂದಗೋಪನ್ನಕುವರನಿದ್ದೆಡೆಯ ವೈಕುಂಠವೆಂಬುವರ ಕಂಡು 2
ಧನ್ಯನಾದೆನು ನಾನು ಮನುಜನ್ಮದಿ ಪುಟ್ಟಿಮಾನ್ಯನಾದೆನು ಇನ್ನು ಈ ಜಗದೊಳಗೆಪನ್ನಂಗಶಯನ ಶ್ರೀಕೃಷ್ಣನ ದಾಸರನುಚೆನ್ನಾಗಿ ಸ್ಮರಿಸಿ ಪಾವನ್ನನಾದೆನಿಂದು 3