ಆರತಿಯ ಬೆಳಗಬನ್ನಿರೆ ಆರತಿಯ ಬೆಳಗಬನ್ನಿರೆ
ಪಾರ್ವತಿದೇವಿಯರಿಗೆ
ಕೀರುತಿ ಕೊಂಡಾಡುತಲಿ ಪರ್ವತರಾಜನ ಮಗಳಿಗೆ
ಆರತಿಯ ಬೆಳಗಬನ್ನಿರೆ ಪ
ವಾಲೆ ಕಠಾಣಿ ಚಿಂತಾಕು ಮ್ಯಾಲೆ ಸರಿಗೆ ಸರ ಮುತ್ತುಗಳು
ಕಾಲಗೆಜ್ಜೆಸರಪಳಿನಿಟ್ಟ ಫಾಲಾಕ್ಷನ ಮಡದಿಗೆ 1
ರಂಗುಮಾಣಿಕ್ಯದ ಹೆರಳು ಬಂಗಾರದಾಭರಣವಿಟ್ಟು
ದುಂಡುಮಲ್ಲಿಗೆ ಮುಡಿದು ಕುಳಿತ ಮಂಗಳಾದೇವಿಯರಿಗೆ 2
ದುಂಡುಮುತ್ತಿನ ಮುಕುರ್ಯವು ಚಂದ್ರ ಬಾಳ್ಯಬುಗುಡಿನಿಟ್ಟು
ದುಂಡು ಹರಡಿ ಕಂಕಣಕಮಲ ದ್ವಾರ್ಯನಿಟ್ಟ ವಾರಿಜಾಕ್ಷಿಗೆ 3
ಜಾತಿಮಾಣಿಕ್ಯದ ವಂಕಿ ನೂತನಾದ ನಾಗಮುರಿಗೆ
ಪ್ರೀತಿಯಲಿ ಪೀತಾಂಬ್ರನುಟ್ಟು ಜ್ಯೋತಿಯಂತೆ ಹೊಳೆವೊ ಗೌರಿಗೆ 4
ನೀಲವರ್ಣ ಭೀಮೇಶಕೃಷ್ಣ ಧ್ಯಾನಮಾಡುತ ಕೃಷ್ಣನ
ನೀಲಕಂಠನ ಸಹಿತ ಕುಳಿತ್ವಿಶಾಲನೇತ್ರೆ ಪಾರ್ವತಿಗೆ5