ಹರಿಯ ಚರಣ ನಿರುತ ಸ್ಮರಿಸಲೊ ಮೂಢ ಮನುಜ
ನಿತ್ಯ ಪಾಡಿ ಭಜಿಸು
ನರಕಭಯ ವಿಮುಕ್ತನಾಗೆಲೋ ಪ
ಹಿಂಡುಬಳಗ ಕೂಡಿಹಾಕಿದಿ ಆಸಕ್ತನಾಗಿ
ಬಂಡಿಹೊನ್ನು ಘಳಿಸಿ ಹೊಳಿದಿ ಬಗೆಬಗೆಯಲಿಂಡು
ಬಂಡÀ ಬೆಳಸಿ ತುಂಡಗ್ವಾಣದಿ ತುಂಡಿನೇಗ ಜವನಭಟರು [?]
ಬೆನ್ನ ಬಿಡವು 1
ಪಗಲು ಹರಟಿಯೊಳಗೆ ಪೋದಿತು ಆಯುಷ್ಯದೊಳಗೆ
ಮಿಗಿಲು ರಾತ್ರಿ ವಿಷಯಗಳೆಯಿತು ಸುಗಂಧದ್ರವ್ಯ
ಸೊಗಸಿನಿಂದ ಮೈಯ್ಯ ಮುಸುಕಿತು ಜಗದಿ ಘೂಳೆಯಂತೆ ಮೆರೆದಿ
ಸೊಗಸಿನಂಗ ತೊಲಗಿತಲ್ಲಿ 2
ದುಷ್ಟತನಕೆ ದಾರಿ ಕೊಡದಿರು ಲೋಕದಲಿ ನೀನು
ಭ್ರಷ್ಟನಾಗದೆ ತುಷ್ಟಿಯಿಂದಿರು ಕಷ್ಟಸುಖಗಳ್ಹರಿಗೆಯರ್ಪಿಸಿ
ಸೃಷ್ಟಿಪರ ನರಸಿಂಹವಿಠಲನಷ್ಟ ವಿಧದಿ ಪೂಜೆಗೈದು
ಇಷ್ಟ ಮುಕ್ತಿ ಸುಖ ಪಡೆಯೋ 3