ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಾರತೀಶ ಹರಿದಾಸನಾದನಿಲ್ಲೀ ವೀಣೆಯ ಧರಿಸುತಲೀ ಪ. ಭಾರಿಭಾರಿಗವತಾರ ಮಾಡಿ ಬಳಲೀ ಆನಂದದಲ್ಲೀ ಅ.ಪ. ತ್ರೇತೆಯಲ್ಲಿ ಶ್ರೀ ರಾಮದೂತನಾಗಿ ತನುಸುಖವ ನೀಗಿ ಪ್ರೀತಿ ಭಕ್ತಿಯಲಿ ರಾಮ ಕಾರ್ಯಕಾಗಿ ತನುವಪ್ಪಿಸಿ ಬಾಗಿ ಖ್ಯಾತಿ ಪಡೆದು ಶರಧಿಯ ಲಂಘಿಸಿ ಪೋಗಿ ಸೀತೆಯ ಕಂಡೆರಗಿ ವೀಹೋತ್ರಗೆ ಪುರವಪ್ಪಿಸಿ ತಿರುಗೀ ರಾಮರ ಕಂಡೆರಗಿ 1 ಕುಂತಿಯ ಜಠರದಿ ಜನಿಸಿ ಭೀಮನೆನಿಸೀ ಬಕಮುಖರನೆ ಜೈಸಿ ಸಂತೋಷದಿ ಸೌಗಂಧ ಸತಿಗೆ ಸಲಿಸೀ ಕೌರವರ ಸಂಹರಿಸೀ ಅಂತರಂಗದಲಿ ಕೃಷ್ಣನಂಘ್ರಿ ಭಜಿಸಿ ಪಾಂಡವರನೆ ಮೆರಸೀ ಕಂತುಪಿತನ ಕಡುಕೃಪೆಯ ಪಡೆದು ಸುಖಿಸೀ ಮೇಲ್ತೋರದೆ ಸ್ಮರಿಸೀ 2 ಮೂರನೆ ರೂಪದಿ ಮುನಿಯಾಗವತರಿಸೀ ದುರ್ಮತಗಳ ಜೈಸೀ ಸಾರತತ್ವಮತ ಸಜ್ಜನರಿಗೆ ತಿಳಿಸೀ ಸರ್ವೋತ್ತಮ ಹರಿ ಎನಿಸೀ ಆರು ಅರಿಯದಂತೆ ದಾಸತ್ವವಚರಿಸೀ ದುರ್ಮತಗಳ ಜೈಸೀ ತೋರಿ ತೋರದಂತೆ ಸದ್ಗ್ರಂಥದಿ ತಿಳಿಸೀ ಯತಿ ಕುಲಜರೋಳ್ ನಿಲಿಸೀ 3 ಮೀಸಲ ದಾಸ್ಯವ ಮೂರವತಾರದಲ್ಲಿ ಚರಿಸಲು ಕಲಿಯಲ್ಲೀ ವ್ಯಾಸ ಮುನಿಯು ಬಹಿರಂಗಪಡಿಸೆ ಚಲ್ಲೀ ನಾರದ ಮುನಿಯಲ್ಲೀ ಪುರಂದರ ಗುರುವೆನಿಸುತಲೀ ಮೆರೆಯಲು ಜಗದಲ್ಲೀ ಮೀಸಲು ಉಳಿಯದೆ ಪೋಯಿತೆಂದು ಇಲ್ಲೀ ದಾಸ ತಾನಾಗುತಲೀ 4 ದಾಸತನದ ಆನಂದವನನುಭವಿಸೇ ದೇವತೆಗಳು ಬಯಸೇ ಭೂಸುರ ಜನ್ಮದಿ ಭೂಮಿಯಲವತರಿಸೇ ಹರಿದಾಸರಾಗಿ ಸುಖಿಸೇ ವಾಸುದೇವಗೆ ತಾ ನಿಜದಾಸನು ಎನಿಸೇ ಮಾರುತಿ ಇದ ಬಯಸೇ ಶ್ರೀಶ ಗೋಪಾಲಕೃಷ್ಣವಿಠಲದಾಸಾ ಬೆಳಗಾವಿ ವಾಸಾ 5
--------------
ಅಂಬಾಬಾಯಿ
ವಿಜಯವಿಠ್ಠಲ ಶ್ರೀ ವಿಜಯವಿಠ್ಠಲ ಪ ವನಚರ ನಗಧರ ಅವನಿಯ ಉದ್ಧಾರ ಕಾನನ ವೇಗದಿ ಭು- ವನ ದಾನದ ನೆವನನು ಮಾಡಿ ಗಂಗೆಯ ಹ - ವಣದಿ ಪಡದೋ ಶ್ರೀ ವಿಜಯವಿಠ್ಠಲಾ 1 ಛಲದಿಂದ ಕುಲ ಕೋಲಾಹಲ ಮಾಡಿಸಿ ನೀ ತರಿದೆ ಬಾಲೆಯರ ಬಾಲರ ಬಿಡದೆ ಸುಲಭದಿ ಕರ್ಣಗೆ ಒಲಿದು ಪೇಳಿದೆ ಆ ಸುಲಲಿತಾ ಭಾರ್ಗವ ವಿಜಯವಿಠ್ಠಲ2 ಶತಮಖರಿಪು ಲೋಕಪಿತನೊರವಿನಿಂದಲಿ ಖತಿ ಸಕಲರಿಗೆ ನೀವು ತರಿದಿರಲು ಪತಿತಪಾವನ ರಾಮ ಅತಿ ವೇಗ ದನುಜನ ಹತವ ಮಾಡಿದೆಯೊ ಶ್ರೀ ವಿಜಯವಿಠ್ಠಲ3 ಬಕಮುಖ ದನುಜರ ಹಕ್ಕಲಗೊಳಿಸಿ ಬಲು ಯುಕುತಿಯಿಂದಲಿ ಭಕುತರ ಪೊರದೆ ವಿಕಸಿತ ಕಮಲನಯನ ಕಂಜನಾಭನೆ ಸಕಲ ಸುರರ ಪಾಲ ವಿಜಯವಿಠ್ಠಲಾ 4 ರಕ್ಕಸ ಮರ್ದನ ದಿಕ್ಕು ಮೋಹಿಪ ಕೃಷ್ಣ ರುಕ್ಮಿಣಿ ಪತಿಯಾದಾ ಚಕ್ರಪಾಣಿ ಉಕ್ಕಿದ ಮಗಧನ ಸೊಕ್ಕು ಮುರಿದು ಕಪಿ ರೆಕ್ಕ ಆಳ್ವನಿಗೆ ಒಲಿದೆ ವಿಜಯವಿಠ್ಠಲಾ 5 ಘನವಾದ ವಿಶ್ವರೂಪವ ತೋರಿದೆ ದಿನಮಣಿ ಕೋಟಿ ಅಧಿಕ ಕಾಂತಿ ನರಹರಿ ವನಜ ಸಂಭವನಯ್ಯ ವಿಜಯವಿಠ್ಠಲಾ 6 ವನಿತೆಯರ ವ್ರತ ಭಂಗವ ಮಾಡಿ ದಾನವರ ಮೋಹಿಸಿದೆಯೊ ಪವನನೊಡಿಯಾ ಉನುಮತ ಜನ ಕುಲ ಸನುಮತ ಶಾಸ್ತ್ರವ ವ- ದನದಲಿ ಮೆದ್ದಿಯೊ ವಿಜಯವಿಠ್ಠಲಾ 7 ರಜೋತಮ ಗುಣವನು ಭುಂಜಿಸುತ ವ್ರಜ ಭೂಮಿ ನಿಜವಾಗಿ ವ್ಯಾಪಿಸಿರೆ ಸುಜನಪಾಲ ನೀನು ವದಗಿ ವಾಜಿಯನೇರಿ ಭಜನಗೈಸಿದ ವೇಗ ವಿಜಯವಿಠ್ಠಲಾ 8 ಗೋಕುಲದಲಿ ಅನೇಕ ಲೀಲೆಯ ತೋರಿ ಬೇಕಾದ ವರ ಪುಂಡರೀಕಗಿತ್ತೆ ಸಾಕಾರ ಗುಣ ಪೂರ್ಣ ವೇಣುಗೋಪಾಲ ವಿ ವೇಕವ ಕೊಟ್ಟ ಕಾಯನ್ನ ವಿಜಯವಿಠ್ಠಲಾ9
--------------
ವಿಜಯದಾಸ