ಜಯ ಜಯಜಗತ್ಪ್ರಾಣತ್ರಾಣ ಜನನ ಮರಣಕ್ಲೇಶಹರಣ
ಜಯ ಪಾವನ ದಿವ್ಯಚರಣ ಪ.
ಸರ್ವದೇವತಾಗ್ರಗಣ್ಯ ಸರ್ವಜೀವೋತ್ತಮ ಶರಣ್ಯ
ಪೂರ್ವಾಮರಪುರದಹನ ಪೂರ್ಣಗುಣಗಣ 1
ವೈಷ್ಣವ ಜನ ಶಿರೋರತುನ ವಿಶ್ವಾಂತರ್ಗತಭಾವನ
ತೀಕ್ಷ್ಣಮನೋದುಷ್ಟದಮನ ಶಿಷ್ಟಜೀವನ 2
ಭಕುತಿಜ್ಞಾನನಿಧಿ ಕಲ್ಯಾಣ ಭಜಕಜನಭವಾಬ್ಧಿತರಣ
ಲಕುಮಿನಾರಾಯಣಶರಣ ಬಕವಿದಾರಣ 3