ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದದೆ ಎನಗೆ ಬರಿದೆ ದೂರು ಬಂದೊಂದು ಅವಗುಣದವನೆಂಬೊ ಮಾತು ಪ ಕಾಮಕ್ರೋಧಂಗಳು ಹೆಚ್ಚಿಸಿ ಮನದೊಳು ತಾಮಸ ಬುದ್ಧಿ ವಿಶೇಷವಾಗಿ ಕಾಮುಕವಾಗಿ ನಡವಳಿ ನಡಸಿದ ಈ ಮನದ ಅಧಿಕಾರಿ ಶ್ರೀಕೃಷ್ಣನೊ ನಾನೊ 1 ಅನ್ಯಾಯ ಅನ್ಯಾಯ ಅಸಡ್ಡಾಳ ಅಪದ್ಧ ನನ್ನ ನಿನ್ನದು ಎಂಬೊ ಬಡದಾಟವು ತನ್ನ ಸ್ಮರಣಿ ತಪ್ಪಿ ವಿಷಯಕ್ಕೆ ಎರಗಿಸಿ ಮುನ್ನ ಮನದ ದಾತಾ ಶ್ರೀಕೃಷ್ಣನೊ ನಾನೊ 2 ಮನೆ ಮನೆಗಳ ಪೊಕ್ಕು ಮಕ್ಕಳಾಟಿಕೆಯಿಂದ ವನುರುತರ ರೂಪಿಗೆ ಸೋತು ಆತು ಕನಿಕರಿಸಿ ಕ್ರಮಗೆಟ್ಟು ತಿರುಗಿಸುವ ತನವು ಮಾಡಿದಾತಾ ಕೃಷ್ಣನೊ ನಾನೊ 3 ನೀತಿ ನಿರ್ಣಯ ಮರೆದು ಪಾತಕದೊಳು ಬಿದ್ದು ಪ್ರೀತಿಯಲಿ ಅತಿಥಿಗಳ ವಂದಿಸದೆ ಯಾತಕ್ಕೆ ಬಾರದಾ ಚರಿತೆ ನಡೆವಂಥ ಚೇತನ ಕಲ್ಪಿಸಿದ ಕೃಷ್ಣನೊ ನಾನೊ 4 ಆವಾವ ದುಷ್ಕರ್ಮಗಳ ಮಾಡಿ ಉತ್ತಮ ದೇವ ಬ್ರಾಹ್ಮಣರ ಪೂಜಿಸಲಿಲ್ಲವು ಶ್ರೀ ವಿಜಯವಿಠ್ಠಲ ವೆಂಕಟಗಲ್ಲದ ಜೀವ ಪುಟ್ಟಿಸಿದಾತ ಕೃಷ್ಣನೋ ನಾನೊ 5
--------------
ವಿಜಯದಾಸ