ಚಿಂತೆ ಪರಿಹರ ಮಾಡೋ ಎನ್ನಯ್ಯ
ಸಜ್ಜನರ ಪ್ರಿಯ ಪ
ಚಿಂತೆ ಪರಿಹರ ಮಾಡೊ ಎನ್ನಯ
ಚಿಂತೆ ಪರಿಹರ ಮಾಡಿ ಎನ್ನ
ಅಂತರಂಗದಿ ನಿಮ್ಮ ನಿರ್ಮ
ಲಂತ:ಕರುಣದ ಚರಣವಿರಿಸಿ
ಸಂತಸದಿ ಪೊರೆ ಸಂತರೊಡೆಯ ಅ.ಪ
ನಿಮ್ಮ ಪಾದವ ನಂಬಿಕೊಂಡಿರುವ ಈ ಬಡವನನ್ನು
ಕಮ್ಮಿ ದೃಷ್ಟಿಯಿಂ ನೋಡದಿರು ದೇವ ನಿನ್ನ ಬಿಟ್ಟೆನ
ಗ್ಹಿಮ್ಮತನ್ಯರದಿಲ್ಲ ಜಗಜೀವ ಭಜಕಜನ ಕಾವ
ಮೂಡಿಮುಳುಗುತಿಹ್ಯದೈ
ಸಮ್ಮತದಿ ಸಲಹೆನ್ನ ದಯಾನಿಧಿ ಬ್ರಹ್ಮಬ್ರಹ್ಮಾದಿಗಳ ವಂದ್ಯನೇ 1
ಆರುಮೂರರಿಕ್ಕಟ್ಟಿನೊಳು ಗೆಲಿಸೋ ಘನಪಿಂಡಾಕಾರ
ಆರು ಎರಡರ ಸಂಗ ತಪ್ಪಿಸೋ ಮಹಬಂಧ ಬಡಿಪ
ಘೋರ ಸಪ್ತಶರಧಿ ದಾಂಟಿಸೋ ತವದಾಸನೆನಿಸೊ
ಗಾರುಮಾಡಿ ಕೊಲ್ಲುತಿರ್ಪ ದೂರಮಾಡೆನ್ನ ದುರಿತದುರ್ಗುಣ
ಸೇರಿಸು ತ್ವರ ದಾಸಸಂಗದಿ ನಾರಸಿಂಹ ನಾರದವಿನುತ 2
ಪಾಮರತ್ವ ತಾಮಸವ ಬಿಡಿಸೋ ವಿಷಯಲಂಪಟ
ಪ್ರೇಮ ಮೋಹ ಕಾಮ ಖಂಡ್ರಿಸೋ ಹರಲಿರುಳು ನಿಮ್ಮ
ಭಜನಾನಂದ ಕರುಣಿಸೊ ಸುಚಿಂತದಿರಿಸೊ
ಕಾಮಿತಜನಕಾಮಪೂರಿತ ನಾಮರೂಪರಹಿತಮಹಿಮ
ಸ್ವಾಮಿ ಅಮಿತಲೀಲ ವರ ಶ್ರೀರಾಮ ಪ್ರಭು ತ್ರಿಜಗದ ಮೋಹ 3