ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾರ ಕೃತಕವು ಇದು ವಿಚಾರವನು ಮಾಡಿ ಕಾರಣೀಕದ ಸ್ವಪ್ನ ಕಾಣುತಿದೆ ನೋಡಿ ಪ ಕಾಳ ಮೇಘಧ್ವನಿಯು ಗಾಳಿ ಮಳೆ ಮಿಂಚುಗಳು ಧಾಳಿ ಇಡುತಿಹ ಸಿಡಿಲು ಬಹಳ ಕತ್ತಲೆಯು ಹಾಳೂರ ಮಧ್ಯದೊಳು ಬೀಳುತಿಹ ವಾರಿಗಳು ಮೃಗ ಮೈಮೇಲೆ ಬೀಳುವುದ 1 ವೃಷ್ಟಿ ತೀರುವ ತನಕ ಇಟ್ಟೆಡೆಯೊಳಿರುತಿರ್ದು ಕೆಟ್ಟ ಪಥದಲಿ ಚಾರುಗಟ್ಟಿವಿಳಿದು ಗಟ್ಟಿಯಾಗಿಹ ಚಳಿಯು ಹುಟ್ಟಿ ಕೈಕಾಲುಗಳು ಒಟ್ಟಾಗಿ ಕೂಡಿರ್ದು ದೃಷ್ಟಿ ಬಿಡುತಿಹುದು 2 ಬಿಸಿನೀರ ಮಳೆಯೊಳಗೆ ನುಸಿತ ಗುಣೆಯಸೆಯೊಳಗೆ ಎಸೆದು ತೋರುವ ಉರಿಯ ಹಸಿಯ ಮೆಣಸಿನೊಳು ಗಸಣಿಯನು ಕೈಕೊಂಡು ಕಸಮುಸುರೆಯಾಗಿರ್ದು ಉಸುರಲಾರದೆ ತೃಷೆಯ ಹಸಿದ ಬಳಲಿಕೆಯ 3 ನಿಂದೆಯಾಗಿಹ ಮೃಗದ ಚಂದವನು ಮೈಗೊಟ್ಟು ಬಂದುದೆನಗೈಶ್ವರ್ಯ ಎಂದು ಹರುಷಿಸುತ ಮಂದಹಾಸದ ಒಳಗೆ ಬಂಧನದಲಿರುತಿರ್ದು ಮುಂದುವರಿದು ವ್ಯಸನದೊಳು ಬಂದಿರ್ದ ಬಗೆಯ 4 ಮೂರು ಮಂದಿಯು ಬಂದು ಸೇರಿದರು ದೂರಿಡುವ ಆರು ಕರೆದರು ತಾನು ಬಾರೆನೆಂಬ ಮೇರೆಯಾಗಿಯೆ ಬಪ್ಪ ಮೂರಾರು ತಾ ಬಿಡುವ ಸಾರಿ ಚೋರತ್ವದಲ್ಲಿ ಪರವೂರ ಸುಲಿವ 5 ಮೇಲು ದುರ್ಗವ ಕಂಡು ಗಾಳಿಗೋಪುರವನ್ನು ಆಳ ಬಲುಹುಳ್ಳವನು ಅವಸರದೊಳು ನೂಲಯೇಣಿಯನಿರಿಸಿ ಏರಿಳಿದು ಬಾಹಾಗ ಕಾಲು ಜಾರಿಯೆ ಬಸಿದ ಶೂಲದೊಳು ಬೀಳುವುದು 6 ಹೀಗಿರುವ ಕೃತ್ಯಗಳು ನಾಗಶಯನನಿಗರುಹು ಬೇಗದೊಳು ಪರಿಹರಿಪ ಯೋಗವನು ಕೊಡುವ ನಾಗಗಿರಿವಾಸನಹ ವರಾಹತಿಮ್ಮಪ್ಪ ತೂಗುವನು ತೊಟ್ಟಿಲೊಳು ಆಗುವುದನಿತ್ತು 7
--------------
ವರಹತಿಮ್ಮಪ್ಪ
ಸತ್ಯವತಿಸೂನು ವೇದವ್ಯಾಸ ಲಕುಮಿಶಾ | ನಿತ್ಯ ನಿನ್ನ ನೆನೆಸುವ ಭೃತ್ಯರೊಡನೆ ಪೊಂದಿಸು ದೇವ ಪ ವಾಸುಕಿ ಇಲ್ಲಿ ಮದನಾರಿಯ ವಲಿಸಿ | ತನ್ನ ಬದುಕುವಗೋಸುಗ ಉಪಾಯದಲಿ ನಿಂದರೆ | ವೈರಿ ತಾರಕನ್ನ ಸದೆದು | ಇಂದ್ರಾದ್ಯರ ಕೂಡ ಮುದದಿಂದ ಸ್ಥಿರವಾಗಿ ಮೆರೆದ 1 ಷಣ್ಮೊಗನು ಸತತ ತಾನು ಅನ್ನದಾನ ಮಾಡುತ ಹಾ | ವನ್ನನಾಗುದಕ್ಕೆ ಪ್ರಸನ್ನ ಮೋದದಲಿ | ನಿನ್ನ ಪೊಲಿಸಿಲ್ಲಿಗೆ ಬಾಹಾ | ದೆನ್ನ ಭಕುತಿಗೆ ಮೆಚ್ಚಿ | ವಾಸುದೇವ 2 ಕಲಿಯುಗದೊಳಗೆ ವಿಪ್ರಕುಲದಲಿ ಮಾರುತಿ ಎನಿಸಿ | ಬಲು ಮಾಯಿಗಳ ಮೋಹನ ಶಾಸ್ತ್ರವಳಿದು ಬದರಿಯ | ಬಳಿಗೆ ಬಂದು ಶಿಲಾಪ್ರತಿಮೆಗಳನೆ ಪಡೆದು ತಂದು | ಪೊಳೆವಂದದಲಿ ಇಳೆಯೊಳಗೆನಲು 3 ಅಂದಿನಾರಭ್ಯ ಪಾರ್ವತಿನಂದನ ಕುಕ್ಕೆಪುರದಲ್ಲಿ | ನಿಂದು ಸರ್ವರಿಂದ ಪೂಜೆ ಚಂದದಿ ಕೊಳುತಾ | ಮಂದ ಕುಷ್ಟರೋಗಗಳ ಹಿಂದುಮಾಡಿ ಓಡಿಸಿ | ಗೋ ಪಾದ ಧ್ಯಾನದಿಂದ ಲೋಲಾಡುತಲಿರೆ 4 ಮರುತದೇವ ಸಂಪುಟಾಕಾರವಾದ ನೀನದರೊಳು | ಚಾರು ಸಿಲೆ ರೂಪವಾದ ಪಾರಾಶರ ಋಷಿ | ಧಾರುಣಿಗೆ ರಹಸ್ಯವ ತೋರಿಕೊಳುತಲಿ | ಮಾರ ಗೊಲಿದ ವಿಜಯವಿಠ್ಠಲಾ 5
--------------
ವಿಜಯದಾಸ