ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಮೋ ನಮೋ ಗುರುರಾಜ ಪ ಭಾಸುರ ಪಂಪಾ ತುಂಗಾ ತೀರವಾಸ | ಪಾಲಿಸೊ ತವದಾಸ ಅ.ಪ. ರತಿಪತಿ ಜನಕನ ವರ ಶಯ್ಯಾಂಶದಲಿ | ವಾಯ್ವಾವೇಶದಲಿ ಜನಿಸುತ ಮೋದದಲಿ ವಿತತನು ವಿಷ್ಣುವು ವಿಶ್ವದೊಳೆನುತಲಿ | ಅತಿಶಯ ಭಕ್ತಿಯಲಿ ಪಿತಗೆ ತೋರ್ದ ಪ್ರಹ್ಲಾದನೆ ಹಿತದಲ್ಲಿ | ಅವತರಿಸಿದೆ ಇಲ್ಲಿ 1 ಧರೆಯೊಳಗೆ ಪ್ರಖ್ಯಾತ ಪರಮಾತ್ಮನ ಪದಶರಣ ವ್ಯಾಸಯೋಗಿ | ಯೆನಿಸುತಲಿ ವಿರಾಗಿ ತರತಮ ಪಂಚಕ ಪ್ರಭೇದವ ಸ್ಥಾಪಿಸಲು | ದುರುಳರ ಖಂಡ್ರಿಸಲು ಪರಿಪರಿ ಶಾಸ್ತ್ರವ ಶ್ರೀ ಪಾದರಾಯರಲಿ | ಓದಿದ್ಯೊ ಭಕ್ತಿಯಲಿ 2 ಪುರಂದರ ಕನಕರಿಗೆ ಆದರದಿಂದಲಿ ಬೋಧಿಸಿ ತತ್ವವನು | ಮಾಡಿ ಪುನೀತರನು ವೇದಶಾಸ್ತ್ರ ತರ್ಕಾದಿ ಗ್ರಂಥಗಳಲಿ | ಕೋವಿದರರಸುತಲಿ ನೀ ದಯದಿಂದಲಿ ಸೇರಿಸಿ ಪರಿಷತ್ತು | ಭಾವಿಸಿ ವಿದ್ವತ್ತು 3 ಅರ್ಥಿಕಲ್ಪಿತ ವರ ಕಲ್ಪವೃಕ್ಷವಾಗಿ | ನಿತ್ಯದಿ ಮಹಯೋಗಿ ಪ್ರಥ್ಯರ್ಥಿ ಮದಕರಿ ಪಂಚವಕ್ತ್ರನಾಗಿ | ಪ್ರತ್ಯಕ್ಷದಿ ತಾಗಿ ಹೊರ ಚೆಲ್ಲುತೆ ನೀನು ಸ್ತುತ್ಯ ಕೃಷ್ಣ ಭೂಮೀಂದ್ರನ ಕುಹುಯೋಗ | ಪರಿಹರಿಸಿದೆ ಬೇಗ 4 ವ್ಯಾಸಾಂಬುಧಿಯನು ಕಟ್ಟಿ ಖ್ಯಾತನಾಗಿ | ದಾಸರ ಚನ್ನಾಗಿ ಪೋಷಿಸುತಲಿ ಶ್ರೀ ಶೇಷಗಿರಿಗೆ ಬಂದು | ಶ್ರೀಶನಲ್ಲಿ ನಿಂದು ಪಡುತ ಹನ್ನೆರಡು ವರುಷ ದೇಶ ದೇಶದಲಿ ಆಶುಗಿಯನು ನಿಲಿಸಿ | ಶಿಷ್ಯರಿಗನುಗ್ರಹಿಸಿ 5 ಕಾಶಿ ಗಧಾಧರ ವಾಜಪೇಯಿ ಲಿಂಗ | ಮಿಶ್ರರು ನರಸಿಂಗ ವಾಸುದೇವ ಪುರಿ ಈಶ್ವರ ಪಂಡಿತರ | ವಾದದಿ ಬಿಗಿವರ ಜೈಸಿ ತಂದ ಜಯ ಪತ್ರಗಳನು ಮುದದಿ | ಶ್ರೀನಿಧಿಗರ್ಪಿಸಿದಿ ಶ್ರೀಸತ್ಯಾ ರುಕ್ಮಿಣಿ ವೇಣುಗೋಪಾಲರನು | ಸ್ತುತಿಸಿ ಪಡೆದೆ ನೀನು 6 ನ್ಯಾಯಾಮೃತ ಬಿಚ್ಚಿ ಚಂದ್ರಿಕೆಯನು ತಂದೆ ಆಯದಿ ಬುಧಮನ ತಾಂಡವಾಡುವಂತೆ | ತರ್ಕತಾಂಡವವಿತ್ತೆ ಕಾಯಜಪಿತ ಶ್ರೀಕಾಂತನ ಸೇವಿಸುತ | ಸುಖಿಸುವೆ ನೀ ಸತತ 7
--------------
ಲಕ್ಷ್ಮೀನಾರಯಣರಾಯರು
ಪೂರ್ವ ಜನ್ಮದಲಿ ನಾ ಮಾಡಿದ ಕರ್ಮದಿಂಉರ್ವಿಯೊಳು ಜನಿಸಿದೆನೊ ಕೃಷ್ಣ ಪ ಕಾರುಣ್ಯನಿಧಿ ಎನ್ನ ಕಾಯಬೇಕಯ್ಯ ಹರಿವಾರಿಜನಾಭನೆ ಮುದ್ದುಕೃಷ್ಣಅ ಪುಟ್ಟಿದಂದಿನಾರಭ್ಯ ಸುಖವೆಂಬುವುದನರಿಯೆಕಷ್ಟ ಪಟ್ಟೆನು ಕೇಳೋ ಕೃಷ್ಣತೊಟ್ಟಿಲ ಶಿಶು ತಾಯ್ಗೆ ಬಾಯ್ಬಿಟ್ಟ ತೆರದಿ ಕಂ-ಗೆಟ್ಟು ಶೋಕಿಪೆನೋ ಕೃಷ್ಣಮುಟ್ಟಲಮ್ಮರು ಎನ್ನ ಬಂಧುಗಳು ಕಂಡರೆಅಟ್ಟಿ ಬಡಿವುತಲಿಹರೊ ಕೃಷ್ಣದಟ್ಟ ದಾರಿದ್ರ್ಯವನು ಪರಿಹರಿಸದಿದ್ದರೆಮುಟ್ಟುವುದು ದೂರು ನಿನಗೆ ಕೃಷ್ಣ1 ಕಾಶಿಯಾ ವಾಸವನು ಬಯಸಿ ಬಹು ದಿನದಿಂದಘಾಸಿ ಪಟ್ಟೆನು ನಾನು ಕೃಷ್ಣಈ ಶರೀರವನಾಂತು ಹೀನಾಯಗೊಂಡೆನುನೀ ಸಲಹಬೇಕಯ್ಯ ಕೃಷ್ಣಹೇಸಿಗೆಯ ಸಂಸಾರದಿ ನೀನಿಂತು ಮಾಯಾಪಾಶದೊಳು ಬಿಗಿವರೇ ಕೃಷ್ಣಘಾಸಿ ಮಾಡದೆ ಎನ್ನ ಪಾಪವನು ಪರಿಹರಿಸೊಸಾಸಿರನಾಮದ ಮುದ್ದುಕೃಷ್ಣ 2 ಲೋಕದೊಳು ಎನ್ನಂಥ ಪಾಪಿಗಳು ಉಂಟೆಂದುನೀ ಕೇಳಿ ಬಲ್ಲೆಯಾ ಕೃಷ್ಣಸಾಕೇಳು ಎನಗೊಂದು ಗತಿಯ ತೋರಿಸಿ ಸದ್ವಿವೇಕಿಯನು ಮಾಡಯ್ಯ ಕೃಷ್ಣರಾಕೇಂದು ಮುಖಿ ದ್ರೌಪದಿಯ ಮಾನವನು ಕಾಯ್ದುಆಕೆಗಕ್ಷಯವಿತ್ತೆ ಕೃಷ್ಣನಾ ಕಾಣುವಂದದಲಿ ಉಡುಪಿಯಾದಿಕೇಶವಏಕೆ ದರಶುನವೀಯೆ ಕೃಷ್ಣ 3
--------------
ಕನಕದಾಸ
ಬಂದನೊ ಸುಜನರ ಸಂದಣಿಯೊಳಗತಿಸುಂದರ ರಥವೇರಿ ಗುರುವರ ಬಂದನೊ ಪ ಬಂದಿ ಜನರು ಮುದದಿಂದ ಬಹುಪರಾಕೆಂದು ನುಡಿಯಲಾನಂದ ಬೀರುತ ಬಂದನೊ ಅ.ಪ. ಕ್ಷಿತಿ ಸುರಪತಿ ಶುಭಮತಿ ಬಲ್ಮತದವರೊಯತಿ ಪರರತಿಶಯ ದಶಮತಿ ಸಂ-ಸ್ಕøತ ಭಾಷಣದವರೊ ಭಯಹರಣನೆಂಬೊ ವಾ-ರುತಿಯ ಕೀರುತಿಯ ಪೂರುತಿಯ ಕೇ-ಳುತ ಮಹಿಮಾಂಗಣಕಥಿಸುತ ಗ್ರಂಥಿಸುತ ತುತಿಶುತನುತಿಸಿ ಯತಿ ಶಿರೋಮಣಿಗೆರತುನ ಖಚಿತವಾದಾರುತಿಯ ಬೆಳಗಿರೆ 1 ಸುರತರು ಶುಭ ಧೊರೆಯೋ ವಾಗ್ಝರಿಯೋಸರಸಾರ್ತಿ ಜನಗಳ ನೆರೆಸುತಾದರಿಸುತಾಬಲು ಸುಖ ಸುರಿಸುತಾ ದರಿದ್ರವ ತರಿದುಪೊರೆದೂ ಕರೆದವರಿಗೆ ಕೈ-ಶರೆಯಾಗುವೆನೆಂಧರುಷದಿ ಗುರುವರ ಬಂದನೊ 2 ವಾಲಗ ಘೊರ್ಮಿಡೆ ಭಟರುಗಳ ಹೆಗಲ ಮ್ಯಾಲೆಝಗ ಝಗಿಸುವ ಛಡಿಗಳೊ ಕುಣಿಕುಣಿದಾಡುವವರಹಿ ವೇಣಿಗಳೋ ವಾಣಿಗಳು ಶ್ರೀಣಿಗಳು ಶೋಭಿಸೆಸುಜನರು ಕೈ ಮುಗಿವರು ನಗುವರುಸಂಭ್ರಮದಿಂದ ಬಿಗಿವರು ದೃಗಾರೋಢನದಿಜಿಗಿದು ಅಘದೂರೊಗೆದ ಜನರೊಳುವೆಗ್ಗಳದಲಿಂದಿರೇಶನ ಭಕುತಾಗ್ರಣಿ ಬಂದನೊ 3 ಇಲ್ಲಿ ವರ್ಣಿತವಾದ ಯತಿಗಳು ಯಾರೆಂದು ತಿಳಿಯದು.
--------------
ಇಂದಿರೇಶರು