ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನಿದು ಸಂಸಾರ ನೋಡಿದರಿದುವೆ ಮಹಾಘೋರ ಪ ನೀರೊಳು ಕೈಬಿಟ್ಟಂತೆ ಅ.ಪ ಒಂದು ಲಾಭ ಬರಲು ನಷ್ಟ ವೆರ- ಡೊಂದಾಗುವುದಿದರೊಳ್ ಹಿಂದಿನ ಬವಣಿಯ ಮರೆತೆಲ್ಲರು ತಾವು ಮುಂದೆ ಸುಖವಪಡುವೆವೆಂದರಿತಿರುವರು 1 ತನ್ನಿಂತಾನಾಯಿತೆಂಬರು ಕುನ್ನಿಗಳರಿಯದೆಲೆ ಬನ್ನಬಡುವರೆಲ್ಲ ಬ್ರಹ್ಮರಾದರೆ ಇನ್ಯಾತಕೆ ಶೃತಿ ಸ್ಮøತಿ ಪುರಾಣಗಳು 2 ಕರುಣದಿ ಪ್ರೇರಿಸುವವನ ತಿಳಿದರೆ ಬರುವುದು ಲೆಕ್ಕಾಚಾರಕೆ ಸರ್ವವು 3
--------------
ಗುರುರಾಮವಿಠಲ
ಏನು ಸುಕೃತದ ಫಲವೋ ಶ್ರೀನಿವಾಸನೆ ಹೇಳು ಹಾನಿಯಾಗಿಯೆ ಅವಮಾನ ತೋರುತಿದೆ ಪ ವಾಸುದೇವನೆ ಎನ್ನ ಈಸು ದಿನ ಪರಿಯಂತ ಬೇಸರಿಲ್ಲದೆ ಕಾಯ್ದೆ ಲೇಸ ಕರುಣಿಸಿದೆ ಈಸಾಡಿದೆನು ನಾನು ಈ ಗೃಹದೊಳೀಗೇನು- ದಾಸಿನವು ನಿನಗಾಯಿತು ಮೋಸ ಯೋಚಿಪರೆ 1 ಹಗಲುಗತ್ತಲೆಯಾಗಿ ಮೊಗವು ಕಾಣದೆ ಎನಗೆ ಜಗದುದರ ನಿನ್ನಾಣೆ ನಗೆಯಾಯ್ತು ಜಗಕೆ ಹಗಯ ಮಧ್ಯದಿ ಸಿಲುಕಿ ಮೃಗವು ಬಾಯ್ಬಿಟ್ಟಂತೆ ಮಿಗ ಕ್ಲೇಶಬಟ್ಟು ನರಮೃಗವು ತಾನಾದೆ 2 ಆರು ಹಿತವರು ಇಲ್ಲ ಧಾರುಣಿಯ ಬಲವಿಲ್ಲ ಪಾರಾಗಿ ನಾಚಿಕೆಯು ಬೇರೂರಿತು ಘೋರ ಅಡವಿಯೊಳಗೆ ಗಾರುಗತ್ತಲೆ ಸುತ್ತಿ ಮಾರಿದೆಯ ಚೋರರಿಗೆ ದಾರಿಗಾಣಿಸದೆ 3 ದೊರೆಯು ಮನ್ನಿಸಿ ಕೊಡಲು ನೆರೆಹೊರೆಯ ಕರೆಕರೆಯು ಹರದಿಯೊಳು ನಂಬಿಗೆಯು ಕಿರಿದಾಯಿತು ನೆರವಾಗಿ ತೋರುತಿದೆ ಬರಿಯ ವೃಕ್ಷದ ತೆರದಿ ಮರುಳು ಕಣ್ಣಿಗೆ ಇರುವೆ ಕರಿಯ ತೆರನಂತೆ 4 ಇನ್ನು ಬಂಧಿಸಬೇಡ ಎನ್ನಿಂದ ಅಳವಲ್ಲ ಬನ್ನಬಡುವುದು ಎಲ್ಲ ನಿನ್ನ ಮನಕರುಹು ಕರ್ಮ ಬೆನ್ನು ಬಿಡುವಂದದಲಿ ಪನ್ನಗಾದ್ರಿನಿವಾಸ ಪಾಲಿಸೈ ಲೇಸ 5 ದಾಸ ಬಳಲಿದನೆಂಬ ಹೇಸಿಕೆಯ ಮಾತುಗಳ ಕಾಸಕೊಟ್ಟೇಕೆ ನಿರಾಸೆ ಮಾಡುವಿಯೊ ಬೇಸರಾಗದೆ ಪಂಥವಾಸಿಯಿಲ್ಲವೆ ನಿನಗೆ ಸಾಸಿರಾಕ್ಷನೆ ಎನಗೆ ಲೇಸಿತ್ತು ಸಲಹೊ 6 ಪಡೆದ ತಂದೆಯು ನೀನೆ ಕೊಡುವ ಒಡೆಯನು ನೀನೆ ಕಡೆಗೆ ಕೈವಿಡಿದು ಎನ್ನ ರಕ್ಷಿಪನು ನೀನೆ ಮಡದಿ ಮಕ್ಕಳನೆಲ್ಲ ಬಿಡದೆ ಸಲಹುವ ನೀನೆ ಪೊಡವಿಗಧಿಪತಿಯಾದ ವರಾಹತಿಮ್ಮಪ್ಪ 7
--------------
ವರಹತಿಮ್ಮಪ್ಪ
ಪಂಥ ಬೇಡವೊ ಲಕ್ಷ್ಮಿಕಾಂತ ಎನ್ನಯ ಮನದ ಚಿಂತಿತಾರ್ಥವನೀಯೊ ಸಂತತಂ ಕಾಯೊ ಪ ಚರಣ ಕಮಲವ ಕಂಡು ಶರಣು ಹೊಕ್ಕೆನು ನಾನು ಕರುಣದಿಂದನುದಿನವು ಕಾಯಬೇಕೆನುತ ಸ್ಮರಣೆಪೂರ್ವಕವಾಗಿ ಹರಣವನೆ ಹರಸಿಹೆನು ಹರಿಣನೊಳು ಬಿಲುಗಾರ ಕರುಣ ಬಿಟ್ಟಂತೆ 1 ನರಜನ್ಮವೆಂಬುದಿದು ಕರಕಷ್ಟವಾಗಿರುವ ಉರಿಯ ಮನೆಯನು ಹೊಗುವ ತೆರನಲ್ಲವೆ ಪರಿಪರಿಯ ದುಃಖಗಳು ಬರುವ ಸಮಯಾಂತರದಿ ಮರೆಯಾಗದಿರು ಎನ್ನಸ್ಥಿರದಿ ಮೈದೋರು 2 ತಪ್ಪುಗಳು ಹೊರತಾಗಿ ಅಪ್ಪ ಸೇರುವುದುಂಟೆ ಒಪ್ಪುಗೊಂಬವರಾರು ಸರ್ಪಶಯನ ಬೊಪ್ಪ ಬಹ ದುರಿತಗಳ ತಪ್ಪಿಸಿಯೆ ಕಳೆದೆನ್ನ ಮುಪ್ಪುಗಳ ಪರಿಹರಿಸೊ ಅಪ್ಪಗಿರಿವಾಸ 3 ಉರಗ ಗಿರಿವಾಸ ನಿನ್ಸೆರಗವಿಡಿವೆನು ನಾನು ಕರಗಿ ಹೋಯಿತು ಇರವು ಕಾವರಿಲ್ಲ ಮರುಗಿದರೆ ಧೈರ್ಯವನು ತಿರುಗಿ ಹೇಳುವರಿಲ್ಲ ಕುರಿ(ಗಾ)ಯ್ವ ತೆರನಂತೆ ಕೈಗೆ ಸಿಲುಕಿದೆನು 4 ಇಹಪರದ ಸೌಖ್ಯಗಳ ಕರೆದಿತ್ತು ಕರವಿಡಿದು ಸಹವಾಸವಾಗಿರ್ದು ಸಲಹಿಕೊಂಡು ವಹಿಲದಲಿ ವರವೀವ ವರಾಹತಿಮ್ಮಪ್ಪ ಬಹುಭಾರವನು ತಾಳ್ದು ಸಲಹೆನಿಸೊ ನೀನು 5
--------------
ವರಹತಿಮ್ಮಪ್ಪ