ಒಟ್ಟು 4 ಕಡೆಗಳಲ್ಲಿ , 3 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜೋಕುಮಾರನೆಂದು ಪಾಡಿದಳೊ ಗೋಪಿ ಪ ಮಾಯದ ವೇಷದವ ಮನೆ ಮನೆ ತಿರುಗುವ ಸ್ತ್ರೀಯರ ಕಾಣುತ ಭಂಡಾಟನಾಡುವ 1 ವಾವಿಗಳಿಲ್ಲದವಳ ತಾ ಮಾರಿ ಗಂಡು ಆವಾಗ ಬಂದರಿವ ಇದೆ ತೆರನು ದೇವದಾನವರೊಳಗಿವನೆ ಬಲು ಚಲುವ ಕೇವಲ ನಾಚಿಕೆ ತೊರೆದ ಲಂಡನ್ನ 2 ಅಷ್ಟಮಿ ದಿನದಲ್ಲಿ ಒಬ್ಬರ ವಶನಾಗಿ ಬುಟ್ಟಿಯೊಳಗೆಯಿದ್ದು ಹೊರಗೆ ಪೋಪಾ ಪಟ್ಟ ಗುಡುಪಾ ನಮ್ಮ ವಿಜಯವಿಠ್ಠಲರೇಯಾಸೊಟ್ಟವಳನ ಬಿಡದಿಪ್ಪಕುವಲ್ಲಭಾ3
--------------
ವಿಜಯದಾಸ
ಧ್ರುವ ತಾಳ ದಾಸ ನಿನಗೆ ನಾನು ಲೇಸಿನವನೆಂದು ಆಶೆಯಿಂದಲಿ ಗತಿ ಬೇಡಲಿಲ್ಲ ದಾಸತನ ಎನಗೆಲ್ಲಿಹುದು ಶ್ರೀನಿ- ವಾಸನೆ ಅನಂತ ಕಲ್ಪದಲ್ಲಿ ನಾಶನ ಮಾಡಿಕೊಂಬ ದಾಸ ನಾನು ದಾಸನೆನಿಸಿಕೊಂಡು ತಿರುಗುವ ಜನಕ್ಕೆ ಲೇಸಾಗಿ ದಂಡಿಸಿ ಮೆದಿಯ ಬೇಕು ಕೇಶವ ವಿಜಯವಿಠ್ಠಲನೆ ನಿನ್ನ ಮರೆದು ಗ್ರಾಸಕ್ಕೆ ತಿರುಗುವ ಭಾಸಮಾನ ದಾಸ 1 ಮಟ್ಟತಾಳ ತಿರಕದಾಸ ನಾನು ಹರಕ ದಾಸ ನಾನು ಕರಕರಿಯನು ಮಾಡಿ ಪರರ ಪೀಡಿಸಿ, ಉ- ದರ ಪೊರೆವ ದಾಸನು ನಾನು, ಬರಿಯ ದಾಸ ನಾನು ಅರಿಮರ್ದನ ಹರಿ ವಿಜಯವಿಠ್ಠಲ ನಿನ್ನ ಪರಮ ಭಕ್ತನೆಂದು ತಿರಿದುಣ್ಣ ಮೆಚ್ಚಿದೆನು 2 ತ್ರಿವಿಡಿ ತಾಳ ಕೊಟ್ಟರೆ ಹರಸುವೆನು, ಕೊಡದಿದ್ದರೆ, ಬೆರ ಳಿಟ್ಟು ಬಗಳುವಂಥ ಭ್ರಷ್ಟ ದಾಸನು ನಾನು ಸೃಷ್ಟಿಯೊಳಗೆ ಬಹು ಧನವಂತರ ಮನೆಯ ಮೆಟ್ಟು ಕಂಡರೆ ಬಿಡದಿಪ್ಪ ದಾಸ ನಾನು ನಷ್ಟ ವಾಗಿದ್ದ ಉಚ್ಛಿಷ್ಟ ದಾಸನು ನಾನು ದೃಷ್ಟಿಯಿಂದಲಿ ನೋಡೊ, ವಿಜಯವಿಠ್ಠಲ ಕೇಳೊ ಎಷ್ಟೊ ಕಾಲದ ಪಾಪಿಷ್ಠ ದಾಸನು ನಾನು 3 ಅಟ್ಟತಾಳ ಕುರುಡ ದಾಸನು ನಾನು ಕುಂಟ ದಾಸನು ನಾನು ಹುರಡಿಗೆ ಮಾಡುವ ಹುರಳಿಲ್ಲದ ದಾಸ ಸರಿಯವರನು ಕಂಡು ಮರಗುವ ದಾಸನು ಎರಡು ಕಡೆ ಕೆಟ್ಟ ಭರಡಿ ದಾಸನು ನಾನು ಗರಕೆ ಕರದಾರೆ ಹಿಗ್ಗುವ ದಾಸನು ನಾನು 4 ಆದಿತಾಳ ಹೀನ ದಾಸನು ನಾನು, ನೀಚ ದಾಸನು ನಾನು ಹಾನಿವೃದ್ಧಿಗಳೆಲ್ಲ ತಿಳಿಯದ ದಾಸನು ನಾನಾ ದುಷ್ಕರ್ಮ ಮಾಳ್ಪ ದಾಸನೊ ನಾನು ಮಾನವಿಲ್ಲದೆ ಅಪಮಾನ ದಾಸ ನಾನು ದಾನ ಧರ್ಮವಿಲ್ಲದ ಹೀನ ದಾಸನು ನಾನು ಅನಂತ ಜನನಕ್ಕೆ ಹೊಲೆದಾಸನು ನಾನು ಶ್ರೀನಿವಾಸ ತಿರುಮಲೇಶ ವಿಜಯವಿಠ್ಠಲ ಬ್ಯಾನೆ ಇದ್ದಲ್ಲಿ ಬಿಡುವ ಬಕ್ಕದಾಸನು ನಾನು 5 ಜತೆ ಹೊಟ್ಟೆಕಿಚ್ಚಿನ ದಾಸ-ಹಲುಬಿ ಪೋಗುವ ದಾಸ ದಟ್ಟದಾರಿದ್ರ ದಾಸನು ವಿಜಯವಿಠ್ಠಲರೇಯ 6
--------------
ವಿಜಯದಾಸ
ತನ್ನ ತಿಳಿದು ತಾ ನಿರ್ಲಿಪ್ತನಾದವಗೆ ಇನ್ನೇನಿನ್ನೇನುತನ್ನ ತನ್ನೊಳು ಕಂಡು ತಾನಾದ ಮಹಾತ್ಮಗೆ ಇನ್ನೇನಿನ್ನೇನು ಪ ನಾನು ನೀನೆಂಬ ಹಮ್ಮುಳಿದುಳಿದಾತಗೆ ಇನ್ನೇನಿನ್ನೇನುನಾನು ನೀನೇ ನಿಶ್ಚಯವೆಂದು ನಿಶ್ಚಲನಾದವಗೆ ಇನ್ನೇನಿನ್ನೇನು1 ಸರ್ವವನರಿತು ಸರ್ವವೆ ತಾನಾದವಗೆ ಇನ್ನೇನಿನ್ನೇನುಸರ್ವ ಸರ್ವವು ಆದ ಸರ್ವಾತ್ಮಗೆ ಇನ್ನೇನಿನ್ನೇನು 2 ಮನದ ಮಾಟಗಳಿಗೆ ಮರುಳಾದವಗೆ ಇನ್ನೇನಿನ್ನೇನುಮನವು ತಾನಾದವಗೆ ಮನಕೆ ನಿಲುಕದವಗೆ ಇನ್ನೇನಿನ್ನೇನು 3 ಸುಖ ದುಃಖಗಳಿಗೆ ತಾ ಸಾಕ್ಷಿಯಾದವಗೆ ಇನ್ನೇನಿನ್ನೇನುಸುಖ ದುಃಖ ತೋರದೆ ಸಮಮನನಾದವಗೆ ಇನ್ನೇನಿನ್ನೇನು 4 ಅಗಣಿತ ಮಹಿಮಗೆ ಇನ್ನೇನಿನ್ನೇನು 5 ಎರಡನುಳಿದು ಮತ್ತೆರಡನು ಮರೆತವಗೆ ಇನ್ನೇನಿನ್ನೇನುಎರಡರೊಳು ತಾನೆಡಬಿಡದಿಪ್ಪಗೆ ಇನ್ನೇನಿನ್ನೇನು6 ಮುಟ್ಟು ಚಟ್ಟುಗಳ ಮುಗಿಸಿದಾತಗೆ ಇನ್ನೇನಿನ್ನೇನುಮುಟ್ಟು ಚಟ್ಟಲಿ ಅಡಗಿರುವಾತಗೆ ಇನ್ನೇನಿನ್ನೇನು7 ಸಕಲ ವಿಧವ ನೋಡಿ ಸಂತುಷ್ಟನಾದವಗೆ ಇನ್ನೇನಿನ್ನೇನುಸಕಲದಿ ಬೆರೆತು ಸಂಶಯವಳಿದಿಪ್ಪವಗೆ ಇನ್ನೇನಿನ್ನೇನು 8 ಚಿದಾನಂದ ಗುರುವಿನ ಚಿತ್ತದಿ ಪಿಡಿದಾತಗೆ ಇನ್ನೇನಿನ್ನೇನುಚಿದಾನಂದ ಗುರುವಿನ ಚಿತ್ಸುಖಭರಿತಗೆ ಇನ್ನೇನಿನ್ನೇನು 9
--------------
ಚಿದಾನಂದ ಅವಧೂತರು
ವಾಜಿವದನಾರ್ಚಕ ಶ್ರೀ ವಾದಿರಾಜ ಪ ರಾಜೀವನಯನ ಶ್ರೀ ಕೃಷ್ಣನಲಿ ಬಿಡು ಎನ್ನ ಅ.ಪ. ದೇವದೇವೇಶನ ಪರಮ ಒಲುಮೆಗೆ ಪಾತ್ರ ಪಾವನ್ನತಮಚರಿಯ ಪತಿತಪಾಲ ಸಾವಧಾನದಿ ಎನ್ನ ಆದಿರೋಗವನಳಿದು ಕೇವಲ ಸದ್ಭಕ್ತಿ ಶೀಲನ ಮಾಡಯ್ಯ 1 ಭಾರತೀಪತಿ ಪದವನೈದುವ ಮಹಾತ್ಮ ಮಾರಾರಿಸುರ ಪೂಜ್ಯ ಕರುಣಿಸಿ ಕಾಯೊ ಸಾರಿದೆನು ತವ ಚರಣ ಸರಸಿಜಯುಗ್ಮಗಳ ದೂರ ಮಾಡದೆ ಹರಿಯ ಕರುಣಪಾತ್ರನ ಮಾಡು 2 ಭಾಗವತ ಶಿರೋರತುನರಿಂದರ್ಚಿತನೆ ಶಿರಿ ವೇಣುಗೋಪಾಲ ವೇದ ವೇದ್ಯ ಜಯೇಶವಿಠಲನ ಮನದಲ್ಲಿ ಬಿಡದಿಪ್ಪ ಪರಮಕೃಪೆ ಬೇಡುವೆನು ಕರುಣಾಬ್ಧಿ ಕೃಪೆ ಮಾಡು 3
--------------
ಜಯೇಶವಿಠಲ