ಒಟ್ಟು 4 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತೊಂಡ ನೆನಿಸ ಬೇಡ ಹರಿಯೇ ಪ ಪುಂಡರೀಕಾಕ್ಷನೆ ಕಾವ ತೊಂಡರ ತೊಂಡನೆನಿಸೋ ಅ.ಪ. ಹೆಂಡತಿಯ ಬಿಡಬಹುದು-ಕಾಡಿಗ್ಹೋಗಲಿ ಬಹುದು ಬಿಡದೆ ಜಪಿಸಲಿ ಬಹುದು-ಕಟುತಪವ ಮಾಡಲಿಬಹುದು ಒಡೆಯ ಕೃಷ್ಣನೆ ನಿನ್ನ ಅಡಿಯ ಕಾಡಲಿಬಹುದು ಕಂಡವರ ಊಳಿಗದಿ ಕೀರ್ತಿ ಪಡೆಯಲಾಗದೊ ದೇವ 1 ಆಶೆಯ ತೊರೆದು ನಿಜ ದಾಸನಾಗಲಿಬಹುದು ದೇಶ ದೇಶವ ತಿರುಗಿ ಕಾಸುಗಳಿಸಲಬಹುದು ಕೇಸರಿಯ ಹಿಡಿತಂದು ಪಾಶದಲಿ ಕಟ್ಟಬಹುದು ಶ್ರೀಶನಿನಗಲ್ಲದವರ ಸಂಗ ಏಸೇಸು ಜನ್ಮಕ್ಕು ಬ್ಯಾಡೋ 2 ಹೀನ ಜನರಾ ಸಂಗ ಮಾನವಂತರಿಗಲ್ಲ ದೀನಜನಮಂದಾರ ಕೊಡಬೇಡ ಇದು ಎನಗೇ ಮಾನಾಭಿಮಾನವನು ನಿನಗೆ ಒಪ್ಪಿಸಿದೆನೋ ಇನ್ನಾದರೂ ಸಲಹೋ ಶ್ರೀನಿವಾಸ ಕೃಷ್ಣವಿಠ್ಠಲನೆ ಜೀಯಾ 3
--------------
ಕೃಷ್ಣವಿಠಲದಾಸರು
ತೊರೆದು ಜೀವಿಸುಬಹುದೆ ಹರಿ ನಿನ್ನ ಚರಣವನುಬರಿಯ ಮಾತೇಕಿನ್ನು ಅರಿತು ಪೇಳುವೆನಯ್ಯ ಪ ತಾಯಿ ತಂದೆಯ ಬಿಟ್ಟು ತಪವ ಮಾಡಲುಬಹುದುದಾಯಾದಿ ಬಂಧುಗಳ ಬಿಡಲುಬಹುದುರಾಯ ಮುನಿದರೆ ಮತ್ತೆ ರಾಜ್ಯವನು ಬಿಡಬಹುದುಕಾಯಜಪಿತ ನಿನ್ನಡಿಯ ಬಿಡಲಾಗದು 1 ಒಡಲು ಹಸಿಯಲು ಅನ್ನವಿಲ್ಲದಲೆ ಇರಬಹುದುಪಡೆದ ಕ್ಷೇತ್ರವ ಬಿಟ್ಟು ಪೋಗಬಹುದುಮಡದಿ ಮಕ್ಕಳ ಕಡೆಗೆ ತೊಲಗಿಸಿಯು ಬಿಡಬಹುದುಕಡಲೊಡೆಯ ನಿನ್ನಡಿಯ ಗಳಿಗೆ ಬಿಡಲಾಗದು 2 ಪ್ರಾಣವನು ಪರರು ಬೇಡಿದರೆತ್ತಿ ಕೊಡಬಹುದುಮಾನಾಭಿಮಾನ ತಗ್ಗಿಸಲು ಬಹುದುಪ್ರಾಣನಾಯಕನಾದ ಆದಿಕೇಶವರಾಯಜಾಣ ಶ್ರೀಕೃಷ್ಣ ನಿನ್ನಡಿಯ ಬಿಡಲಾಗದು 3
--------------
ಕನಕದಾಸ
ಧನವ ಗೆದ್ದವರುಂಟೆ ಜನರೊಳಗೆ ಶ್ರೀನಿವಾಸ ಪ ಕನಸಿಲಾದರು ಬಿಡದು ಕನಕದಾಶೆಯು ಈಶ ಅ.ಪ. ಹೆಂಡತಿಯ ಬಿಡಬಹುದು ಮಂಡೆಬೋಳಿಸಬಹುದು ಕಂಡ ಕಂಡವರೀಗೆ ದಂಡ ಬೀಳಲಿ ಬಹುದು ಪುಂಡರೀಕಾಕ್ಷನಿಗೆ ತೊಂಡನಾಗಲಿ ಬಹುದು ದುಡ್ಡು ಕಾಸುಗಳನ್ನು ನೀಡಲಾಗದು ಮನಸು 1 ನಾಮ ಹಾಕಲಿಬಹುದು ನೇಮಮಾಡಲಿಬಹುದು ಹೋಮಮಾಡುತಲಿ ಬಹು ಕರ್ಮಿಷ್ಟನೆನಿಸಬಹುದು ನಾಮ ಪಾಡಲಿಬಹುದು ಧರ್ಮಪೇಳಲಿ ಬಹುದು ಹೇಮದಾಶೆಯು ಬಿಡದೂ ಶ್ರೀ ಮನೋಹರನೇ 2 ಜಪಮಾಲೆಧರಿಸುತಲಿ ಉಪವಾಸ ಮಾಡಬಹುದು ತಾಪಸನು ಎನಿಸುತಲಿ ಪುರಾಣಗಳ ಪೇಳಲಿಬಹುದು ಶ್ರೀಪತಿಯ ಸೇವಿಸುತ ಜಪತಪವ ನಡೆಸಬಹುದು ರೂಪಾಯಿ ಮಮತೆ ತಾ ಮುಪ್ಪಿನಲು ತೊಲಗದೈಯ್ಯ 3 ಯಾತ್ರೆಮಾಡಲಿಬಹುದು ಸ್ತೋತ್ರ ಘಟ್ಯಾಗಿ ಹೇಳಬಹುದು ನೀತಿ ಪೇಳಲಿಬಹುದು ಪೂತನೆನಿಸಬಹುದು ಮಾತು ಮಾತಿಗೆವೇದ ಎತ್ತಿ ಪೇಳಲಿಬಹುದು ಪ್ರೀತಿ ತಪ್ಪದೂ ಯೆಂದೂ ಆಸ್ತಿ ಧನಕನಕದಲಿ 4 ಲಜ್ಜೆಬಿಡುತಲಿ ಬೇಗ ಗೆಜ್ಜೆಕಟ್ಟಲಿ ಬಹುದು ಸಜ್ಜನನುಯೆಂದೆನಿಸಿ ಮೂರ್ಜಗದಿ ಮೆರೆಯಬಹುದು ಮಜ್ಜನಕ ಜಯತೀರ್ಥ ವಾಯು ಹೃದಯದಲಿರ್ಪಜ ಗಜ್ಜನಕ “ಶ್ರೀಕೃಷ್ಣವಿಠಲ”ನೆ ನೀವಲಿವ ತನಕ 5
--------------
ಕೃಷ್ಣವಿಠಲದಾಸರು