ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಷ್ಟ ಕಷ್ಟವೋ ಕೃಷ್ಣ ದೃಷ್ಟಿಯಲಿ ನೋಡದಿರೆ ತುಷ್ಟಿಪಡಿಸಲು ನಿನ್ನ ನಾನೆಷ್ಟರವನಯ್ಯ ಪ ಭ್ರಷ್ಟನಾಗಿಹೆ ನಾ ಅಷ್ಟಾಂಗಯೋಗವ ತಿಳಿಯೆ ಒಂ- ದಿಷ್ಟು ಭಕುತಿಯ ಕೊಟ್ಟು ಕಡೆಹಾಯಿಸಯ್ಯ ಅ.ಪ ಸತ್ಯ ಅಸ್ತೇಯ ಬ್ರಹ್ಮಚರ್ಯ ಅಹಿಂಸಾ ಧೃತಿ ದಯಾ ಕ್ಷಮಾರ್ಜಿತ ಮಿತಭುಕ್ತವು ನಿತ್ಯ ಬಾಹ್ಯಾಂತರ ಶೌಚಾದಿ ದಶಗುಣ ಯುತವಾದಯಮ ಉಪಾಸನೆಗಳಿನಿತಿಲ್ಲವೋ ದೇವಾ 1 ನಿಯಮ ಮೊದಲಿಲ್ಲ ಜಪತಪ ಸಂತೃಪ್ತಿ ನಿಯತ ಸಿದ್ಧಾಂತ ಶ್ರವಣ ಲಜ್ಜಮತಿಯು ಶ್ರೀಯಃಪತಿಯ ಪೂಜನ ಆಸ್ತಿಕ್ಯವ್ರತ ದಾನೋ- ಪಾಯವಿಲ್ಲದೇ ಕಡೆ ಹಾಯ್ವುದೆಂತಯ್ಯ 2 ಘಾಸಿಯಾಗಿಹುದಯ್ಯ ಷಡ್ವಿಧಾಸನಗಳೂ ಸ್ವಸ್ತಿಕ ಭದ್ರಪದ್ಮ ಅರ್ಧಾಂಗಾಸನದಿ ಸಿದ್ಧ ಪರ್ಯಂಕಗಳೆಂಬ ಆಸನದಿ ಕುಳಿತು ನಾ ಧೇನಿಸಲರಿಯೆ ಹರಿಯೇ 3 ಪ್ರಾಣಾಯಾಮವ ಕ್ರಮವು ರೇಚಕ ಪೂರಕವು ದಣಿವಿಲ್ಲದೆ ಕುಂಭಕದ ಕ್ರಮವಿಲ್ಲ ತ್ರಾಣವಿಲ್ಲವೋ ವಾಯುಬಂಧ ಮಾಡಲರಿಯೆ ಪ್ರಾಣಪತಿ ನಿನ್ನ ಕರುಣವಿಲ್ಲದಾತನಕ 4 ವಿಷಯಾಭಿಲಾಷೆಯಿಂದ್ಹರಿದು ಹೋಯಿತು ಮನಸು ವಿಷಮವಾಗಿಹುದಯ್ಯ ಮತ್ಸಾಧನ ಪ್ರತ್ಯಾಹಾರ ಸಾಧನವಿಲ್ಲ ಕೃಷಿಮಾಡಿ ಸ್ಥಿರಮನದಿ ಧೇನಿಸಲು ನಾನರಿಯೆ 5 ಧಾರಣೋಪಾಯದೊಳು ಅಣುಮಾತ್ರ ನಾನರಿಯೆ ನರಕ್ರಿಮಿಯಾಗಿ ನಾ ಧರೆಯೊಳುಳಿದೆ ಅರಿಯೆ ಬಾಹ್ಯಾಂತರದಿ ಭೂತಪಂಚಕವಿರುವ ಪರಿ ತಿಳಿದು ಪ್ರಾಣವಾಯು ಸಡಿಲಬಿಡಲರಿಯೆ 6 ಧ್ಯಾನಿಸಲು ಏಕಾಗ್ರಚಿತ್ತವೇ ಎನಗಿಲ್ಲ ಸಂಸ್ತುತಿಸೆ ಸಂಪ್ರಜ್ಞಾ ಅಸಂಪ್ರಜ್ಞವೆಂಬ ಘನಸಮಾಧಿಯೊಳ್ ಪರಿವಿಲ್ಲದಲೆ ನಿನ್ನ ಕರುಣವೆಂತಾಗುವುದೋ ಶ್ರೀ ವೇಂಕಟೇಶಾ 7 ಶುದ್ಧವಾದ ದ್ವೈತತ್ರಯ ತಿಳಿಯದಲೆ ಮುಗ್ಧನಾಗಿಹೆ ನಾನಪರಿಶುದ್ಧನೊ ಶಬ್ದಗೋಚರ ನಿನ್ನ ಪರಿಶುದ್ಧ ಭಾವದಿಂ ಬುದ್ಧಿಪೂರ್ವಕ ತಿಳಿಯೆ ಬದ್ಧಪಾಮರನಯ್ಯ 8 ಕರಣತ್ರಯದಲಿ ಮಾಳ್ವ ಕ್ರಿಯೆಗಳೆಲ್ಲವು ಸತತ ಹರಿಯೇ ಬಿಂಬಕ್ರಿಯವ ನಾನರಿಯದೇ ಕರುಣಶರಧಿಯೆ ನೀ ಕೃಪೆಮಾಡಿ ಪೊರೆಯದಿರೆ ಉರಗಾದ್ರಿವಾಸವಿಠಲ ನಿನ್ನ್ಹ್ಹೊರತು ಗತಿಯುಂಟೆ 9
--------------
ಉರಗಾದ್ರಿವಾಸವಿಠಲದಾಸರು
ಜೀವ ಕರ್ತೃತ್ವದ ಭ್ರಮೆಯ ಬಿಡಿಸೊ ಪ ಜೀವೇಶನೊಡೆಯ ಶ್ರೀ ವೇಣುಗೋಪಾಲ ಹರಿ ಅ.ಪ ಮಿಥ್ಯೆವೆಂಬುದು ಬಲ್ಲೆ ಕರ್ತೃತ್ವ ನಮಗಿಲ್ಲ ಪ್ರತ್ಯಕ್ಷಕಪವಾದದಲ್ಲಿ ಬಾಳ್ವೆ ವ್ಯರ್ಥಧಾವತಿಪಡುವೆ ಸರ್ವಕರ್ತನ ಮರೆದು ಯತ್ನಕೆ ವಶವಲ್ಲ ಮಿಥ್ಯೆ ಭಾವವು ಬಿಡಲು 1 ವಿಷಯ ವಿಷವದು ಬಲ್ಲೆ ತಲ್ಲೋಭ ಬಿಡಲರಿಯೆ ವಿಷಮಗತಿ ಪ್ರವಹದಲಿ ವಿವಶನಾಗಿ ಹುಸಿನಂಬಿ ತೆರಳುತಿಹೆ ಹರುಷ ಕಾಣದೆ ನಿಜದೆ ಕೃಶನಾದೆ ಹರಿಯೆನ್ನ ಕೈಪಿಡಿದು ಉದ್ಧರಿಸೊ 2 ಗುಣವಿಲ್ಲ ದೋಷಿಲ್ಲದೆಡೆಯಿಲ್ಲ ಎನ್ನಲ್ಲಿ ದನುಜಾರಿ ನಿನ್ನವರ ಕರುಣ ಉಂಟೊ ಪ್ರಣತಾರ್ಥಿ ಹರ ಶ್ರೀ ಜಯೇಶವಿಠಲನಲ್ಲಿ ವಿನುತ 3
--------------
ಜಯೇಶವಿಠಲ
ನೀನಹುದೋ ಘನ ಮಹಿಮ ಮುನಿಜನರೊಡಿಯ ಪೂರ್ಣ ದೀನದಯಾಳು ನೀನೆ ಹರಿಯೆ 1 ಪತಿತಪಾವನನೆಂದು ಶ್ರುತಿ ಸಾರುವರು ಕೇಳಿ ಅತಿ ಹರುಷದಲಿ ಬಂದೆನೊ ಹರಿಯೆ 2 ಮತಿ ಹೀನನವಗುಣವ ಕ್ಷಿತಿಯೊಳು ನೀ ನೋಡದೆ ಪಥವಗೊಳಿಸುವದು ಎನಗೆ ಹರಿಯೆ 3 ಮರೆಯ ಹೊಕ್ಕಿಹೆ ನಿಮ್ಮ ಚರಣಕಮಲಕೆ ಪೂರ್ಣ ಕರುಣದ ಅಭಯ ತೋರೊ ಎನಗೆ ಹರಿಯೆ 4 ಅರಿಯೆ ನಾ ನಿಮ್ಮ ವಿನಾ ಬ್ಯಾರೆ ಇನ್ನೊಂದು ಪಥ ಶಿರವ ನಮಿಸಿಹೆನೊ ನಿಮಗೆ ಹರಿಯೆ 5 ಶರಣಾಗತರ ಹೊರೆವ ಬಿರದು ನಿಮ್ಮದು ಪೂರ್ಣ ಸಾರುವದು ತಿಳಿದುಕೊಳ್ಳೊ ಹರಿಯೆ 6 ಬಿಡಲರಿಯೆ ನಾ ನಿಮ್ಮ ಪಿಡಿದು ಶ್ರೀಪಾದವನು ನೋಡಿ ದಯಮಾಡೊ ಎನಗೆ ಹರಿಯೆ 7 ಬ್ಯಾರೆ ಗತಿ ಕಾಣೆ ನಿಮ್ಮ ಚರಣಕಮಲದಾಣೆ ಸಿರಿ ಸಕಲಪದವು ನೀನೆ ಹರಿಯೆ 8 ಭಿನ್ನವಿಲ್ಲದೆ ನೋಡಿ ಚೆನ್ನಾಗಿ ಮಹಿಪತಿಯ ಧನ್ಯಗೈಸೊ ಪ್ರಾಣವ ಹರಿಯೆ 9
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಂದಮತಿ ನಾನಯ್ಯ ಮಂಗಳಾಂಗಾ ಒಂದಾದರೂ ಗತಿ ಧರ್ಮ ಚಿಂತಿಸಲಿಲ್ಲಾ ಪ ಜಪತಪಗಳರಿಯೆ ಉಪವಾಸಗಳರಿಯೆ ಕೃಪೆ ಮಾಡಲರಿಯೇ ಪರಿಜನಗಳಲ್ಲಿ ಕುಪಿತವನು ಬಿಡಲರಿಯೆ ಅಪರಿಮಿತವಾಗಿದ್ದ ಅಪರಾಧಗಳ ಮಾಡಿ ತಪಿಸುವೆನು ಭವದೊಳಗೆ 1 ಯಾತ್ರೆ ಮಾಡಲರಿಯೆ ತೀರ್ಥ ಮೀಯಲರಿಯೆ ಗಾತ್ರದಂಡಣಿಯ ಮಾಡಲರಿಯೆ ಗಾತ್ರ ಲಘು ನೋಡಿ ಸ ತ್ಪಾತ್ರರನು ಭಜಿಸದೆ ವ್ಯರ್ಥ ಕಾಲವ ಕಳೆವ2 ಅನ್ನದಾನವರಿಯೆ ಮನ್ನಣೆ ಮಾಡಲರಿಯೆ ಚನ್ನಾಗಿ ಬಂಧುಗಳು ಪೊರಿಯಲರಿಯೆ ಎನ್ನ ಮನದೊಡಿಯ ಶ್ರೀ ವಿಜಯವಿಠ್ಠಲರೇಯಾ ನಿನ್ನ ಭಕುತಿ ಒಮ್ಮೆ ಪಡಿಯಲರಿಯೆ 3
--------------
ವಿಜಯದಾಸ