ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಡತನ ವ್ಯಾತಕೆ ನಮಗೆ ಕಡೆಗಣ್ಣ ನೋಡಿದಿದ್ದರೆ ನಿಮ್ಮ ಭೂಷಣ ಬಿಡುವವ ನಾನಲ್ಲ ನಿಮಗೆ 1 ಪಿಡಿದು ಪಾದವ ನಿಮ್ಮ ಬಡವನೆಂದೆನಿಸಲು ಜಡನುಡಿ ನಿಮಗೆ ನಿಮಗೆ ಭೂಷಣವೆ ಬಿಡುಬಿಡು ಭಕ್ತವತ್ಸಲನೆಂಬ ಬಿರುದವ ಒಡಲ ಹೊರೆವ ದೊಂದಿರದವಗೆ 2 ಬಡವನಾಧಾರವೆಂದು ಕೊಂಡಾಡುತಿರಲಿನ್ನು ಬಡಿವಾರ ವ್ಯಾತಕ್ಕೆ ನಿಮಗೆ ನುಡಿ ಮಾತಿನಂತಲ್ಲ ಪೊಡಿವಿಯೊಳಗಿದು ಬಿಡುವಾಂಗಿಲ್ಲ ನಮ್ಮ ನಿಮಗೆ 3 ಪಿಡಿದ ಪಾದವ ನಿಮ್ಮ ಬಿಡೆನೆಂಬ ದೃಢವಿದು ಒಡೆಯ ಕೇಳಿನ್ನಿ ಮಾತು ಬಿಡಿಸಿಕೊಂಡರೆ ನಿಮ್ಮ ಬಿಡುವರಾರಿನ್ನು ನೋಡು ತಿಳಿದು ಗುರುನಾಥ4 ಅಡಿಗಳ ಕುಡಿಯೊಳುವಿಡಿದು ನಾ ನಿಮ್ಮನು ಬಡುವೆ ಸದ್ಗತಿ ಹರುಷವನು ಮೂಢಮಹಿಪತಿಗಿನ್ನು ಬ್ಯಾರೆ ಗತಿಯ ಕಾಣಿ ಒಡೆಯ ನಿಮ್ಮಪಾದಪದ್ಮದಾಣಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭಕ್ತಿಯಲಿ ನಡೆವರಿವರೇ ಸುಗುಣರೊ ಮುಕ್ತಿಯನು ಬಯಸಿ ಮುರಾರಾತಿಯ ಚರಣದಲ್ಲಿ ಪ ಉದಯದಲೆದ್ದು ಉನ್ನತ ಸ್ವರದಿಂದ ಹರಿ ಪದವೇ ಗತಿ ಎನುತಾ ಎಲ್ಲ ಕಾಲಕೆ ಉದರ ಚಿಂತಿಯ ಮರೆದು ಮನ ಉಬ್ಬಿ ಉತ್ಸವದಿ ಪದೋಪದಿಗೆ ಮಂಗಳಾವಾರ್ತಿ ಪೇಳುತ ನಿತ್ಯಾ 1 ಭಾಗವತ ಮಿಕ್ಕ ಪುರಾಣಾದಿ ನುಡಿಗೆ ಕಿವಿಗೊಟ್ಟು ಹಾಹಾ ಎನತಲಿ ಒಡನೊಡನೆ ಹರಿ ಮಹಿಮೆಯಲಿ ಇದ್ದು ಮಾರಿಗಳ ಅಡಿಮಾಡಿ ಆದ್ಯಂತಕಾಲ ಸುಖಿಸುವ ನಿತ್ಯಾ 2 ಈ ದೇಹ ತ್ಯಾಗ ಮಾಡದೆ ಆಗಲಿ ಪಂಚ ಭೇದ ಪೇಳುವದು ಬಿಡೆನೆಂಬೊ ಸೊಲ್ಲು ಆದಿತ್ಯ ಲೋಕಕ್ಕೆ ಮುಟ್ಟುವಂತೆ ಕೂಗಿ ಸಾಧನ ಮಾಡುತಲಿಪ್ಪ ಶುಭಮಾರ್ಗದಲಿ ನಿತ್ಯಾ 3 ಅವಾವ ಮೋಹಕವು ಶಾಸ್ತ್ರದಲ್ಲಿದ್ದರೂ ಭಾವದಲಿ ಗುಣಿಸದೆ ನಿಕ್ಕರಿಸೀ ದೇವದೇವೇಶನೆ ಬ್ರಹ್ಮಾದಿಗಳು ವಂಚಿಪ ಕಾವ ಕೊಲ್ಲುವನೀತನೆಂದು ತಿಳಿದು ನಿತ್ಯಾ 4 ಅನ್ಯಶಬ್ದವು ಅನ್ಯಸ್ಪರಿಶ ರೂಪಕ ರಸಾ ಅನ್ಯಗಂಧಗಳಿಗೆ ಇಂಬುಗೊಡದೇ ಧನ್ಯರಾಗಿದ್ದವರ ಕರುಣ ಸಂಪಾದಿಸಿ ಪುಣ್ಯಭೂಮಿಯನು ಹಾರೈಸುವ ನಿತ್ಯಾ 5 ಅವೈಷ್ಣವನು ಹರಿ ಎಂದು ನುಡಿವಡೆ ತಾನು ಅವನಂತೆ ಸ್ಮರಿಸದೇ ಸುಮ್ಮನಿದ್ದೂ ಭವವದ್ದು ಭಾಗ್ಯವನು ಅಪೇಕ್ಷಿಸದೇ ಮುಂದೆ ನಿತ್ಯ 6 ಭೂಸುರರ ಪಾದದಲಿ ವಿಶ್ವಾಸ ಇಟ್ಟು ದು ರಾಶೆಯನು ಮಾಡಿ ನರರಾಶ್ರೈಸದೆ ಏಸೇಸು ವಿಪತ್ತು ಗುಣ ಮೇಲಟ್ಟಿದರು ನಿತ್ಯ 7 ಕಾಲ ಮೃತ್ಯು ಬಂದು ಹುಂಕರಿಸಿ ನಿಂದು ಮಹ ಜ್ವಾಲೆಯನು ತೋರಿ ಕಠಿಣೋಕ್ತಿಯಲ್ಲೀ ಏಳೇಳು ಎನುತ ಎಬ್ಬಿಸಿದ ಕಾಲಕೆ ತನ್ನ ನಾಲಿಗೆಲಿ ಹರಿ ಕೃಷ್ಣ ಕೇಶವನೆನುತ ನಿತ್ಯಾ 8 ಸಕಲ ಚೇಷ್ಟಾದಿಗಳು ಹರಿಮಾಡಿಸಲು ಉಂಟು ಮುಕುತಿ ನರಕವೆಂಬ ಯೋಚನ್ಯಾಕೆ ಸಿರಿ ವಿಠ್ಠಲನಲ್ಲಿ ಸುಖ ದು:ಖವಿತ್ತದು ಸಮ್ಮತವೆನುತ ನಿತ್ಯಾ 9
--------------
ವಿಜಯದಾಸ
ಏನು ರಂಗ ದೂರ ನೋಡುವೆಪ್ರಾಣನಾಥ ದೂರ ನೋಡುವೆ ಪ.ಒಳ್ಳೆ ನಾರಿಯರೊಳು ಮನವಿಟ್ಟು ನೀನನ್ನಸಲ್ಲದವಳ ಕೈಯವಿಡಿದ್ಯೇಕೆ ಮೊದಲಿಗೆ 1ಏಸುಮನೆಯ ಹೊಕ್ಕು ದಣಿದೆ ಕಾಣದೆ ಕೃಷ್ಣಆಸು ಮನೆಯೊಳು ನೀನಿದ್ದು ಕಾಣಿಸಿಕೊಳ್ಳೆ 2ನಿನ್ನವಳೆನಿಸಿದ ಬಳಿಕ ಮಾತಾಡದೆಅನ್ಯಾಶ್ರಯ ನನಗಿದ್ದರೆ ಹೇಳು ನನ್ನಾಣೆ 3ನೀ ಪರಿಹರಿಸಲಾರದ ತಪ್ಪೆನ್ನಲ್ಲುಂಟೇನೊಈ ಪರಿಗಾಳ ಬಳಲಿಸಿ ಸುಮ್ಮನೆ 4ದೂರ ನೋಡಿದರೆ ನೀನೋಡುನಾ ಬಿಡೆನೆಂಬೆದೂರ ಸಾರಿ ನಿನ್ನ ಪೋಗಲಾರೆ ಪ್ರಸನ್ವೆಂಕಟೇಶ 5
--------------
ಪ್ರಸನ್ನವೆಂಕಟದಾಸರು