ಒಟ್ಟು 6 ಕಡೆಗಳಲ್ಲಿ , 6 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಉ) ಆತ್ಮನಿವೇದನೆ ಪಾಲಿಸಯ್ಯಾ ಪ ಎನ್ನ ಜೀಯಾ ಅ.ಪ. ದಾನಕ್ಕೆ ಲೋಭ ಅಡ್ಡಾಯಿತೋ ಮಾನಕ್ಕೆ ಕೋಪಬೀಜವಂಕುರಿಸಿತೋ ಶ್ವಾನನಂದದಿ ಬಾಳಾಯ್ತೋ 1 ಮೃಗ ತಲೆ ಸಿಕ್ಕುತೊಳಲುವ ತೆರದಿ ಮಾಯಾ ಬಿದ್ದೆನೊ ಭರದಿ 2 ದುರಿತವ ತರಿದು ಕಾಪಾಡೋ ಕರವ ಬಿಡಬ್ಯಾಡೊ 3
--------------
ಹನುಮೇಶವಿಠಲ
ಏನುಗತಿ ಏನುಗತಿ ಇನಕುಲೇಶ ಹೀನ ವಿಷಯದಿ ಮನ ಶ್ವಾನನಂತಿಟ್ಟ ಎನಗೇನು ಪ ಮೂರು ಗುಣಗಳಿಂದ ಮೂರು ತಾಪಗಳಿಂದ ಮೂರು ಈರೆರಡೊಂದು ಮದಗಳಿಂದ ಮೂರು ಐದಾರಿಂದ ಮರೆತು ತನು ಮೂಲಗಳ ಸ್ಮರಿಸದೇ ನರಹರಿಯ ನರಕಕ್ಕೆ ಗುರಿಯಾದ ಎನಗೆ 1 ಅತಿಥಿಗಳಿಗನ್ನ ಬಲು ಹಿತದಿ ಕೊಡದೆಲೆ ಪರ ಸತಿಯ ಸಂಗದಿ ನೆಲಸಿ ಹಿತವ ಮರೆದು ರತಿಪತಿಪಿತ ನಿನ್ನ ಸ್ತುತಿಸದೆ ಮತಿಗೆಟ್ಟು ಕ್ಷಿತಿಯೊಳಗೆ ನಾನೊಬ್ಬ ಯತಿಯಂತೆ ಚರಿಪ 2 ಇನ್ನಾದರೆನ್ನ ಪಾವನ್ನ ಮಾಡಲು ನಿನ್ನ ಘನ್ನ ಉಪಕೃತಿ ಮರಿಯೆ ಶ್ರೀ ನರಹರಿಯೆ ನಿನ್ನ ಪೊರತನ್ಯರನು ಮನ್ನಿಸುವರ ಕಾಣೆ ಬೆನ್ನ ಬಿದ್ದೆನೊ ದಯವನ್ನು ಮಾಡೆಲೋ ಬೇಗ3
--------------
ಪ್ರದ್ಯುಮ್ನತೀರ್ಥರು
ನಾನಾ ಯೋನಿಗಳೊಳು ಹೀನಜನ್ಮದಿ ಬಂದು ನಾನು ತಿರುಗಲಾರೆನೊ ಗೋಪಾಲ ಪ. ಶ್ರೀನಿವಾಸ ನಿನ್ನ ಸೇರಿದ ಬಳಿಕ ಉದಾಸೀನ ಮಾಳ್ಪರೇನೋ ಗೋಪಾಲ ಅ.ಪ. ಇಂದ್ರಿಯದೊಳಿದ್ದೆನೊ ಗೋಪಾಲ ಪಿಂಡವಾದೆನೊ ಗೋಪಾಲ ಮಾಸ ನಾಲ್ಕಯಿದಾಗಲ ವಯವಂಗಳಿಂದ ಬೆಳೆವುತಿದ್ದೆನೊ ಗೋಪಾಲ 1 ನರಳಿ ಕೋಟಲೆಗೊಂಡೆನೊ ಗೋಪಾಲ ಹಿರಿದು ಚಿಂತಿಸಿದೆನೊ ಗೋಪಾಲ ಕಷ್ಟಬಡುತಿದ್ದೆನೊ ಗೋಪಾಲ ಸಂದ ಧರೆಗೆ ಪತನವಾದೆನೊ ಗೋಪಾಲ2 ಘಾಸಿಯೊಳೊರಲುವೆನೊ ಗೋಪಾಲ ಘಾಸಿಸಿ ದುಃಖಿಪೆನೊ ಗೋಪಾಲ ಬ್ಯಾಸತ್ತು ಒರಲುವೆನೊ ಗೋಪಾಲ ಶ್ವಾಸ ಎತ್ತಿದೆನೊ ಗೋಪಾಲ 3 ಬಾಲತನದಿ ಬಹುವಿಧದಾಟವ ತೋರಿ ಮೇಲನರಿಯದಿದ್ದೆನೊ ಗೋಪಾಲ ಮಾರ್ಜಾಲ ಘಾತಕನಾಗಿದ್ದೆನೊ ಗೋಪಾಲ ಕೂಳಿಗೀಡಾಗಿದ್ದೆನೊ ಗೋಪಾಲ ಪಾಳೆಯಕೀಡಾದೆನೊ ಗೋಪಾಲ 4 ಆಗಿ ಬಾಳುತಲಿದ್ದೆನೊ ಗೋಪಾಲ ನೀಗಿ ಬಾಳುತಿದ್ದೆನೊ ಗೋಪಾಲ ಬಾಧೆಗೆ ಬೆಂಡಾದೆನೊ ಗೋಪಾಲ ಆಗಲು ಪುತ್ರ ಬಾಂಧವರಿಗೋಸ್ಕರ ಭವ- ಸಾಗರ ಎತ್ತಿದೆನೊ ಗೋಪಾಲ 5 ಬಾಲ್ಯಯೌವನವಳಿದು ಜರೆ ಒದಗಿ ನಾನು ಮೇಲೇನರಿಯದಿದ್ದೆನೊ ಗೋಪಾಲ ಬೀಳುತೇಳುತಲಿದ್ದೆನೊ ಗೋಪಾಲ ಹೋದಂತಿದ್ದೆನೊ ಗೋಪಾಲ ಗೂಳಿಯಂದದಲಿದ್ದೆನೊ ಗೋಪಾಲ 6 ಬಾಳುತಲಿದ್ದೆನೊ ಗೋಪಾಲ ಗಿಷ್ಟನೆನಿಸಿಕೊಂಡೆನೋ ಮುಟ್ಟರೆನಿಸಿಕೊಂಡೆನೊ ಗೋಪಾಲ ಕೊಟ್ಟು ತಿನಿಸಿದೆನೊ ಗೋಪಾಲ7 ವೇದನೆಗೊಳುತಿದ್ದೆನೊ ಗೋಪಾಲ ಕೊಂಡದಿ ಬಿದ್ದೆನೊ ಗೋಪಾಲ ಗುಹ್ಯ ಯಾತನೆಗೊಳಗಾದೆ ಗೋಪಾಲ ಬಾಧೆಯೊಳು ಒರಲುವೆನೊ ಗೋಪಾಲ 8 ನಿನ್ನ ನೆನೆಯದಿದ್ದೆನೊ ಗೋಪಾಲ ದುಷ್ಟಬುದ್ಧಿಯೊಳಿದ್ದೆನೊ ಗೋಪಾಲ ಶ್ರೇಷ್ಠಜನ್ಮದಿ ಬಂದೆನೊ ಗೋಪಾಲ ಸೃಷ್ಟಿಯೊಳು ತುರುಗೇರಿ ಗುರು ಅಚಲಾನಂದವಿಠಲ ಸಲಹೆಂದೆನೋ ಗೋಪಾಲ 9
--------------
ಅಚಲಾನಂದದಾಸ
ಭಕ್ತನ್ನ ಮಾಡಿಕೊ ಎನ್ನಾ ನಿಜ ಭಕ್ತನಾಗಿ ನಿನ್ನ ಭಕ್ತನ್ನ ಮಾಡಿಕೋ ಎನ್ನಾ ಪ ಸಾರೆ ಕೀಚಕ ಬೇಡ ಓಡಿ ಅದು [?] ಪಾರಿ ಸಿಡಿವ ಪರಿಜಾಲದಿ ಕೂಡಿ ಆಡು ಆಗದೆನ್ನ ಕಾಡಿ ಮತ್ತೆ ಮೂರು ಮಡುವಿನೊಳು ನೋಳ್ಪರು ದೂಡಿ ಭಕ್ತನ್ನಾ 1 ಘೃತ ಭಾಂಡವಿರೆ ನೊಣ ನೋಡಿ ಅಲ್ಲಿ ಪರಿ ಭರದಿ ಈಸಾಡಿ ಸತಿಸುತಯುತ ಭವನೋಡಿ ಅಲ್ಲಿ ಮತಿಗೆಟ್ಟು ಮೋಹಿಸಿ ಬಿದ್ದೆನೊದ್ದಾಡಿ 2 ಉರಿಯ ಕಾಣಲು ಶಿಶು ಐದಿ ತಾ ಭರದಿಯದರ ಪರಿಯರಿವೋಲುನೊಯ್ದು ಅರಿದೆ ವಿಷಯದುರಿ ಮೈಯ್ದು ಇನ್ನು ನರಸಿಂಹ ವಿಠ್ಠಲ ನೀನೇ ಗತಿಯೆಂದೆ ಭಕ್ತನ್ನ 3
--------------
ನರಸಿಂಹವಿಠಲರು
ಶ್ರೀರಮಣನೆ ಕಾಯೊ ದಯಮಾಡು ರಂಗಶ್ರೀರಮಣನೆ ಕಾಯೊ ಏ ಕರುಣದಿ ಪ. ನೀರಜಭವಜನಕ ತಾರಿದೆ ಭವದಿಂದ ಏ ಮುರಹರೆಸೇರಿದೆ ನಿನ್ನ ಪದವ ಶ್ರೀರಮಣನೆ ಕಾಯೊ ಅ.ಪ. ಕರುಳ ಸಂಬಂಧವೆಂಬೊ ಎನ್ನ ಕೊರಳಿಗೆಉರುಳುಗಳನೆ ಸಿಲುಕಿ [ಸಿ]ಬರಿದೆ ಮದಗಳೆಂಬ ಈಕರಿಗಳ ಧುರತಗ್ಗದು ಹರಿಯೆ 1 ಅರಿಷಡ್ವರ್ಗವೆಂಬ ಈ ಮಹಾಉರಗಭಯಕೆ ಸಿಲುಕಿಬರಿದೆ ಮದಗಳೆಂಬ ಈ ಕರಿಗಳ ಧುರತಗ್ಗದು ಹರಿಯೆ 2 ಬಲುದುರ್ವಿಷಯಂಗಳ ಈ ಬಲೆಗಳಸಾಲಿಗೆ ಒಳಗಾದೆಕಲಾವತಿ ಜನರೆಂಬ ಈಖಳರ ಒಳಬಿದ್ದೆನೊ ಹರಿಯೆ3 ಜರೆನರೆಗಳು ಬಂದು ಇರುವಾಗಪರಸತಿಯರ ಕಾಟನರನಾಯಿಗಳಂತೆ ಈ-ಪರಿ ನೆರೆಹೊರೆಗಳ ಕೂಟ 4 ದಯವಿಲ್ಲದ ಸತಿಯು ಈ ದುರುಳರುನಯಹೀನರು ಸುತರುಭಯದಿಂದಲಿ ನೊಂದೆದಯಾಂಬುಧೇ ಹಯವದನ ನೀ ಬಂಧು 5
--------------
ವಾದಿರಾಜ
ತೇಲಿಸೊ ಇಲ್ಲ ಮುಳುಗಿಸೊ- ನಿನ್ನ-|ಪಾಲಿಗೆ ಬಿದ್ದೆನೊಪರಮದಯಾಳೊಪಸತಿ-ಸುತ-ಧನದಾಶೆ ಎಂತೆಂಬ ಮೋಹದಿ |ಹಿತದಿಂದ ಅತಿನೊಂದು ಬಳಲಿದೆನೊ ||ಗತಿಯನೀವರ ಕಾಣೆ ಮೊರೆಯ ಲಾಲಿಸೊ ಲಕ್ಷ್ಮೀ-|ಪತಿನಿನ್ನ ಚರಣದ ಸ್ಮರಣೆಯಿತ್ತೆನ್ನ1ಜರೆರೋಗ ದಾರಿದ್ರ್ಯ ಕಶ್ಮಲವೆಂತೆಂಬ |ಶರಧಿಯೊಳಗೆ ಬಿದ್ದು ಮುಳುಗಿದೆನೊ ||ಸ್ಥಿರವಲ್ಲ ಈ ದೇಹ ನೆರೆನಂಬಿದೆನು ನಿನ್ನ |ಕರುಣಾಭಯವನಿತ್ತು ಪಾಲಿಸೊ ಹರಿಯೆ 2ದೋಷವುಳ್ಳವ ನಾನು ಭಾಷೆಯುಳ್ಳವ ನೀನು |ಮೋಸ ಹೋದೆನೊ ಭಕ್ತಿರಸವ ಬಿಟ್ಟು ||ದಾಸರ ಸಂಗವಿತ್ತು ಪಾಲಿಸೊ ಹರಿಯೆ 3
--------------
ಪುರಂದರದಾಸರು