ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೆಟ್ಟೆ ಕೆಟ್ಟೆ ಕೆಟ್ಟೆ ಕೃಷ್ಣ ದೃಷ್ಟಿಕೊಟ್ಟು ಕೈಯ ಪಿಡಿಯೋ ಪ ಮೂರ್ತಿ ಬಿಟ್ಟರೆನ್ನ ಕಷ್ಟಬಿಡಿಸೆಯಾರ ಬೇಡಲೋ ಅ.ಪ ಕಟ್ಟಿತಾಳಿ ತೊರೆಯೆ ಗಂಡ ಕಷ್ಟವಲ್ಲೆ ಸತಿಗೆ ಪೇಳು ಶಿಷ್ಠ ದೊರೆಯೆ ದಾಸನೆಂಬಿ ಶ್ರೇಷ್ಠತಾಳಿ ಕಂಠದಲ್ಲಿದೆ ಬಿಟ್ಟಿ ಏನೋ ಬಿರದು ಎಲ್ಲ ಕಟ್ಟಿಕೊಂಡು ಮೆರೆಯುತಿಹುದು ಕೆಟ್ಟದೂರು ತಟ್ಟದಿರದು ಭ್ರಷ್ಠನೆನಿಸಬೇಡೊ ಎನ್ನ 1 ಎಡವಿ ಬೀಳೆ ಮಗುವು ತಾಯಿ ಕಡಿವಳೇನು ಪೊಡವಿಗೊಡೆಯ ಅಡಿಯ ಪಿಡಿದ ದಾಸನಾನು ಬಡವನಾದರೇನೂ ನುಡಿಯೋ ಭಾರ ನಿನಗೆ ತಡವು ಯಾಕೋ ಬರಿದೆ ಬಿಂಕ ಸಡಲಿ ಸುತ್ತ ಮಾಯಪಾಶ ದೃಢವ ಮಾಡು ಭಕ್ತಿ ವಿರಕ್ತಿ 2 ದೋಷಿಯಾದರೇನು ನಾನು ದೋಷದೂರನಲ್ಲೆ ನೀನು ನಾಶಮಾಡು ಬೀಸಿದೃಷ್ಠಿ ಮೀಸಲಲ್ಲೆ ನಿನಗೆ ಸ್ವಾಮಿ ಈಶ ಕರುಣಕುಂಟೆ ಮೇರೆ ಓಸು ಜಗದ ಭಾಸವೆಲ್ಲ ಶ್ರೀಶ ನೀನು ಕೊಟ್ಟರುಂಟು ದಾಸಪೋಷ ಶ್ವಾಸನಾಣೆ 3 ಗಂಟು ಕಳ್ಳ ನೀನೆ ಸತ್ಯ ಭಂಟನೆನ್ನ ಸ್ವತ್ತು ನೀನೆ ನೆಂಟ ಬೇರೆ ಇಲ್ಲದಿರಲು ಅಂಟಿಸಿರುವೆ ವಿಷಯ ಕಂಟಕ ತಂಟಿ ಬಿಟ್ಟು ಈಗಲೇನೆ ಅಂಟಿಕೊಳ್ಳೊ ಮನದಿ ಗಟ್ಟಿ ಕುಂಟು ಕಲೆಯ ಸುಟ್ಟುಬಿಟ್ಟು ಉಂಟು ಮಾಡು ಎಲ್ಲ ನನಗೆ 4 ಬೆಟ್ಟದೊಡೆಯ ಶ್ರೀನಿವಾಸ ಎಷ್ಟರವನೊ ನಾನು ಭೃತ್ಯ ಪಾದ ಪಿಡಿದಿಹೆ ಸುಟ್ಟು ಸುಟ್ಟು ಭವದಿ ಬೆಂದು ಇಷ್ಟು ನುಡಿದೆ ಜಯಮುನೀಂದ್ರ ಶ್ರೇಷ್ಟಹೃಸ್ಥಮಧ್ವ ಶ್ರೀ ಪ್ರೇಷ್ಟದೈವ ಕೃಷ್ಣವಿಠಲ5
--------------
ಕೃಷ್ಣವಿಠಲದಾಸರು
ನೀನಹುದೋ ಘನ ಮಹಿಮ ಮುನಿಜನರೊಡಿಯ ಪೂರ್ಣ ದೀನದಯಾಳು ನೀನೆ ಹರಿಯೆ 1 ಪತಿತಪಾವನನೆಂದು ಶ್ರುತಿ ಸಾರುವರು ಕೇಳಿ ಅತಿ ಹರುಷದಲಿ ಬಂದೆನೊ ಹರಿಯೆ 2 ಮತಿ ಹೀನನವಗುಣವ ಕ್ಷಿತಿಯೊಳು ನೀ ನೋಡದೆ ಪಥವಗೊಳಿಸುವದು ಎನಗೆ ಹರಿಯೆ 3 ಮರೆಯ ಹೊಕ್ಕಿಹೆ ನಿಮ್ಮ ಚರಣಕಮಲಕೆ ಪೂರ್ಣ ಕರುಣದ ಅಭಯ ತೋರೊ ಎನಗೆ ಹರಿಯೆ 4 ಅರಿಯೆ ನಾ ನಿಮ್ಮ ವಿನಾ ಬ್ಯಾರೆ ಇನ್ನೊಂದು ಪಥ ಶಿರವ ನಮಿಸಿಹೆನೊ ನಿಮಗೆ ಹರಿಯೆ 5 ಶರಣಾಗತರ ಹೊರೆವ ಬಿರದು ನಿಮ್ಮದು ಪೂರ್ಣ ಸಾರುವದು ತಿಳಿದುಕೊಳ್ಳೊ ಹರಿಯೆ 6 ಬಿಡಲರಿಯೆ ನಾ ನಿಮ್ಮ ಪಿಡಿದು ಶ್ರೀಪಾದವನು ನೋಡಿ ದಯಮಾಡೊ ಎನಗೆ ಹರಿಯೆ 7 ಬ್ಯಾರೆ ಗತಿ ಕಾಣೆ ನಿಮ್ಮ ಚರಣಕಮಲದಾಣೆ ಸಿರಿ ಸಕಲಪದವು ನೀನೆ ಹರಿಯೆ 8 ಭಿನ್ನವಿಲ್ಲದೆ ನೋಡಿ ಚೆನ್ನಾಗಿ ಮಹಿಪತಿಯ ಧನ್ಯಗೈಸೊ ಪ್ರಾಣವ ಹರಿಯೆ 9
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಿರದುದಾರದು ಗೋವಿಂದ ಅರಿತು ನೋಡಯ್ಯ ಶ್ರೀ ಹರಿ ಮುಕುಂದ ಧ್ರುವ ಪತಿಯ ಕಣ್ಣಿನ ಮುಂದೆಳಿಯಲು ಸತಿಯ ಗತಿಗೊತ್ತಿಹ್ಯದು ದಾರಿಗೆ ಕೊರತಿಯ (ತೆಯು?) 1 ಒಡಿಯನ ಮುಂದೆ ಬಂಟಗಾಗಿರೆ ಕುಂದು ಒಡನೆ ಬೀಳುದು ತೊಡಕಾರಿಗೆ ಬಂದು 2 ನಿನ್ನವನೆನಿಸಿ ಮಹಿಪತಿಗೆ ಪೂರ್ಣ ಇನ್ನರಹುವರೆ ಎನ್ನವಗುಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು