ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದುರಿತಗಜ ಪಂಚಾನನ-ನರಹರಿಯೆ ದೇವರ ದೇವ ಕಾಯೊ ಗೋವಿಂದ ಪ ಹೆಸರುಳ್ಳ ನದಿಗಳು ಒಳಗೊಂಬೊ ಸಮುದ್ರನುಬಿಸುಡುವನೆ ಕಾಲುಹೊಳೆಗಳ ಗೋವಿಂದ 1 ಒಂದು ಮೊಲಕೆ ಆರು ಹುಲಿ ಬಂದು ಕವಿದಿದೆಬಂಧನ ಬಿಡೆಸೆನ್ನ ತಂದೆ ಗೋವಿಂದ 2 ಹೆತ್ತ ಮಕ್ಕಳು ಹುಚ್ಚರಾದರೆ ತಾಯಿ ತಂದೆಎತ್ತದೆ ನೆಲಕೆ ಬಿಸುಡುವರೆ ಗೋವಿಂದ 3 ಕರ್ಮ ಬೆನ್ನ ಬಿಡದಿದ್ದರೆನಿನ್ನ ವಾಲೈಸಲ್ಯಾಕೆ ಗೋವಿಂದ4 ಆಪÀತ್ತು ತಾಪತ್ರಯ ಬೆನ್ನ ಬಿಡದಿದ್ದರೆಶ್ರೀಪತಿ ಶರಣೆನ್ನಲ್ಯಾಕೆ ಗೋವಿಂದ5 ಅರಸು ಮುಟ್ಟಲು ದಾಸಿ ರಂಭೆಯಾದಳು ದೇವಪರುಷ ಮುಟ್ಟಲು ಲೋಹ ಸ್ವರ್ಣ ಗೋವಿಂದ 6 ಮಾನಾಭಿಮಾನದೊಡೆಯ ರಂಗವಿಠಲಜ್ಞಾನಿಗಳರಸನೆ ಕಾಯೋ ಗೋವಿಂದ 7
--------------
ಶ್ರೀಪಾದರಾಜರು
ಮುನಿಯುವರೇ ಕೃಷ್ಣಾ ಮುನಿಯುವರೆ ಪ ದಣಿಸಲಾಗದೊ ನಿನ್ನ ನೆನೆವ ಭಕುತರೊಳು ಅ.ಪ ಮುನಿಗಳು ಮನದೊಳು ಕ್ಷಣಬಿಡದಲೆ ನಿನ್ನ ದಣಿಸಿ ಕುಣಿಸುವರೊ ಮೌನದಿಂದಲಿ ನಾ ಮಣಿದು ಬೇಡುವೆ ಬರಿದೆ ಹಣಿದು ಬಿಸುಡುವರೆ ಕೆಣಕಿದವರ ನೀ ಕ್ಷಣದಿ ಕಾಪಾಡಿದೆ 1 ಬಲಿಯ ಯಾಚಿಸಿ ಭಕ್ತಿಬಲೆಗೆ ನೀ ಸಿಲುಕಿದೆ ಶಿಲೆಯನೊತ್ತಿ ಸುಶೀಲೆಯ ಪೊರೆದೆ ಜಲಧಿಶಯನಾ ನೀ ರಥಕೆ ಸಾರಥಿಯಾದೆ ಛಲವೇತಕೆನ್ನೊಳು ನೀನೆ ಗತಿ ಎಂದರೆ2 ಎಂಜಲಾಸೆಗೆ ಸೋತು ಶಬರಿಯ ಪೊರೆದೆ ಸಂಜೆ ಹಗಲೆನ್ನದೆ ಎಂಜಲ ಬಳಿದೆ ಅಂಜದೆ ಅಜಾಮಿಳಗೊಲಿದೆಯೋದೇವ ಅಂಜೆನೊ ಎಂದಿಗೂ ಕುಂಜರವರದಾ 3 ಶಪಥಮಾಡಿ ನಿನ್ನ ಪಂಥವ ಕೆಡಿಸಲು ಕುಪಿತನಾಗಲಿಲ್ಲ ಕುರುಪಿತಾಮಹನೊಳು ಆಪ್ತನಿಮಿತ್ತಬಾಂಧವನೆಂದು ನಿನ್ನ ಪ್ರಾಪ್ತಿಯ ಬೇಡಲು ಬಂದುದಕೆ ಈಗ 4 ಪರಿ ಅಂಕಿತ ಪೇಳದೆ ಬಿಂಕತನದಲಿ ಕಾಲವ ಕಳೆದೆ ಶಂಕರನುತ ಶ್ರೀ ವೇಂಕಟೇಶ ನಿನ್ನ ಕಿಂಕರನೆನಿಸೆನ್ನ ಸಂಕಟ ಹರಿಸೂ5
--------------
ಉರಗಾದ್ರಿವಾಸವಿಠಲದಾಸರು