ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೇಶಾಧಿಪತಿ ನರಹರಿಯೆ ನಿನ್ನಯ ಪಾದದಾಸರ ದಾಸನೆಂದೆನಿಸಬೇಕೆನ್ನ ಪ ರಜತಮೋಗುಣ ಪ್ರವರ್ತಕ ಮೂಲಾಂತರದಿಂಯಜಮಾನತನದಹಂಕಾರವನು ಒಲ್ಲೆಭುಜ ಚಕ್ರ ಧರಿಸಿ ಸಾತ್ತ್ವಿಕರ ಪಾದಾಂಬುಜರಜ ಭಜಕರ ಭಜಕನೆಂದೆನಿಸೆನ್ನ1 ಸಿರಿಗಂಧ ಕುಂಕುಮ ಸಾದು ಜವ್ವಾಜಿ ಕ-ಸ್ತೂರಿ ತಿಲಕವನಿಡುವುದ ನಾನೊಲ್ಲೆಸಿರಿ ಊಧ್ರ್ವಪುಂಡ್ರ ದ್ವಾದಶನಾಮವಿಡುವವರಪರಿಚಾರಕರ ಪರಿಚಾರಕನೆನಿಸೆನ್ನ 2 ಸ್ವಾದು ಕಲ್ಪಿತವಾದ ಭಕ್ಷ್ಯ ಭೋಜ್ಯಗಳನುಆದರದ ಅಮೃತಾನ್ನ ಉಣುವುದನೊಲ್ಲೆಬೋಧೆಯನು ಹೇಳುವ ಕೇಳುವ ಹರಿದಾಸರಪಾದತೀರ್ಥ ಪ್ರಸಾದವನುಣಿಸೆನ್ನ3 ಕಾಲ ಕರ್ಮದೊಳುಪೇಕ್ಷೆಯ ಮಾಡಿ ಹರಿಭಕುತಿಶೀಲರಹಿತ ಬ್ರಾಹ್ಮಣನಾಗಲೊಲ್ಲೆಕೀಲನರಿತು ಹರಿಭಕುತಿಯನು ಮಾಳ್ಪ ಪರಚಾಂ-ಡಾಲನ ಮನೆ ಬಾಗಿಲ ಕಾಯಿಸೆನ್ನ 4 ಕ್ರೂರಶಾಸ್ತ್ರವನೋದಿ ಕುರಿ ಕೋಣವನೆ ಕಡಿದುಘೋರ ನರಕದಿ ಬೀಳುವುದನು ನಾನೊಲ್ಲೆವಾರಿಜಾಕ್ಷ ನಿನ್ನ ಚರಣ ಸೇವಕರ ಮನೆಯದ್ವಾರಪಾಲಕನೆಂದೆನಿಸೆನ್ನ 5 ಪಟ್ಟೆಪಟ್ಟಾವಳಿ ದಿವ್ಯ ದುಕೂಲ ಮಿಂ-ಚಿಟ್ಟ ವಸ್ತ್ರ ಉಡುವುದನೊಲ್ಲೆನೆಟ್ಟನೆ ಕಾವಿ ಕಾಷಾಯಾಂಬರಗಳನುಉಟ್ಟವರ ಬಂಟನೆಂದೆನಿಸೆನ್ನ 6 ಅರ್ಥ ವಿಷಯಂಗಳ ಫಲಾಪೇಕ್ಷೆಯಿಂ ಪುಣ್ಯತೀರ್ಥಯಾತ್ರೆಯ ಮಾಡಲೊಲ್ಲೆದೈತ್ಯ ಮರ್ದನ ಬಾಡದಾದಿಕೇಶವ ನಿನ್ನಕೀರ್ತನಗೈವರ ಸ್ತುತಿಕನೆನಿಸೆನ್ನ 7
--------------
ಕನಕದಾಸ
ಸುಲಭದ ಮಾತಿದು ತಿಳಿದು ಪೇಳಿ ಹೊಲಬುದಪ್ಪಲು ಬೇಡ ಸುಲಿಗೆಯಾಹುದು ಮುಂದೆ ಪ ಅಂತರಿಕ್ಷದಲೊಂದು ನಿಂತಿಹ ವೃಕ್ಷವಾ- ನಂತಾನಂತವಾದೆಲೆಗಳುಂಟು ನಿಂತಿಹ ಎಲೆಗಳು ಬೀಳುವುದನು ನೋಡಿ ಮಂತ್ರಿಯೊಬ್ಬನು ಕುಳಿತು ಎಣಿಸುವನಯ್ಯ 1 ಭೂಮಿಯ ಮೇಲೊಂದು ಭೂಮಿಯು ಜನಿಸಲು ತಾ ಮನಸೋತನು ದೊರೆಯೊಬ್ಬನು ಪ್ರೇಮದಿ ರಾಜ್ಯವನಾಳುವ ಸಮಯಕ್ಕೆ ಸೀಮೆಯ ಮೇಲೆಲ್ಲ ಗುಡಿಗಟ್ಟಿತಯ್ಯ 2 ಕಡಗೋಲು ಮಿಡುಕಿತು ಒಡೆಯಿತು ಪಾತ್ರವು ಪಿಡಿದ ಬೆಣ್ಣೆಯೊಳೊಂದು ಗಿಡ ಹುಟ್ಟಿತು ಅಡವಿಯ ಮಧ್ಯದಿ ಹುಟ್ಟಿದ ಗಿಡವಿನ ಎಡೆಯೊಳು ಗಿಣಿ ಬಂದು ಮರಿಯಿಕ್ಕಿತಯ್ಯ 3 ಬಿಲ್ಲುಗಾರನು ಬಂದು ಬಲ್ಲಿದ ಪಕ್ಷಿಯ ಮೆಲ್ಲನೆ ಕೆಡೆಯಲು ಬೇಕೆನುತ ನೆಲ್ಲಿಯ ಎಲೆಯನ್ನು ಎಣಿಸಿ ಬೀಸಾಡುವ ನಲ್ಲನೊಬ್ಬನು ಕಂಡು ಹೊರಗಿಟ್ಟನಯ್ಯ 4 ಗುಡಿಯ ಬಾಗಿಲ ಮುಂದೆ ವೃಕ್ಷದ ಗಿಣಿಯನ್ನು ಮಡದಿಯೋರ್ವಳು ಕಂಡು ಒಳಗಿಟ್ಟಳು ಗಿಡುಗನ ಹಾವಸೆ ಒಡೆಯನು ಕಾಣುತ್ತ ಒಡಲಾಳು ಸುರಭಿಯ ಕಟ್ಟಿದನಯ್ಯ 5 ಮೂಗನು ಕಾಣುತ್ತ ಕೂಗ್ಯಾಡಿ ಕರೆಯಲು ಆಗಲೇ ಕಿವುಡನು ಧ್ವನಿಯ ಕೇಳಿ ಬೇಗದಿ ಕುರುಡನು ಬಂದು ಹಾಲೆರೆಯಲು ಆಗಲೆ ಪಕ್ಷಿಯು ಉಂಡು ಹಾರಿತಯ್ಯ6 ಬುದ್ದಿಹೀನನು ಕಂಡು ಶುದ್ಧ ಸ್ವಾಮಿಯೊಳು ತಿದ್ದಿದ ಗುಡಿಗಳು ಬಿದ್ದಮೇಲೆ ಎದ್ದು ಪಕ್ಷಿಯು ಹೋಗಿ ವರಾಹತಿಮ್ಮಪ್ಪನು ಇದ್ದಲ್ಲಿಗಾಗಿಯೆ ಹಾರಿಹೋಯಿತಯ್ಯ 7
--------------
ವರಹತಿಮ್ಮಪ್ಪ