ಒಟ್ಟು 4 ಕಡೆಗಳಲ್ಲಿ , 3 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಮರುಳಾಗುವೆಯೇ ಎಲೆಮಾನವ ನಿನ್ನ ಮಾನಿನಿಯ ಗುಣಕೆ ನೀ ಹಿಗ್ಗಿ ಹಿಗ್ಗಿ ಪ ದಾನ ಧರ್ಮಗಳ ಕೊಡಬೇಕೆಂದರೊಡ ಬಡಲು ಹೀನ ಗುಣಗಳನೆ ತಾ ಸೇವಿಸುವಳು ಜ್ಞಾನ ಮೋಕ್ಷಾದಿಗಳ ಹಾದಿಯನುಕಟ್ಟಿ ಭವ ಕಾನನವನೆ ಹೊಗಿಸಿ ತೊಳಲಿಸುವಳು 1 ನರಕವನು ತನ್ನಲ್ಲಿ ನೆಲೆಮಾಡಿ ಕೊಂಡಿಹಳು ಪರಿಪರಿಯ ಮೋಹಗಳ ಬೀಸುತಿಹಳು ಸ್ಮರನ ಬಾಣವ ಮಾಡಿ ಸಾಲು ಗೊಲೆಕೊಲ್ಲುವಳು ಅರಿಯದವರಂತೆ ಮಿಣ್ಣಗೆ ಇರುವಳು 2 ತನ್ನಮನ ಬಂದಂತೆ ಚರಿಸುವಳು ಪಗಲಿರುಳು ಕನ್ನಗೊಯ್ಕರ ವೋಲು ಕೊರೆಯುತಿಹಳು ಭಿನ್ನಭಾವದಿ ನಡೆದು ಮನೆಯ ಪಾಲ್ಮಾಡುವಳು ಕಣ್ಣಿನೊಳು ಕಂಡೊಡವೆಗಳನಿರಿಸಳು 3 ಸುದತಿ ಯಾಕಾರೆ ಯಾಗಿಹಳು ನೋಯೆ ನುಡಿವಳು ಕಂಡ ಕಂಡವರೊಳು ಹೋಯೆಂದು ಕೂಗುವಳು ಶಿಕ್ಷಿಸಳು ನಿನ್ನನುರೆ ಬಾಯೊಳಗೆ ಭಯಬಿಡಿಸಿ ಹಾಗಿಸುವಳು 4 ಕಾಮ ಕ್ರೋಧಾದಿಗಳ ಕೀಲ ಬಲಗೊಳಿಸುವಳು ಪ್ರೇಮ ಗೆಡಿಸುವಳೆಲ್ಲ ಬಾಂಧವರನು ಭೂಮಿಯೋಳಗಧಿಕ ಭೀಮನ ಕೋಣೆ ಲಕ್ಷ್ಮೀಪತಿಯ ನೆನೆನೆನೆದು ಸಖಿಯಾಗು ಕಂಡ್ಯಾ 5
--------------
ಕವಿ ಪರಮದೇವದಾಸರು
ನಿಮ್ಮಿಚ್ಛೆ ಏನೇನು ಇಲ್ಲ ಎಲ್ಲಾ ಪರಮಾತ್ಮ ನಾಟ ಪ ಪಗಲಿರುಳಾರಿಂದಬಹುದು ರವಿಶಶಿ ದಿಗುವಿವರವ ಬೆಳಗುತಲುದಿಸುವರು ಗಗನ ಮಾರ್ಗದಿ ಮಳೆ ಬಹುದು ಜಗದುದರನಾಟದಿ ಸೃಷ್ಟಿ ಸ್ಥಿತಿಲಯವಹುದು 1 ಮುಳಗದಂತೆ ಇಳೆಯು ಇರುತಿಹುದು ಸುಳಿದು ಗಾಳಿಯು ಬೀಸುತಿಹುದು ಮೃತ್ಯು ಕಾಲ ಬಳಿ ಕೊಲ್ಲುತಿಹುದು 2 ನಾನು ಮಾಡಿದೆನೆನ್ನುತಿಹುದು ಕೆಡಿಸಿದನೆನ್ನುತಿಹರು 3 ಬಾಲ್ಯಯೌವನವು ತೋರುವುದು ನಿನ್ನ ಕಾಲ ಕಾಲಕಾಗುವುದಾಗು ತಿಹುದುವಧಿ ಕಾಲತೀರಲು ತನಗೆ ತಾ ಲಯವಹುದು 4 ಉಳ್ಳಷ್ಟ ಮೀರ ದಂತಿಹುದು ಎಲೆ ನಿಲ್ಲದೊಡುವ ವಾಯುಸುತನ ಕೋಣೆಯ ಲಕ್ಷ್ಮೀ ಊಳಿಗ ಸಾಗುತಿಹುದು 5
--------------
ಕವಿ ಪರಮದೇವದಾಸರು
ಲೋಕನೀತಿಯ ಪದಗಳು 448 ಅನ್ನದಾನವನ್ನೆ ಮಾಡು ಕನ್ಯದಾನವನ್ನೆ ಮಾಡುನಿನ್ನ ನಂಬಿದರ ಪೊರೆದುನ್ನತ ಹರ್ಷದಿ ಬಾಳುಸನ್ನುತ ಸರ್ವಲೋಕಗಳನ್ನು ರಕ್ಷಿಸುವನಾಗ ಪ್ರ-ಸನ್ನ ಮೂರುತಿಯಾಗುರನ್ನದ ರಾಶಿಗಳನ್ನು ಚಿನ್ನದ ಆಭರಣಗಳನ್ನುಭೂಸುರರಿಗಿತ್ತು ಮನ್ನಿಸು ಉದಾರನಾಗುಮನ್ನೆಯರೆಲ್ಲರು ಬಂದುನಿನ್ನನೋಲೈಸಲೆಂದು ಅಪರ್ಣೆಪರಿಸಿದಳು 1 ಕೋಟಿ ಗೋದಾನವ ಮಾಡು ಸಾಟಿಯಿಲ್ಲದಂಥಾ ಪಂಚಕೋಟಿ ಗಜದಾನ ಶತಕೋಟಿಯಶ್ವದಾನಗಳಮೀಟಾದ ಬ್ರಾಹ್ಮರಿಗಿತ್ತು ಕೀರ್ತಿವಂತನಾಗು ಕಿ-ರೀಟ ಶೌರ್ಯದೊಳಾಗು ಮೀಟಾದ ಮಂತ್ರಿಗಳ ಕಿ-ರೀಟ ರತ್ನಕಾಂತಿಗಳ ಕೋಟಿ ನಿನ್ನ ಪಾದದಲ್ಲಿಧಾಟಿಯಾಗಿರುವನಾಗುಲೂಟಿಸಿ ವೈರಿಗಳನು ಗೋಟುಗೊಳಿಸುವ ಶಶಿಜೂಟ ಭಕ್ತನಾಗು 2 ಇತ್ತೆರದೆ ಬೀಸುತಿಹ ಮುತ್ತಿನ ಚಾಮರ ಶ್ವೇತಛ್ಛತ್ರ ಸೀಗುರಿಗಳ ಮೊತ್ತದ ಸಾಲೊಳಗೆ ಒ-ಪ್ಪುತ್ತಲಿರುವವನಾಗು ಸತ್ಯವಂತನಾಗು ಸುವ್ರತ ನೀನಾಗುಪೆತ್ತವರ ನೋಡಿ ನಲಿವುತ್ತಿರಲು ಭೂಸುರರುಮುತ್ತಿನಕ್ಷತೆಯನಾಂತುಪೃಥ್ವಿಯ ವೊಳಗೆಲ್ಲಾ ಸ-ರ್ವೋತ್ತಮ ಪುರುಷನಾಗೆನುತ್ತಮಸ್ತಕದಿ ತಳಿವುತ್ತ ಪರಸಿದರು 3 ಇಂದ್ರನಾಗು ಭೋಗದೊಳು ಸತ್ಯವಾಕ್ಯದೊಳು ಹರಿ-ಶ್ಚಂದ್ರನಾಗು ಪಾಲನೆಯ ಮಾಡುವುದರೊಳಗೆ ಉ-ಪೇಂದ್ರನಾಗು ಬುದ್ಧಿ ಕೌಶಲದೊಳು ತಿಳಿಯಲು ನಾ-ಗೇಂದ್ರ ನೀನಾಗುಚಂದ್ರನಾಗು ಶಾಂತಿಯೊಳಗೆಂದು ವಂದಿಮಾಗಧರವೃಂದ ಕರವೆತ್ತಿ ಜಯವೆಂದು ಪೊಗಳುತ್ತಿರಲಾ-ಚಂದ್ರಾರ್ಕವು ಸೌಖ್ಯದಿ ಬಾಳೆಂದು ಸಾನಂದದೊಳಾಗಇಂದಿರೆ ಪರಸಿದಳು4 ಧೀರನಾಗುದಾರನಾಗು ಸೂರಿಜನವಾರಕೆ ಮಂ-ದಾರನಾಗು ಸಂಗರ ಶೂರನಾಗು ವೈರಿ ಜ-ಝ್ಝೂರನಾಗು ಮಣಿಮಯ ಹಾರನಾಗುವೀರಾಧಿವೀರ ನೀನಾಗುಭೂರಮಣನಾಗು ಮಂತ್ರಿವಾರ ಸಂರಕ್ಷಕನಾಗುಕಾರುಣ್ಯಸಾಗರನಾಗು ಕಾಮಿತಫಲಿದನಾಗುಶ್ರೀ ರಾಮೇಶನಪಾದಾಬ್ಜ ವಾರಿಜ ಭಕ್ತನಾಗೆಂದುಶಾರದೆ ಪರಸಿದಳು5
--------------
ಕೆಳದಿ ವೆಂಕಣ್ಣ ಕವಿ
ಹೇಗೆ ಅರ್ಚಿಸಲಿ ಮೆಚ್ಚಿಸಲಿ ನಿನ್ನನಾಗಶಯನ ನಾರದವಂದಿತನೆ ದೇವಾ ಪಮಂಗಳಾಭಿಷೇಕಕೆಉದಕತರುವೆನೆನೆಗಂಗೆಯ ಅಂಗುಟದಿ ಪಡೆದಿಹೆಯೊ ||ಸಂಗೀತ ಕೀರ್ತನೆ ಪಾಡುವೆನೆಂದರೆಹಿಂಗದೆ ತುಂಬುರ ನಾರದರು ಪಾಡುವರೊ 1ಪುಷ್ಪವ ತಂದು ನಿನಗರ್ಪಿಸುವೆನೆಂದರೆಪುಷ್ಪ ಫುಲ್ಲಯಿಸಿದೆ ಹೊಕ್ಕುಳಲಿ ||ಮುಪ್ಪತ್ತು ಮೂರ್ಕೋಟಿ ದೇವತೆಗಳು ನಿನಗೊಪ್ಪಯಿಸೆ ನೈವೇದ್ಯ ನಿತ್ಯತೃಪ್ತನು ನೀನು 2ಕೋಟಿಸೂರ್ಯರ ಕಾಂತಿ ಮಿಗಿಲಾದವನಿಗೊಂದುಮೋಟು ದೀವಿಗೆ ಬೆಳಗೆ ಬೆಳಕಹುದೆ? ||ಸಾಟಿಗಾಣದಸಿರಿಉರದೊಳು ನೆಲಸಿರೆಪೋಟುಗಾಸನು ಎಂತು ಕಾಣಿಕೆಯಿಡಲಯ್ಯ 3ಹಾಸಿಗೆಯನು ನಿನಗೆ ಹಾಸುವೆನೆಂದರೆಶೇಷನ ಮೈಮೇಲೆ ಪವಡಿಸಿಹೆ ||ಬೀಸಣಿಕೆಯ ತಂದು ಬೀಸುವೆನೆಂದರೆಆಸಮೀರಣ ಚಾಮರವ ಬೀಸುತಿಹನೋ4ನಿತ್ಯಗುಣಾರ್ಣವ ನಿಜಸುಖ ಪರಿಪೂರ್ಣಸತ್ತು ಚಿತ್ತಾನಂದ ಸನಕಾದಿ ವಂದ್ಯ ||ಮುಕ್ತಿದಾಯಕ ನಮ್ಮಪುರಂದರವಿಠಲನುಭಕ್ತಿಪ್ರಿಯನು ಎಂದು ಭಜಿಸಿ ಕೊಂಡಾಡುವೆ 5
--------------
ಪುರಂದರದಾಸರು