ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕನಸನು ಕಂಡೆನು ಕೇಳೌ ಘನ ಶ್ರೀ ಗುರು ಬಂದು ಶಾಸ್ತ್ರ ತತ್ವವ ಪೇಳ್ದಂ ಮನಸಿನ ಸಂಶಯವಳಿಯಿಸಿ ತನಯಗೆ ರಾತ್ರಿಯೊಳು ತೋರಿದಂ ಸತ್ಪಥಮಂ ಕಂದ ಕನಸನು ಕಂಡೆನು ಕೇಳೌ ಶ್ರೀಗುರುಭರದಿಂ ತಾ ಬಂದೂ ಪ ತನಯನ ಸಂಶಯವಳಿಯಿಸಿ ಪರತರ ಗತಿಯನು ತಾ ಕೊಡುವ ಅ.ಪ ಶ್ರೀಹರಿ ಪೂಜೆಯು ಸ್ತೋತ್ರವು ಚಿಂತನೆ-ಶ್ರೀಹರಿಮಂತ್ರವನೂ ಶ್ರೀಹರಿ ಲಾಂಛನ ಧರಿಸುತ ಸಂತತ ವಿಠಲನ ಭಜಿಸೆಂದು 1 ಬಂಧುರದೇಗುಲ ವರಕ್ಷೇತ್ರದೊಳಾನಂದವನೋಡುತಲೀ ನಿಂದಿಹ ಪರಿಪರಿ ಸಾಧುವೈಷ್ಣವರಿಗೊಂದನೆಮಾಡೆಂದ 2 ಸತ್ಯಪ್ರಬಂಧವು ಅಷ್ಟಾಕ್ಷರಿಜಪತತ್ವ ಸುದ್ವಯಮಂತ್ರ ನಿತ್ಯಹೃದಯದೊಳು ಸೋಹಂಭಾವದಿ ಭಕ್ತಿಯೊಳ್ಬೆರೆಯೆಂದ 3 ವರಮಹದೇವನ ಪುರಶ್ರೀರಂಗನಚರಣವ ಗುರಿಮಾಡೀ ಮರೆಯದೆ ಧ್ಯಾನಿಸು ನಾನೇ ನಿನ್ನನು ಪೊರೆಯುವೆನೆಂತೆಂದ 4
--------------
ರಂಗದಾಸರು
ಊಟಕ್ಕೆ ಬಂದೆವು ನಾವು ನಿನ್ನ -ಕೋಟಲೆಗಳ ಬಿಟ್ಟು ಅಡಿಗೆ ಮಾಡಮ್ಮ ಪ.ಕತ್ತಲಕ್ಕುತಲಿವೆ ಕಣ್ಣು - ಬಲು -ಬತ್ತಿ ಬರುತಲಿವೆ ಕೈಕಾಲ ಜುಮ್ಮ ||ಹೊತ್ತು ಹೋಗಿಸಬೇಡವಮ್ಮ - ಒಂದು -ತುತ್ತನಾದರು ಮಾಡಿ ಇಕ್ಕುವುದು ಧರ್ಮ 1ಒಡಲೊಳಗುಸಿರಿಲ್ಲವಮ್ಮ - ಗಳಿಗೆ -ತಡವಾದರೀ ಪ್ರಾಣ ಉಳಿವುದಿಲ್ಲಮ್ಮ ||ನುಡಿಯು ಚಿತ್ತಕೆ ಬರಲಮ್ಮ - ಒಂದು -ಪಿಡಿ ಅಕ್ಕಿ ಅನ್ನದಿ ಕೀರ್ತಿ ಪಡೆಯಮ್ಮ........... 2ಹೊನ್ನರಾಶಿಗಳನು ಸುರಿಯೆ - ಕೋಟಿ -ಕನ್ನೆ ಧರಿತಿಯ ಧಾರೆಯನೆರೆಯೆ ||ಅನ್ನದಾನಕೆ ಇನ್ನು ಸರಿಯೆ - ನಮ್ಮ -ಚೆನ್ನ ಪುರಂದರವಿಠಲನೊಳ್ ಬೆರೆಯೆ........... 3
--------------
ಪುರಂದರದಾಸರು