ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದಿರೇಶನ ಪದದ್ವಂದ್ವಕಮಲ ಭಜಿಪ ಶ್ರೀ ಗುರುವರ ಭೂಪ ಪ. ಬಂದೆನು ನಿಮ್ಮ ಪದ ಸಂದರುಶನಕೀಗ ನೀಗಿರಿ ಭವರೋಗ ಅ.ಪ. ಬಂದವರಯೋಗ್ಯತೆ ಅರಿತಂಕಿತವೀವ | ಕರುಣಾಳುವೆ ದೇವ ನೊಂದೆನೀಗ ಈ ಅಜ್ಞಭವದಿ ಬಿದ್ದು | ಎಂದಿಗೆ ನಾ ಗೆದ್ದು ಇಂದಿರೇಶನ ಹೃತ್ಕಮಲದಲಿ ಕಾಂಬೆ | ಗುರುವೆ ತೋರೆಂಬೆ ಬಂದ ಬಂದ ಕಷ್ಟ ಹಿಂದು ಮಾಡಿ ಪೊರೆದು | ಕೃಪೆಗೈಯ್ಯಲಿ ಬೇಕಿಂದು 1 ಮುಖ ಕಮಲದಿ ಹೊರಡುವ ವಾಕ್ಸರಣಿಗಳು | ಗಂಗಾ ಪ್ರವಾಹಂಗಳು ಅಕಳಂಕದ ತತ್ವಾರ್ಥದಿ ನಾ ಮುಳುಗಿ | ದುರಿತದ ಭವನೀಗಿ ಸುಖ ಸಾರೂಪ್ಯದ ಮುಕುತಿ ಮಾರ್ಗ ಕಂಡೆ | ಭವ ತುಂಡೆ ಭಕುತಿ ಭಾಗ್ಯವ ನಿತ್ಯದಿ ಕರುಣಿಪುದು | ಸುಜ್ಞಾನವ ನೀಡುವುದು 2 ಇಳೆಯೊಳಿಲ್ಲ ಈ ಚರ್ಯೆ ತೋರುವವರು | ಉದ್ಧರಿಪರಿನ್ಯಾರು ಪರಿ ಕರುಣಿಪುದು | ನ್ಯಾಯವೆ ನೂಕುವುದು ಪೊಳಲೊಡೆಯನ ಪರಿಪರಿ ಮಹಿಮಾದಿಗಳ | ರೂಪ ಜಾಲಗಳ ತಿಳಿದಾನಂದಪಡುವ ಗುರುವರೇಣ್ಯ | ಪೊರೆಯ ಬೇಕೀಗೆನ್ನ 3 ಕರಿಗಿರಿ ನರಹರಿ ಪದಕಮಲಗಳನ್ನು | ಹೃದ್ವನಜದೊಳಿನ್ನು ಪರಿಪರಿ ಪೂಜಿಸಿ ಪರಮಾದರದಲ್ಲಿ | ಸಂಕರ್ಷಣನಲ್ಲಿ ಇರಿಸಿಹ ಮನವನು ನರರಿಗೆ ತೋರದಲೆ | ಚರಿಸುವ ಈ ಲೀಲೆ ಅರಿತು ಪೇಳೆ ಈ ಪಾಮರಳಿಗೆ ಅಳವೇ | ಆನಂದದಲಿರುವೆ 4 ತಂದೆ ಮುದ್ದು ಮೋಹನವಿಠಲ ದೇವ | ಹೃದ್ವನಜದಲಿ ಕಾವ ಸುಂದರ ಗೋಪಾಲಕೃಷ್ಣವಿಠ್ಠಲ ನಿಮ್ಮೊಳು | ರಮಿಸುವ ನಿತ್ಯದೊಳು ಮಂದಬುದ್ಧಿಗೆ ಇಂತು ಮತಿಯನಿತ್ತು | ಸಲಹಲಿ ಬೇಕಿಂತು ತಂದೆ ಧರೆಯೊಳು ಮತ್ತೊಬ್ಬರ ಕಾಣೆ | ಕಾಪಾಡಬೇಕೆನ್ನಾಣೆ 5
--------------
ಅಂಬಾಬಾಯಿ
ಕಲಿಯುಗದ ಮಹಿಮೆಯನು ಕಾಣಬೇಕಿಂತು ಪ.ಹರಿಸ್ಮರಣೆಯನು ಬಿಟ್ಟು ಹೀನರನೆ ಸ್ತುತಿಸುವರು |ಗುರುಹಿರಿಯರೊಳು ದೋಷವೆಣಿಸುತಿಹರು |ಪೊರೆದ ತಾಯ್ತಂದೆಗಳ ಮಾತ ಕೇಳದೆ ತಮ್ಮ |ತರುಣಿಯರ ನುಡಿಗಳನು ಲಾಲಿಸುತ್ತಿಹರು 1ಕಂಡುದನೆ ಹೇಳರು ಕಾಣದನೆ ಹೇಳುವರು |ಉಂಡ ಮನೆಗೆರಡನ್ನೆ ಎಣಿಸುತಿಹರು ||ಕೊಂಡಾಡಿ ಬೇಡಿದರೆ ಕೊಡರೊಂದು ರುವಿಯನ್ನು |ದಂಡಿಸುವರಿಂಗೆ ಧನಗಳನು ಕೊಡುತಿಹರು 2ಕಳ್ಳರೊಳು ಕಡುಸ್ನೇಹ ಸುಳ್ಳರೊಳು ಸೋಲುವರು |ಒಳ್ಳೆಯವರೊಡನೆ ವಂಚನೆ ಮಾಳ್ಪರು ||ಇಲ್ಲದ ಅನಾಥರಿಗೆ ಇದ್ದಷ್ಟು ತಾವ್ ಕೊಡರು |ಬಲ್ಲಿದವರಿಗೆ ಬಾಯ ಸವಿಯನುಣಿಸುವರು 3ಪಟ್ಟದರಸಿಯನಗಲಿ ಮೋಸದಲಿ ತಪ್ಪುವರು |ಕೊಟ್ಟ ಸಾಲವ ನುಂಗಿ ಕೊಡದಿಪ್ಪರು ||ಮುಟ್ಟಿ ಪರಹೆಣ್ಣಿಂಗೆ ಮೋಸದಲಿ ಕೂಡುವರು |ಬಿಟ್ಟು ಕುಲಸ್ವಾಮಿಯನು ಬಡದೈವಕೆರಗುವರು 4ಮಾಡಿದುಪಕಾರವನು ಮರೆತುಕಳೆವರು ಮತ್ತೆ |ಕೂಡಾಡಿ ಬೇಡುವರು ಕುಟಿಲತ್ವದಿಂದ ||ರೂಢಿಗೊಡೆಯನು ನಮ್ಮ ಪುರಂದರವಿಠಲನ |ಪಾಡಿ ಪೊಗಳುವರಿಂಗೆ ಭವಭಯಗಳಿಲ್ಲ 5
--------------
ಪುರಂದರದಾಸರು