ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂಥಾ ಬಾಲಕನಿವನು ಎಷ್ಟೆಂದ್ಹೇಳಲಿ ನಾನು ಪಂಥಗಾರಿಕೆಯಂಗ ಪರಮ ಪುರುಷರಂಗ ಅಂತವ ತಿಳಿಗುಡನು ಗೋಪೆಮ್ಮಾ ಪ ನೋಟಾವೇಟದಿ ನಲುವಾ ನಡೆಯಾಲೊಲ್ಲದೆ ನಿಲುವಾ ಸ್ಫೋಟ ಹೃದಯವಾಗುವ ಪರಿಯಂಜಿಸುವ ಮಗು ನೀಟ ಘಾತಪಾತಕನಮ್ಮಾಗೋಪೆಮ್ಮ ನಿತ್ಯ ಬೆಣ್ಣೆಯ ಸವಿದು ಕಾಟಕಾರವೆ ಭಂಡಾ ತುರುಗಾವರೋಳು ಪುಂಡಾ ಆಟಕೆ ಗುಣವೇನ ಗೋಪೆಮ್ಮಾ 1 ನಯ ಮಾತಿಲಿ ಬರುವಾ ನೋಡಲು ಕಠಿಣಿರುವಾ ತಾಯಡಬಲ ನೋಡಾ ತರುಣಿಯರನ ಬಿಡಾ ಬಾಯಾದೆರೆದು ಬೇಡವಾ ಗೋಪೆಮ್ಮಾ ತಾಯಿಂಗಂಜನು ನಿನಗೆ ತಡೆದುರೋಗವ ಹೊರಗೆ ಮಾಯಾಗಾರನೆ ಗೋವಾ ಮತಿಯ ಕಡುವನಿವ ಸಾಯಸ ಕಲಿಯಮ್ಮ ಗೋಪೆಮ್ಮಾ 2 ಇದರೇರಿ ಚಿನ್ನವರಾ ಇಕ್ಕಿ ಅಂಗವ ತೋರಾ ಕಾಲ ಕೆದರಿ ಪೊರೆವ ಬಾಲಾ ಅದ್ಭುತ ವಿಕ್ರಮನೆ ಗೋಪೆಮ್ಮಾ ಉದ ಧಿಗಂಜನು ಧುಮುಕಿ ಉಲುವಾ ಬುದ್ದಿಯ ಸೊಕಿ ಮುದದಿ ವಾಜಿರಿಸೇ ಮಹಿಪತಿಸುತ ಪ್ರಭು ಬುಧ ಜನರೊಲುವಂತೆ ಗೋಪೆಮ್ಮಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಧರಣೆಯನಾಳ್ವ ಪಾರ್ಥಿವರಿಂಗೆ ಪ್ರಜೆಗಳು ಬೇಡವಾಯ್ತು ವರಹದ ಮೇಲಣಾಸೆಯಿಂದ ರಹಿತರ ಬಡಿವುದಾಯ್ತು ಪ ರಾಜ್ಯಕೆ ದಂಡ ಹಾಕಿದರು ತೀರಿತೆಲ್ಲಿ ಪ್ರಜೆಗಳ ಬಾಳು ನಜರು ಕೊಡುವುದಾಯ್ತು ತೆರತೆರುವುದರಿಂದ ವರಹಕೊಂಡು ಬಂದು ಏರೆಯ ರೂಪಾಯಿಗಳನು ಎತ್ತಿ ದಂಡಿಗೆ ಕೊಡುವುದಾಯ್ತು 1 ಮತ್ತೆ ಸೇನಭೋಗರು ಶಿರಸ್ತೆದಾರರು ಸಾವಿರ ಸಾವಿರ ವೆತ್ತಿ ಜನಕೆ ಬೆದುಕಮಾಳ್ವ ಕರಣಿಕರಿಗೆ ಪತ್ತು ನೂರು ಮೂರು ಸಾವಿರವೆಂದು ದಂಡವನುಕಟ್ಟಿ ವಿತ್ತವನ್ನು ಸೆಳೆದರದುವೆ ಬಿತ್ತು ಬೇರೆ ಪ್ರಜೆಗಳ ಮೇಲೆ 2 ಸೂಳೆ ಮಾಲೆಯರನು ಕರೆಸಿ ಜನಕೆ ಸಾವಿರದಂಡಕಟ್ಟಿ ಕೂಳತಿನಲು ಬಿಡದೆ ತರುಬಿವಾಲೆ ಮೂಗುತಿ ನಾಣ್ಯಗೊಂಡು ಬೀಳು ಕೊಟ್ಟು ಮನೆಗೆ ಅಂಗಡಿ ಸಾಲುವಳಿಗೆಯರನು ಕಾಲನಂತೆ ದಣಿಸಿ ರೊಕ್ಕದ ಜಾಳಿಗೆಯನು ಕೊಂಡು ಮೆರೆವ 3 ಸುಲಿಗೆಯಾಗ ದುಳಿಯಲಿಲ್ಲ ಬೆಳೆದ ಬೆಳೆಯ ನುಣ್ಣಲಿಲ್ಲ ಹೊಳಲ ಸುಟ್ಟು ಬಿಟ್ಟುದೆಲ್ಲ ಕುಲಕೆ ಪಶುಗಳುಳಿಯಲಿಲ್ಲ ತಲೆಯ ಚಂಬುಹಾರಿತಲ್ಲ ಜನರು ಸತ್ತು ಹೋದುದೆಲ್ಲ ಮಲೆತ ರಿಪುಗಳನ್ನು ಕುಟ್ಟಿ ಪ್ರಜೆಗಳ ಕಾಯ್ದು ಕೊಳ್ಳಲಿಲ್ಲ 4 ತಿರುಕರಿಂಗೆ ಸುಖಿಗಳಿಂಗೆ ಹರುವೆ ಸೊಪ್ಪುಮಾರ್ವರಿಂಗೆ ತರುಣಿಯರನು ಬಿಟ್ಟು ತಲೆಯ ಹೆರೆಸಿ ಕೊಂಡಲೆಗಳರಿಂಗೆಗೆ ಹಿರಿದು ಕಿರಿದು ಎಂದು ಬಿಡದೆ ಮರುತ ಸುತನ ಕೋಣೆಲಕ್ಷ್ಮಿ ಯರಸ ರುದ್ರರೂಪಧರಿಸಿ ಜನರಿಗಿನಿತು ಮಾಡಿದ 5
--------------
ಕವಿ ಪರಮದೇವದಾಸರು
ಮೋಸ ಹೋದೆನಯ್ಯ ಕೃಷ್ಣ ಮೋಸ ಹೋದೆನಯ್ಯಾ ಪ ಈಸು ಸುಲಭನೆಂದು ಪೇಳಿ ದೂರ ಸರಿವೆಯೇಕಯ್ಯ ಇಷ್ಟವಿಲ್ಲವೇ ನಾನು ನಿನಗೆ ಬೇಡವಾದೆನೇ ಅ.ಪ ಉಡಲು ನಿನ್ನವೆಲ್ಲಾವೆಂದು ಸುಳ್ಳು ಹೇಳಿತೇ ವೇದ ಕಡಲು ದಾಟಲು ಬೇರೆ ದಾರಿಯಿಲ್ಲವಯ್ಯ ಒಡಲು ನನ್ನದಾಗಿ ನೊಂದ ನನ್ನ ಕೂಡಯ್ಯ ಒಡೆಯಶೆಲ್ವರಾಯ ಕೂಡಿಕೊಳ್ಳೊ ಅಯ್ಯ1
--------------
ಸಂಪತ್ತಯ್ಯಂಗಾರ್