ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉಂಬುವ ಬನ್ನಿರೋ ಅನಂದದೂಟವ ಹಂಬಲಿಸಿ ಸವಿದು ತುತ್ತು ಕೊಂಬ ಬನ್ನಿರೋ ಧ್ರುವ ಬಡಿಸಿಹಿದು ನೋಡಿ ಅನೇಕ ಪರಿಯಲಿ ಎಡಬಲಕೆ ನೋಡಲಾಗದಾನಂದ ಘನಲೀಲೆ 1 ಇಡಿದು ತುಂಬಿದೇ ನಿಧಾನದೂಟವು ನೋಡಲಿಕ್ಕೆ ತೃಪ್ತಿಗೈಸುತಿಹುದು ನೋಟವು 2 ಬೇಡಿಸಿಕೊಳ್ಳದೆ ಬಡಸುತಿಹ್ಯನು ಮೂಢ ಮಹಿಪತಿ ಒಡೆಯ ಭಾನುಕೋಟಿತೇಜನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಡದೆ ಬೇಡದೆ ಕಂಗೆಡದೆ ಕೋ ಮನವೆ ನಿಜ ಸುಭಿಕ್ಷ ಗುರು ಸಂರಕ್ಷ ಧ್ರುವ ಅಳುಕದೆ ಬಳುಕದೆ ತುಳುಕದೆ ನಿಂದು ತಿಳಕೊ ನಿಜಸುಭಿಕ್ಷೆ ಕೊಳಕ ಹುಳಕ ಮೊಳಕನೆಂದು ಮಾಡದಿರುಪೇಕ್ಷ ನಾಳೆ ನಾಡದಿಂದ್ಯಾಗೆಂದು ಕಲ್ಪಿಸಿಕೊಬ್ಯಾಡಪೇಕ್ಷ 1 ಲಜ್ಜೆ ಅಳಿದು ಗುರು ಶರಣವ ಹೊಕ್ಕು ಸರಕ್ಕನೆ ಕೋ ಸುಭಿಕ್ಷೆ ಹೆಜ್ಜೆಜ್ಜಿಗೆ ಸುರಿಮಳೆಗರೆವುತಲದೆ ಗುರುಕರುಣದಕಟಾಕ್ಷ ಫಜ್ಜಿಗೆ ಬಂದುವರಿತ ಮ್ಯಾಲೆ ಕಂಜನಾಭನೆ ಸುಪಕ್ಷ 2 ಬೇಡಿಸಿಕೊಳ್ಳದೆ ನೀಡುತಲಾನೆ ಭಾಸ್ಕರ ಗುರು ಸಮರ್ಥ ನೀಡಿ ನಿಜನಿಧಾನವ ಕೊಟ್ಟು ಮಾಡುತಲಾನೆ ಹಿತಾರ್ಥ ಬಡವರಾಧಾರೆನ್ನೊಡೆಯನೆ ಜಗತ್ರಯಕ್ಕೊಬ್ಬನೆ ಕರ್ತ ಮೂಢ ಮಹಿಪತಿಗನುದಿನ ಬಿಡದೆ ನೀಡುತಾನೆ ಸಕಲಾರ್ಥ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುರಾಯನಂಥ ಕರುಣಾಳು ಕಾಣೆನು ಜಗದೊಳಗೆ ಪ ಏನೆಂದರಿಯದ ಪಾಮರ ನಾನು | ತಾನೊಲಿದೀಗೆನ್ನ ನುದ್ಧರಿಸಿದನು1 ತನ್ನನುಭವ ನಿಜ ಮಾತಿನ ಗುಟ್ಟು | ಎನ್ನೊಳುಸುರಿ ಘನ ತೋರಿಸಿ ಕೊಟ್ಟು | ಧನ್ಯನ ಮಾಡಿದಸೇವೆಯಲಿಟ್ಟು 2 ಮಾಡುವ ಘನ ತುಸು ತಪ್ಪನೆ ಹಿಡಿಯಾ | ಬೇಡಿಸಿಕೊಳ್ಳದೆ ನೀಡುತ ಪಡಿಯಾ | ರೂಢಿಗಾದನು ಇಹಪರದೊಡೆಯಾ3 ತನ್ನವನೆನಿಸಿದ ಮಾತಿಗೆ ಕೂಡಿ | ಮನ್ನಣೆಯಿತ್ತನು ಅಭಯವ ನೀಡಿ | ಇನ್ನೇನ ಹೇಳಲಿ ಸುಖ ನೋಡಿ4 ತಂದೆ ತಾಯಿ ಬಂಧು ಬಳಗೆನಗಾಗಿ | ನಿಂದೆ ಸದ್ಗುರು ಮಹೀಪತಿ ಮಹಾಯೋಗಿ | ಕಂದನ ಸಲಹುವ ಲೇಸಾಗಿ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು