ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನ ಮರೆದೆನೊ ರಂಗ ನಿನ್ನ ಮರೆದೆ ಅನ್ಯರನ್ನಕೆ ಸಿಲುಕಿ ಅನುಗಾಲ ಮರುಳಾಗಿ ಪ ಊಟಕ್ಕೆ ಬರುವಲ್ಲಿ ತನುವುಬ್ಬಿ ಎನ್ನ ಮನ ನಾಟುವುದು ಅವರ ಕಡೆ ಅನುರಾಗದಿ ನೀಟಾದ ಭೋಜನವ ಬಯಸುವೆನು ಯಮರಾಯ ಭಂಗ ಕೇಳಿ ಎಚ್ಚರಿಯದಲೆ1 ಮತ್ತೆ ಕರೆಯಲು ಬರಲು ಉತ್ಸವ ಪಿಡಿಯಲೊಶವೆ ಹೊತ್ತು ಹೊತ್ತಿಗೆ ಅವರ ಕೊಂಡಾಡುತ ಹೆತ್ತವರಿಗಿಂತಲೂ ಅಧಿಕ ನಮಸ್ಕರಿಸುವೆನು ಚಿತ್ತಜನಪಿತ ನಿನ್ನ ಸ್ತೋತ್ರ ಪಠಿಸದಲೆ2 ಎಡೆಯ ಮುಂದೆ ಕುಳಿತು ಎಲ್ಲ ಕಾಲಗಳಿಂದ ಬಿಡದೆ ಮಾಡಿದ ಪುಣ್ಯಪಾಪಗಳೆದು ಎಡಬಲದವರ ಪಙÉ್ತ ನೋಡಿಕೊಳ್ಳುತ ದುಃಖ ಪಡುವೆನೋ ಎನಗಿಷ್ಟು ಕಡಿಮೆ ಹಾಕಿದರೆಂದು3 ಅನ್ನವಿತ್ತವನ ಪಾಪಗಳು ನಿರಂತರದಿ ಅನ್ನದಾಶ್ರಯ ಮಾಡಿಕೊಂಡಿಪ್ಪವು ಚೆನ್ನಾಗಿ ತಿಳಿಯದಲೆ ಚಾತುರ್ಯದಿಂದಲಿ ಧನ್ಯನಾದೆನು ನಾನು ಪರರ ಪಾಪವ ಭುಜಿಸಿ 4 ಒಬ್ಬರೆಡೆ ನೋಡಿಕೊಳಲಧಿಕವಾಗಿದ್ದರೆ ಉಬ್ಬುವೆನು ಊರು ಕೇರಿ ಹಿಡಿಸದಂತೆ ಸುಬ್ಬನ ಸೂರೆಯಂತೆ ಪರರ ಅನ್ನವನುಂಡು ಮೊಬ್ಬಿನಲಿ ದಿನಗಳೆದೆ ದೀನ ಮನಸಿನಲಿ 5 ಒಡಲಿಗೆ ಬಿದ್ದರಸ ಮೂರು ಭಾಗಗಳಾಗಿ ಕಡೆಗೆ ಪೋಗುವುದೊಂದು ನಿಲುವುದೊಂದು ತಡೆಯದಲೆ ಸಂತಾನ ಪಡೆವುದೊಂದೀತೆರ ಕಡೆಗಾಣಲಿಲ್ಲ ಪರರಲಿ ಉಂಡ ಋಣಕೆ6 ಆವಾವ ಬಗೆರುಚಿ ಜಿಹ್ವಗೆ ತೋರುತಿದೆ ಆವಾವ ಬಗೆ ನರಕ ಬೇರೆಯುಂಟು ಮಣಿ ಸರ್ವೇಶ ವಿಜಯವಿಠ್ಠಲ ಸ್ವಾಮಿ ಈ ಜೀವ ಹಿತವಾಗುವಂತೆ ಮಾರ್ಗವ ತೋರು 7
--------------
ವಿಜಯದಾಸ
ಯಾತರವ ನಾನೈಯ ಇಂದಿರೇಶ ಪ ಹೋತನ ಕೊರಳೊಳಗೆ ಮೊಲೆಯಿರ್ಪ ತೆರದಲಿ ಅ.ಪ ಗ್ರಾಸಕ್ಕಲ್ಲದೆ ನಾನು ದೇಶ ದೇಶಕೆ ಪೋಗಿ ವಾಸಪಗೆ ಸಮರೆಂದು ದೋಶಿಗಳ ಪೊಗಳೀ ಕಾಸುಗಳಿಸಲು ದಾಸ ವೇಷ ಹಾಕಿದ ಶೂರ ಏಸು ಜನ್ಮವು ಕಳಿಯೆ ನಾಶವಾಗದೊ ಆಶೆ 1 ನೇಮ ನಿಷ್ಠೆಗಳಾಟ ಪರರಿಗೋಸುಗ ಹೂಡಿ ಕೋಮಲಾಂಗಿಯರ ಮನ ಮೆಚ್ಚಿಸುತ ಜಗದೊಳಗೆ ಹೇಮದಾಶೆಗೆ ಸೂಳೆ ಪ್ರೇಮವನ್ನು ತೋರ್ಪಂತೆ ನಾಮಸವಿಯುಣ್ಣದೆಲೆ ಗಾಯನವ ಮಾಡುವೆನು 2 ವ್ಯಾಸಕೂಟದಿ ಬೇರೆ ದಾಸಕೂಟವು ಎಂಬ ದೋಷವಾದವ ಮಾಡಿ ವ್ಯಾಸದಾಸರ ದ್ರೋಹ ಗ್ರಾಸವಾದೆನು ನಾನು ಶಾಸ್ತ್ರವಾಹುದೆ ಬೇರೆ ಭಾಷೆ ಬೇರೆಯು ಆಗೆ ಶ್ರೀಶ ಹರಿಸೋ ಇದನು 3 ಮಾನವರ ಬಹುಮಾನ ಸಾನುರಾಗದಿ ಬಯಸಿ ನಾನು ಮೋದಿಸುವೆ ಹೀನ ಮತಗಳ ಹುಳುಕು ಪ್ರಾಣಪತಿಮತ ಮೇಲ್ಮೆಗಾನಮಾಡೆನು ದೃಢದಿ ಸ್ವಾನುಸಂಧಾನ ವಹೀನ ಜ್ಞಾನಿಯೊ ನಾನು4 ಖ್ಯಾತಿ ಜೀವನಕಾಗಿ ಶಾಸ್ತ್ರವೋದಿದ ಮೂಢ ನೀತಿ ಪೇಳುವೆ ಜನಕೆ ನೀತಿತೆರನಾನಡಿಯೆ ನಿತ್ಯ ನೇಮವುಯನಗೆ ಈತರದ ಹರಿದಾಸ ಮಾತರಿಶ್ವಗೆ ದೂರ 5 ದಾನ ಧರ್ಮಗಳಿಲ್ಲ ಮೌನ ಜಪ ತಪವಿಲ್ಲ ಹೀನಗುಣ ಬಿಡಲಿಲ್ಲ ನಾನುಯೆಂಬುವೆನಲ್ಲ ಸೊಲ್ಲು ಏನು ಬಿಡೆದಿಹೆನಲ್ಲ ನಿನ್ನ ನಂಬಿಹೆನಲ್ಲ ನೀನು ಬಿಡೆ ಮದ್ದಿಲ್ಲ6 ಇಂತುಟಾದರು ಮೆರೆವೆ ಹಂತ ನಿನ್ನಯ ಕೃಪೆಯೊ ಯೆಂತು ಪೇಳಲಿ ಜೀಯ ಸಂತ ಜಯಮುನಿ ವಾಯುವಂತರದಿ ನಲಿವಂಥ “ಶ್ರೀ ಕೃಷ್ಣವಿಠಲ”ನೆ ನಿನ್ನಂಥ ದೊರೆಯಿಲ್ಲ ಸರ್ವೋತ್ತಮನೆ ಶರಣೈಯ7
--------------
ಕೃಷ್ಣವಿಠಲದಾಸರು
ಮದ್ದಿನ ಹವಾಯಿ ನೀನೋಡುಬಗಳಮದ್ದಿನ ಹವಾಯಿ ನೀನೋಡುಮದ್ದಿನ ಹವಾಯಿ ಹೃದಯ ಬಯಲಲ್ಲದೆಎದ್ದಿರು ಚತುಷ್ಟ ತನುವಿಗೆ ಬೇರೆಯುಪತೂರ್ವುತಲಿದೆ ಬಿರಿಸಾಕಾಶದ ತುದಿಗೇರ್ವುತಲಿದೆಅಂಬರಬಾಣಬೀರ್ವುತಲಿದೆ ಚಕ್ರದ ಕಿಡಿಯಗಲಕೆಜಾರ್ವುತಲಿದೆ ಅಜ್ಞಾನದಖೂನ1ಗಡಿಗ ಬಾಣದ ಗತಿಯನೆನೋಡುಗಜುಗಿಂಗಳ ಕಾಯಬ್ಬರವಗಿಡುಗಳು ಹಾರ್ವವು ಜಿನಿಸು ಜಿನಿಸುಗಳುಭಡಲ್ ಭಡಲ್ಲಿಹ ಸಪ್ಪಳವು2ಅಂತರ ದೌಸು ಸರಬತ್ತಿಗಳುಅಗಸೆಯ ಹೂವಿನ ಅಚ್ಚರಿಯಕಂತುಕ ಪೆಟಲವು ಮುತ್ತಿ ಸೇ-ವಂತಿಗೆ ಕವಳೆಯ ಹೂವಿನ ಸುರಿಮಳೆಯು3ಕೋಳಿಯು ಮುಳುಗುತಲೇಳುತಲಿರುತಿರೆಕೋಣ ಆನೆಗಳ ಕಾದಾಟಬಾಳೆಯ ಗೊನೆಗಳು ಬೆಳ್ಳಿಯ ಚುಕ್ಕೆಯುಬೆಳ್ಳನೆ ಜ್ಯೋತಿಯ ಕಡಕದಾಟ4ನಿನ್ನ ಕಾಂತಿ ಇವು ನೀನೇ ನೋಡುತಲಿರುತನ್ಮಯ ದೃಷ್ಟಿಯನಿಟ್ಟುಚೆನ್ನ ಚಿದಾನಂದ ಬಗಳೆ ನೀ ಸಾಕ್ಷಿಯಿರೆ ಚೈ-ತನ್ಯಾತ್ಮಕ ಶುದ್ಧನವ5ಸೂಚನೆ :ದೀಪಾವಳಿ ಮುಂತಾದ ಸಂದರ್ಭಗಳಲ್ಲಿ ಹಾರಿಸುವ ಮದ್ದಿನ ವಸ್ತುಗಳ ಬೆಳಕಿಗೆ ದೇವಿಯನ್ನು ಹೋಲಿಸಿದ್ದಾಗಿದೆ. ಇದರಲ್ಲಿ ಬಂದಿರುವಕೆಲವು ಮದ್ದಿನ ಪದಾರ್ಥಗಳ ಹೆಸರುಗಳು ಆಗಿನ ಕಾಲದವು.
--------------
ಚಿದಾನಂದ ಅವಧೂತರು