ರಂಗಬಾರನ್ಯಾತಕೆ ಸಖಿಯೆ ಮುದ್ದು ಪ
ಶರಧಿಯ ಪೊಕ್ಕನೇನೆ ಸುರರೆಲ್ಲರು ಕೂಡಿ
ಗಿರಿಯ ಬೆನ್ನಾಲಿ ಅವರು ಪೊರಿಸಿದರೇನೆ 1
ಧರೆಯನೆತ್ತಲು ಪೋಗಿ ನರಹರಿಯಾದನೇನೇ
ಗರುವರಹಿತ ಬ್ರಹ್ಮಚಾರಿಯಾದನೇನು 2
ಪರಶುಪಿಡಿದು ಕ್ಷತ್ರಿಯರ ಸವರುವೆನೆಂದು
ಗಿರಿವನಗಳಲಿ ತಾನು ಚರಿಸುತಲಿಹನೇನೇ 3
ಸ್ಮರನ ಪಿತನು ತಾನು ನಾರಿ ಪಾಂಚಾಲೆಯ
ಮೊರೆಯ ಕೇಳುತ ಭರದಿ ಸಾರಿದನೇನೆ 4
ಮಾನವ ತಾ ಸೂರೆಗೊಳ್ಳಲು ತೇಜಿ
ಏರಿ ಪೋದನೇನೆ ಶ್ರೀ ರಂಗೇಶವಿಠಲ 5