ಒಟ್ಟು 4 ಕಡೆಗಳಲ್ಲಿ , 2 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರತಿಯನೆತ್ತಿರೆಲ್ಲ ಆನಂದಗೆಆರತಿಯನೆತ್ತಿರೆಲ್ಲ ಸ್ವಾನಂದಗೆ ಪ ಸದನ ಸದನ ಬಿಟ್ಟಿಹಗೆತೋರುತಿಹ ಬ್ರಹ್ಮರಂಧ್ರ ತುರೀಯ ರೂಪಗೆ 1 ಕಣ್ಣಿನೊಳಗೆ ಕಣ್ಣು ತೆರೆದು ನಿರೀಕ್ಷಿಪಗೆಕಣ್ಣ ಬೊಂಬೆಯೊಳಗೆ ಕುಳಿತು ನೋಡುತಿಹಗೆಭಿನ್ನವಿಲ್ಲದ ಆನಂದ ಸುಖದಿ ರಮಿಸುತಿಹನಿಗೆಹೊನ್ನ ತಗಡಿನಂತೆ ಥಳಥಳಿಸುತಿಹಗೆ 2 ಉಕ್ಕುವ ತೇಜಗಳೆಲ್ಲ ತಾವೊಂದಾಗಿ ಕೂಡಿಮಿರು ಹರಿವ ಬೆಳದಿಂಗಳಂತೆಯಿಹಗೆಲೆಕ್ಕವಿಲ್ಲದಲೆಯುತಿಹ ಸುಖದ ರಾಶಿಗೆಮುಕ್ತಿ ಮೂರುತಿ ಶ್ರೀ ಚಿದಾನಂದ ಗುರುವಿಗೆ 3
--------------
ಚಿದಾನಂದ ಅವಧೂತರು
ಎರಿ ಮುಂಡೆ ಇವನೆರಿ ಮುಂಡೆ ಏನುಅರಿಯದೆ ಒದರುವ ಎರಿಮುಂಡೆ ಪ ತನ್ನ ನಿಜವ ತಾನು ಅರಿಯದೆ ತತ್ವದಕುನ್ನಿಯಂತೆ ಒದರುವ ಎರಿಮುಂಡೆಭಿನ್ನ ಬುದ್ಧಿಯಲಿದ್ದು ನಾ ಬ್ರಹ್ಮವೆಂಬುದನುಚೆನ್ನಾಗಿ ಅರಿಯದ ಎರಿಮುಂಡೆ 1 ಯೋಗವ ತಿಳಿಯದೆ ಯೋಗವ ಹಳಿವನುಈಗ ಹೇಳಿವನೀಗ ಎರಿಮುಂಡೆಆನಿಹೆ ಬ್ರಹ್ಮವು ನಾನೆಂದು ಎತ್ತೆತ್ತೆನುಡಿವನು ಎರಿಮುಂಡೆ 2 ಕೋಟಿ ಸೂರ್ಯರ ತೇಜ ಪಾಟಿಸಿ ಕಾಣದೆಬೂಟಕ ನುಡಿವವ ಎರಿಮುಂಡೆದಾಟಿ ಸಹಸ್ರಾರ ಬ್ರಹ್ಮರಂಧ್ರದ ನಾಳ ಕೇಳದ ನರನಾಗ ಎರಿಮುಂಡೆ 3 ಮಾತರಿಯದೆ ಜ್ಞಾನ ನುಡಿಯಿದ್ದುದಕಳೆದು ಮಣ್ಣು ಹೋಯ್ಯೆಂಬುವ ಎರಿಮುಂಡೆಮಾತಿಲಿ ಬ್ರಹ್ಮವು ಆಗಬೇಕಾದರೆ ಮಹಾಸಾಧನವೇಕೆ ಎರಿಮುಂಡೆ 4 ಒಂದು ಹೋಗಲಿಲ್ಲ ಒಂದೇ ನಾನೆಂಚಿನುಇಂದು ಕೇಳುವನೀಗ ಎರಿಮುಂಡೆಸುಂದರ ಚಿದಾನಂದ ಸ್ವರೂಪ ತಿಳಿಯದೆ ಸುಲಭ ಎಂದೆಂಬುವ ಎರಿಮುಂಡೆ 5
--------------
ಚಿದಾನಂದ ಅವಧೂತರು
ಜಯದೇವಿ ಜಯದೇವಿ ಜಯ ಬಗಳಾಮುಖಿಯೇಜಯವೆಂದು ಬೆಳಗುವೆನು ಜಯಭಕ್ತ ಸಖಿಯೇ ಪ ನಿತ್ಯ ಪೀತೋಪಚರಣೆಪೀತಕುಂಡಲ ಹಾರಪೀತ ವರ್ಗಾವರಣೆಪೀತಮೂರ್ತಿಯ ನೆನೆವೆ ಪೀತ ಪ್ರಿಯೆ ಸ್ಮರಣೆ 1 ಬತ್ತೀಸಾಯುಧ ಪಿಡಿದೆ ಭಯಂಕರಿ ಉಗ್ರೇಶತ್ರುನಾಶಕಿ ನೀನು ಭಕುತ ಸಾಹಸ್ರೇಮತ್ತೆ ಹುಡುಕುತ್ತಿರುವೆ ದುಷ್ಟರನು ಶೀಘ್ರೆನಿತ್ಯ ನಾ ಭಜಿಸುತಿಹೆ ಮನವ ಏಕಾಗ್ರೇ 2 ಬ್ರಹ್ಮ ಚಿದಾನಂದ ಬಗಳಾಮುಖಿ ರಾಣಿಹಮ್ಮಳಿದ ಮಹಿಮರಾ ಮೆಚ್ಚಿನ ಕಟ್ಟಾಣಿಬ್ರಹ್ಮರಂಧ್ರದೊಳು ವಾಸಿಸುತಿಹ ದಿನಮಣಿಬಿಮ್ಮನೆ ನಮಗೊಲಿಯೆ ಶೀಘ್ರದಿಂ ಕೃಪಾಣಿ 3
--------------
ಚಿದಾನಂದ ಅವಧೂತರು
ಜೋ ಜೋ ಜೋ ಜೋ ಜೋ ಎನ್ನ ಗುರುವೆ ಜೋ ಜೋ ಜೋ ನಿಜ ಕಲ್ಪತರುವೆ ಜೋ ಜೋ ಎಂದು ಜನ್ಮಕ್ಕೆ ಬರುವೆ | ಜೋ ಜೋ ನಿಮ್ಮ ಚರಣದಲ್ಲಿರುವೆ ಜೋ ಜೋ ಪ ಅಷ್ಟ ಸಿದ್ಧಿಗಳೆಲ್ಲ ಬಡ್ಡಿಯ ಕೊರೆಸಿ | ಗಟ್ಟ್ಯಾಗಿ ವೇದದ ಕಾಲವ ನಿಲ್ಲಿಸಿ ಅಷ್ಟತತ್ತ್ವದ ಹುರಿ ಹೆಣಿಕಿಲಿ ಬಿಗಿಸಿ | ತೊಟ್ಟಿಲೊಳರುವಿನ ಹಾಸಿಗೆ ಹಾಸೀ || ಜೋ ಜೋ 1 ಸಾಧನ ನಾಲ್ಕೆಂಬೋ ಹಗ್ಗವ ಹೊಸೆದು | ಬೋಧದ ಗಂಟು ತುದಿಯಲ್ಲಿ ಬಿಗಿದು | ನಾದ ಅನಾಹತ ಗಂಟೆಯ ಹೊಡೆದು | ಆದಿ ಗುರುವಿನ ಮಲಗಲಿ ಕರೆದು || ಜೋ ಜೋ || 2 ಕಾಲಿಗೆ ಯೋಗದ ಪಾಶವ ಕಟ್ಟಿ | ಮೂಲೈದು ಬ್ರಹ್ಮರಂಧ್ರಕ್ಕೆ ಮುಟ್ಟಿ | ಮೇಲಿನ ಜೋತೆಗೆ ಭಾಸದ ಬುಟ್ಟಿ | ಲೀಲೆಯಿಂದಲಿ ನೋಡು ಗುರುವಿನ ದೃಷ್ಟಿ || ಜೋ ಜೋ 3 ಮನಸೀಗೆ ಬಾರದ ಮಾತುಗಳಾಡಿ |ನೆನೆಹಿಗೆ ನಿಲ್ಕದ ನಿತ್ಯನ ಕೂಡಿ | ಕನಸು ಎಚ್ಚರದ ಗಾಢವ ನೋಡಿ |ಉನ್ಮನಿ ಬೆಳಗುವ ಮೂರ್ತಿಯ ಪಾಡಿ || ಜೋ ಜೋ 4 ಭಕ್ತಿ ವಿರಕ್ತಿಗೆ ಸಿಲ್ಕುವನೀತಾ | ಸತ್ಯ ಶರಣ್ಯ ಸದ್ಗುರು ನಾಥಾ | ಕರ್ತೃತ್ವ ಇಟ್ಟನು ಮೌನದಲ್ಲೀತಾ | ವೃತ್ತಿ ವಿರಹಿತ ಗಿರಿ ಪಾಲಿಸು ಗುರುತಾ || ಜೋ ಜೋ 5
--------------
ಭೀಮಾಶಂಕರ