ಒಟ್ಟು 5 ಕಡೆಗಳಲ್ಲಿ , 5 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉಗಾಭೋಗ ಮಾಡಿದೆ ಯಾಕೆ ಫಲಗಳ ಮೆದ್ದೆಯಾಕೆ ಒಕ್ಕುಡಿತೆ ಪಾಲ ಕುಡಿದೆಯಾಕೆ ಅವಲ ಮೆದ್ದೆಯಾಕೆ ಕುರೂಪಿ ಕುಬುಜೆಗೆ ಮನಸೋತೆಯಾಕೆ ಅಖಿಲಾಂಡಕೋಟಿ ಬ್ರಹ್ಮಾಂಡನಾಯಕನಾದವ ಪಾಂಡವರೋಲೆಕಾರನಾದೆಯಾಕೆ ನಿನಗಾಗಿ ನೀನು ಬವಣೆಪಡಲಿಲ್ಲವೊ ದೇವ ನಿನ್ನ ಭಕುತರ ಪೊರೆಯಲೋಸುಗವೆಂಬುದ ನಾ ಬಲ್ಲೆ ನಿನ್ನ ದಯಕೆಣೆಯುಂಟೆ ಎನ್ನಪ್ಪ ರಂಗೇಶವಿಠಲ
--------------
ರಂಗೇಶವಿಠಲದಾಸರು
ಕಾಯೊ ಕರುಣ ಕೃಪಾಳ ಸದ್ಗುರು ಘನಲೋಲ ದ್ರುವ ಎನ್ನಹೊಯಿಲ ನಿಮಗೆಂತು ಮುಟ್ಟುವದಾನಂತಗುಣಮಹಿಮೆ ಚಿಣ್ಣ ಕಿಂಕರನಾದ ಅಣುಗಿಂದತ್ತಲಿ ಹೀನ ದೀನ ನಾ ಪರಮ ಖೂನತಿಳಿಯಲು ನಿಮ್ಮ ಕೃಪಾಸಿಂಧು ನಿಮ್ಮ 1 ಅನಂತಕೋಟಿ ಬ್ರಹ್ಮಾಂಡನಾಯಕನೆಂದೊದರುತಿಹಾನಂತ ವೇದ ಅನಂತಾನಂತಾನಂತ ಮಹಿಮರು ಸ್ತುತಿಸುತಿಹರು ಸರ್ವದ ಗುಹ್ಯ ಅಗಾಧ ತಿಳಿಯದು ಮಹಿಮ್ಯಂಗುಷ್ಠದ 2 ಮಾಡುವರಾನಂದ ಘೋಷ ದೋರುವ ಹರುಷ ತಾ ಶೇಷ ಸುರಮುನಿ ಜನರೆಲ್ಲ ಚರಣಕಮಲಕೆ ಹಚ್ಚಿದರು ನಿಜಧ್ಯಾಸ ಸಿರಿಲೋಲ ನೀ ಸರ್ವೇಶ 3 ಸಕಲಾಗಮ ಪೂಜಿತ ಸದ್ಗುರು ಶ್ರೀನಾಥ ಕಾಮಪೂರಿತ ಕರುಣಾನಂದಮೂರುತಿ ಯೋಗಿಜನ ವಂದಿತ ಜನರಿಗೆ ಸಾಕ್ಷಾತ 4 ಸಲಹುವದೋ ನೀ ಶ್ರೀಹರಿಯೆ ನೀ ಎನ್ನ ಧೊರೆಯೆ ಮುರ ಅರಿಯೆ ಸಕಲಪೂರ್ಣಸಿರಿಯೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಕ್ಷತ್ರದಾರತಿ ಬೆಳಗೀರೇ ಜಗ ದ್ರಕ್ಷ ಕೃಪಾನಿಧೇ ಪಕ್ಷಿವಾಹನಗೆ ಪ ಪಕ್ಷಿಯು ತಾನಾಗಿ ಪ್ರಜ್ವಲಿಪಾ ಯಕ್ಷರಕ್ಷಕ ಸರ್ವಶಿಕ್ಷಾ ದಯಾಕರ ಲಕ್ಷ್ಮೀಪತಿಯಾದ ಮೋಕ್ಷದಾಯಕಗೇ 1 ಆದಿರೂಪನಿಗೆ ಆಧ್ಯಾತ್ಮನಾದವನಿಗೆ ಸಾಧುಶಿಖರನಾದ ಸರ್ವಸ್ವತಂತ್ರಗೆ ನಾದಬಿಂದು ಕಳೆಯೊಳಾಡುತಿರುವವಗೆ 2 ಅಖಿಳಾಂಡಕೋಟಿ ಬ್ರಹ್ಮಾಂಡನಾಯಕನಿಗೆ ಪ್ರಕಟಿತಮಾಗಿಹ ಪರತತ್ವಗೆ ಚಿಕಟಾಯಿಸಿದ ನಮ್ಮ ಗುರುವು ತುಲಸಿರಾಯಾ ಸಖನಾದ ಶಿವಗೆ ಶಂಕರಗೆ ಶ್ರೀಹರಿಗೆ 3
--------------
ಚನ್ನಪಟ್ಟಣದ ಅಹೋಬಲದಾಸರು
ಬ್ರಹ್ಮಾಂಡನಾಯಕನ ಪ ಕೆಂಜೆಯ ಮೇಲÉೂಪ್ಪುವ ಶಶಿ ಹಸ್ತದ ಸದ್ಯೋಜಾತ ಸ್ವಯುಂಭುವ 1 ಬೆರಳುಕದೊಳಕ್ಷಮಾಲೆಯ ವಾಮ ದೇವನ2 ಭ್ರೂಕುಟಿ ಮುಖದ ಭಯವರದ ಜಪಮಾಲೆ ಪಾಶಾಂಕುಶ ಸರ್ಪಾಭರಣದ ಘೋರನ 3 ಉಗ್ರಾಸನ ಉರಿಗಣ್ಣಿಂದು ಮೌಳಿಯ ತುತ್ಪುರುಷನ 4 ಖಡ್ವಾಂಗ ಢಮರುಗ ಕರದ ಕಪಾಲೇಂದು ಮೌಳಿಯ ಈಶಾನ್ಯನ 5 ಕಂಡೆನು ಉತ್ತರದೊಳ್ ವಾಮದೇವನ ಕಂಡೆನು 6 ಫಣಿ ಬಂಧಿವಿದ್ದ ಕೆಳದಿ ರಾಮೇಶನ 7
--------------
ಕವಿ ಪರಮದೇವದಾಸರು
ಶ್ರೀಕಾಂತನನ್ನೊಲಿಸುವಾ ಬಗೆಯಾನೊರೆವೆ ಮಾನವ ಪ. ಶ್ರೀಕರಗುಣಯುತ ಪಾಕಶಾಸನವಿನುತ ಲೋಕೈಕ ವೀರನನ್ನೊಲಿಸುವಾ ತೆರನ ಪೇಳ್ವೆನಾಲಿಸು ಅ.ಪ. ಶಕ್ತಿ ಸಾಹಸಗಳಿಗೆ ಸೋಲುವನಲ್ಲ ರಕ್ಕಸಾಂತಕಮಲ್ಲ ಯುಕ್ತಿಮಾರ್ಗಕೆ ಮನವ ಸಿಲುಕಿಪನಲ್ಲ ಭಕ್ತವತ್ಸಲ ಸಿರಿನಲ್ಲ ವಿತ್ತ ಮೂಲಕದಿಂದ ಚಿತ್ತ ಚಲಿಸುವುದಲ್ಲ ಮುಕ್ತಿದಾಯಕನ ಮೆಚ್ಚಿಸಲ್ ವಿರಕ್ತಿಯಿಂ ಫಲವಿಲ್ಲ [ಮತ್ತ] ಖಿಲಾಂಡಕೋಟಿ ಬ್ರಹ್ಮಾಂಡನಾಯಕನ ಮೆಚ್ಚಿಸಲ್ ಭಕ್ತಿಯೊಂದೇ ಉತ್ತಮೋಪಾಯ ಕೇಳೆಲೈ1 ದೃಢದಿ ಶೈಶವದೊಳೇ ಅಡವಿಯನಾರಯ್ಯುತೆ ಪೊಡವೀಶನಡಿಗಿತ್ತ ತೊಡವಾವುದದ ಪೇಳ್ ಕಡು ಭಕ್ತನಾ ವಿದುರ ಪಡೆದನಸುರಾರಿಯಾಲಿಂಗನದ ಸುಖಮಂ ಮಡದಿಮಣಿ ಪಾಂಚಾಲಿ ಪಡೆದಳಕ್ಷಯಪ್ರದಾನಮಂ ತಡೆಯೇನು ಪೇಳಾ ಪರಮಾತ್ಮನೊಲ್ಮೆಗಿನ್ನು ದೃಢಭಕ್ತಿಗಿಂ ಮಿಗಿಲು ತೊಡವಾವುದಿರ್ಪುದೈ 2 ದಾನವವಂಶದಲಿ ಜನಿಸಿದನಾ [ಸು]ಜ್ಞಾನಿ ಪ್ರಹ್ಲಾದನು ಸಾನುರಾಗದಿ ಹರಿಯ ಭಕ್ತಿಯಿಂ ಧ್ಯಾನಿಸೆ ಕಂಬದಿಂ ನುನಿಸಿಯಾಕ್ಷಣದಲ್ಲಿ ಮನುಜಕೇಸರಿಯಾಗಿ ಘನದಾಕೋಪವನು ತಾಳಿ ದನುಜನ ಉರವ ಸೀಳಿ ಮನ್ನಿಸುತೆ ಭಕ್ತನಂ ನನ್ನಿಯಿಂ ಮೈದಡಹಿ ಉನ್ನತೋನ್ನತ ಪದವನಿತ್ತನಾಖಲಕುಠಾರಿಶೌರಿ ಮುನ್ನ ಭಕ್ತಿಯಿದುವೇ ಮುಖ್ಯಸಾಧನ ಕೇಳೈ 3
--------------
ನಂಜನಗೂಡು ತಿರುಮಲಾಂಬಾ