(ಕುಮಟಾದಲ್ಲಿಯ ಶಾಂತೇರಿ ಕಾಮಾಕ್ಷಿ)
ಶಾಂತೇರಿ ಕಾಮಾಕ್ಷಿ ತಾಯೇ ಅ-
ನಂತಪರಾಧವ ಕ್ಷಮಿಸು ಮಹಮಾಯೇ ಪ.
ಸರ್ವಭೂತಹೃದಯಕಮಲ ನಿವಾಸಿನಿ
ಶರ್ವರೀಶಭೂಷೆ ಸಲಹು ಜಗದೀಶೆ1
ಮೂಲ ಪ್ರಕೃತಿ ನೀನೆ ಮುನಿದು ನಿಂತರೆನ್ನ
ಪಾಲಿಸುವವರ್ಯಾರು ಪರಮ ಪಾವನ್ನೆ2
ನಿನ್ನಾಧೀನವು ನಿಖಿಲ ಬ್ರಹ್ಮಾಂಡವು
ಮನ್ನಿಸು ಮಹಾದೇವಿ ಭಕ್ತಸಂಜೀವಿ3
ಗೋವೆಯಿಂದ ಬಂದೆ ಗೋವಿಂದಭಗಿನಿ
ಸೇವಕಜನರಿಂದ ಸೇವೆ ಕೈಕೊಂಬೆ4
ಪೃಥ್ವಿಗುತ್ತಮ ಕುಮಟಕ್ಷೇತ್ರನಿವಾಸಿನಿ
ಕರ್ತ ಲಕ್ಷ್ಮೀನಾರಾಯಣೀಕಲ್ಯಾಣಿ5